Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಗ್ರಾಮ ಪಂಚಾಯಿತಿಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮುಂಗಾರಿಗೆ ಕೃಷಿ ಸಿದ್ಧತೆಯನ್ನು ಮಾಡಿಕೊಳ್ಳಲು ರೈತರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಭಾರತ ಸರ್ಕಾರದ ನಿರ್ದೇಶನದ ಮೇರೆಗೆ ವಿಜ್ಞಾನಿಗಳ ನಡೆ ರೈತರ ಕಡೆ ಎಂಬ ದೈಯೋದ್ದೇಶದೊಂದಿಗೆ ಮೇ 26 ರಿಂದ ಜೂನ್ 12, 2025 ರವರೆಗೆ

ದೇಶಾದ್ಯಾಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ 2 ನೇ ದಿನದೊಂದು ಕೊಡಿಗೇಹಳ್ಳಿ ಗ್ರಾಮಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೃ.ವಿ.ವಿ., ಬೆಂಗಳೂರು, ವಿಸ್ತರಣಾ ನಿರ್ದೇಶಕರಾದ ಡಾ. ವೈ.ಎನ್. ಶಿವಲಿಂಗಯ್ಯ ಕಾರ್ಯಕ್ರಮ ಉದ್ಘಾಟಿಸಿ, ರೈತರನ್ನು ಉದ್ದೇಶಿಸಿ ಮಾತನಾಡಿ ರೈತರು ಬೆಳೆ ಪ್ರಾರಂಭ ಮಾಡುವ ಮುನ್ನ ಮಣ್ಣು ಪರೀಕ್ಷೆ ಮಾಡಿಸಿ, ಪರೀಕ್ಷೆ ಫಲಿತಾಂಶದ ಮೇಲೆ ಪೋಷಕಾಂಶಗಳನ್ನು ನೀಡುವುದು,

ರಾಗಿ ಬೆಳೆಯುವ ರೈತರು ಪೊಟ್ಯಾಶ್ ಗೊಬ್ಬರ ನೀಡದೆ ಕೇವಲ ಡಿ.ಎ.ಪಿ. ಮಾತ್ರ ಬಳಕೆ ಮಾಡುತ್ತಿರುವುದರಿಂದ ರಾಗಿ ಮತ್ತು ಇತರೆ ಬೆಳೆಗಳಲ್ಲಿ ಇಳುವರಿ ಕಡಿಮೆಯಾಗುತ್ತಿದೆ. ಈ ಅಭಿಯಾನದಲ್ಲಿ ವಿಜ್ಞಾನಿಗಳೇ ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ರೈತರಿಗೆ ವೈಜ್ಞಾನಿಕ ಬೇಸಾಯ ಕ್ರಮಗಳ ಮಾಹಿತಿಯನ್ನು ನೀಡಿ ಅವಶ್ಯಕತೆಯುಳ್ಳ ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳುತ್ತಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ವಿವಿಧ ಬೆಳೆಗಳಲ್ಲಿ ಉತ್ಪಾದನೆ ಮತ್ತು ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕೆಂದು ಕರೆ ನೀಡಿದರು.

ಡಾ. ಹನುಮಂತರಾಯ ಬಿ.ಜಿ., ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು ಕೆಲವು ವೈಜ್ಞಾನಿಕ ತಂತ್ರಜ್ಞಾನಗಳಾದ ಬೇವಿನ ಸೋಪು, ಹೊಂಗೆ ಸೋಪು, ಟ್ರೈಕೋಡರ್ಮಾ ಇನ್ನಿತರೆ ಜೈವಿಕ ಪೀಡೆನಾಶಕಗಳನ್ನು ಬಳಸುವುದರ ಬಗ್ಗೆ ಮಾಹಿತಿ ನೀಡಿದರು. ಡಾ. ವೀರನಾಗಪ್ಪ ಪಿ., ವಿಜ್ಞಾನಿ (ಮಣ್ಣು ವಿಜ್ಞಾನ) ಇವರು ಈ ತಂಡದ ಮುಖ್ಯಸ್ಥರಾಗಿ ಕಾರ್ಯಕ್ರಮದ ಉಸ್ತುವಾರಿ ವಹಿಸಿ, ಮಣ್ಣು ಪರೀಕ್ಷೆ, ವಿವಿಧ ಬೆಳೆಗಳಿಗೆ ಶಿಫಾರಿತ ರಸಗೊಬ್ಬರಗಳು, ಸೂಕ್ಷ್ಮ ಪೋಷಕಾಂಶಗಳು ಇನ್ನಿತರೆ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಶ್ರೀಮತಿ ಸೌಮ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿವಿಧ ವಿಜ್ಞಾನಿಗಳನ್ನೊಳಗೊಂಡ ಮೂರು ತಂಡಗಳು ಪ್ರತ್ಯೇಕವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಡಿಗೇಹಳ್ಳಿ, ಅರಳುಮಲ್ಲಿಗೆ, ಕೋಳೂರು, ಸಾಸಲು, ಆರೂಡಿ, ಬನವತಿ, ತೂಬಗೆರೆ ಮತ್ತು ಮೆಳೇಕೋಟೆ ಗ್ರಾಮ ಪಂಚಾಯಿತಿಗಳಲ್ಲಿ ರೈತರಿಗೆ ಮುಂಗಾರು ಹಂಗಾಮಿನಲ್ಲಿ ಹಮ್ಮಿಕೊಳ್ಳಬೇಕಾದ ಕೃಷಿ ಚಟುವಟಿಕೆಗಳ ಬಗ್ಗೆ ತಾಂತ್ರಿಕ ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ  ರೈತ ಸಮುದಾಯ ಹಾಗು ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿಗಳು ಸಿಬ್ಬಂದಿ ವರ್ಗ ಹಾಜರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು