Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಇ-ಖಾತಾ ಪಡೆಯಲು ಸಹಾಯವಾಣಿ ಸ್ಥಾಪನೆ-ಜಿಲ್ಲಾಧಿಕಾರಿ ವೆಂಕಟೇಶ್

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ -ಖಾತಾ ಪಡೆಯದೇ ಇರುವ ಕಟ್ಟಡಗಳ ಮತ್ತು ನಿವೇಶನಗಳ ಮಾಲೀಕರು ನಗರಾಭಿವೃದ್ಧಿ ಇಲಾಖೆಯಿಂದ ನಿಯಮಾನುಸಾರ ಅವಕಾಶ ಕಲ್ಪಿಸಿಕೊಟ್ಟಂತೆ, ಮೂರು ತಿಂಗಳ ಒಳಗಾಗಿ ಅಂದರೆ 2025 ಮೇ 10ರೊಳಗೆ ಬಿರಿಜಿಸ್ಟರ್ನಲ್ಲಿ ನಮೂದಿಸಿಕೊಂಡು -ಖಾತಾ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ ನೀಡಿದ್ದಾರೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 110 ಅನ್ವಯ ರಿಜಿಸ್ಟರ್ನಲ್ಲಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾದ ಬಡಾವಣೆಯಲ್ಲಿನ ಸ್ವತ್ತುಗಳಿಗೆ -ಖಾತಾ ನೀಡಲಾಗುತ್ತದೆ.

ಆದರೆ, ಭೂ ಪರಿವರ್ತನೆ ಆಗದೇ ಉಪ-ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿದ್ದು, ಆದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ ಅಥವಾ ಕಟ್ಟಡಗಳಿಗೆ ಬಿರಿಜಿಸ್ಟರ್ನಲ್ಲಿ ನಮೂದಿಸಿಕೊಂಡು -ಖಾತಾ ನೀಡಲಾಗುತ್ತದೆ. ಅವಕಾಶವನ್ನು ಒಮ್ಮೆ ಮಾತ್ರ ನೀಡಲಾಗುತ್ತಿದ್ದು, ಕಟ್ಟಡ ನಿವೇಶನಗಳ ಮಾಲೀಕರು ಅವಕಾಶದ ಸದುಪಯೋಗ ಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.

 “ಬಿರಿಜಿಸ್ಟರ್ನಲ್ಲಿ ದಾಖಲಿಸುವ ಆಸ್ತಿಗಳಿಗೆ 2024-25ನೇ ಸಾಲಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ತದನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುತ್ತದೆ.  ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 106 ಕ್ಕೆ ತಿದ್ದುಪಡಿ ತರಲಾದಂತೆ ದಿನಾಂಕ: 10.09.2024 ರಿಂದ ಜಾರಿಗೆ ಬಂದಂತೆ  ತೆರಿಗೆಯನ್ನು ವಿಧಿಸಲಾಗುತ್ತದೆ.

ಬಿರಿಜಿಸ್ಟರ್ನಲ್ಲಿ ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು, ಸರ್ಕಾರದ ನಿಗಮ ಮಂಡಳಿಗಳ ಜಾಗಗಳು, ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಜಾಗಗಳು ಹೊರತುಪಡಿಸಿ ದಿನಾಂಕ: 10.09.2024 ಪೂರ್ವಕ್ಕೆ ನೋಂದಾಯಿತವಾದ ಭೂ ಪರಿವರ್ತನೆ ಆಗದೇ ಉಪ ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ, ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ, ಕಟ್ಟಡಗಳಿಗೆ ಬಿರಿಜಿಸ್ಟರ್ನಲ್ಲಿ ನಮೂದಿಸಿಕೊಂಡು -ಖಾತಾ ನೀಡಲಾಗುತ್ತದೆ.

ಆದುದರಿಂದ, ಇದುವರೆಗೆ -ಖಾತಾ ಪಡೆಯದ ಅಂತಹ ಎಲ್ಲಾ ಸ್ವತ್ತುಗಳ ಮಾಲೀಕರು ಕೂಡಲೇ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಪರ್ಕಿಸಿ ಅಥವಾ ಕಛೇರಿಗಳಿಂದ ಏರ್ಪಡಿಸಲಾಗುವ ವಾರ್ಡ್ವಾರು ಕ್ಯಾಂಪ್ಗಳಿಗೆ ಭೇಟಿ ನೀಡಿ ಬಿರಿಜಿಸ್ಟರ್ನಲ್ಲಿ -ಖಾತಾ ಪಡೆಯಲು ಅರ್ಜಿ ಸಲ್ಲಿಸಿ, ಸರ್ಕಾರ ನೀಡಿರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದ್ದಾರೆ.

 -ಖಾತಾಗೆ ಸಂಬಂಧಿಸಿದಂತೆ ಸಹಾಯವಾಣಿ ಸ್ಥಾಪಿಸಲಾಗಿದ್ದು, ಚಿತ್ರದುರ್ಗ ನಗರಸಭೆ-08194-222401, ಕೆ.ಕಿರಣ್ ಕುಮಾರ್-9606281164. ಚಳ್ಳಕೆರೆ ನಗರಸಭೆ-08195-200093, ಎಸ್.ವೀರಭದ್ರಪ್ಪ-8050551355. ಹಿರಿಯೂರು ನಗರಸ¨s-08193-296220, ಮಲ್ಲಿಕಾರ್ಜುನ ಸ್ವಾಮಿ-9620287514. ಹೊಸದುರ್ಗ ಪುರಸಭೆ- 08199-295095, ಎನ್.ವಿನಯ್-9353833372. ಹೊಳಲ್ಕೆರೆ ಪುರಸಭೆ-08191-275861, ಎಂ.ದೇವರಾಜ್-9845912244. ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ-08198-229044, ಎಲ್.ಹೆಚ್.ತಿಪ್ಪೇಸ್ವಾಮಿ-9845174196, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ-08190-200232, ಆರ್.ಸಂದೀಪ್-9606307100 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು