Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಸರ್ಕಾರಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆದೊಯ್ಯಲೂ ಹೆದರುವಂತಾಗಿದೆ

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ರೋಗಿಗಳನ್ನು ಕರೆದೊಯ್ಯಲೂ ಹೆದರುವಂತಾಗಿದೆ ಎಂದು ಬಿಜೆಪಿ ನಾಯಕ, ವಿಪ ಶಾಸಕ ಸಿ.ಟಿ.ರವಿ ಟೀಕಿಸಿದರು.


ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗಳಿಗೆ ಹೋದರೂ ಜೀವರಕ್ಷಕ ಔಷಧಿಗಳ ಕೊರತೆ ಇದೆ. ಜೀವ ಉಳಿಸಲು ಬೇಕಾದ ತುರ್ತು ಔಷಧಿಗಳನ್ನೂ ಹೊರಗಿನಿಂದ ತರುವ ಪರಿಸ್ಥಿತಿಗೆ ರೋಗಿಗಳು ತಲುಪಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಐವಿ ದ್ರಾವಣಗಳು, ಆ್ಯಂಟಿ ಬಯಾಟಿಕ್ ಔಷಧಗಳ ಕೊರತೆಯಿಂದಾಗಿ ರೋಗಿಗಳು ಪರದಾಡುತ್ತಿದ್ದಾರೆ. ಸ್ವತಃ ಸರ್ಕಾರಿ ವೈದ್ಯರ ಸಂಘದ ಪದಾಧಿಕಾರಿಗಳೇ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿರುವುದು ಸಿದ್ದರಾಮಯ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ.

ಸರ್ಕಾರದ ನಿರ್ಲಜ್ಜೆಯಿಂದ ರೈತರು ಬೀದಿಗೆ ಬಂದಾಯಿತು, ಗುತ್ತಿಗೆದಾರರು ಸಾಕ್ಷಿ ಸಮೇತ ಕಮಿಷನ್ ಆರೋಪ ಮಾಡಿಯಾಯಿತು, ಈಗ ರೋಗಿಗಳೂ ಈ ಅಸಮರ್ಥ ಸರ್ಕಾರಕ್ಕೆ ಹಿಡಿಶಾಪ ಹಾಕುವಂತಾಗಿದೆ. ಸರ್ಕಾರಕ್ಕೆ ಸ್ವಲ್ಪವಾದರೂ ಮಾನವೀಯತೆ ಇದ್ದರೆ, ತಕ್ಷಣವೇ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಕೆ ಸರಿಯಾಗುವಂತೆ ಮಾಡಬೇಕು ಎಂದು ಸಿ.ಟಿ ರವಿ ಆಗ್ರಹ ಮಾಡಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ