Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​ಗೆ 14 ದಿನ ನ್ಯಾಯಾಂಗ ಬಂಧನ

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ/ಉತ್ತರ ಕನ್ನಡ:
2013ರ ಕಳಸಾ ಬಂಡೂರಿ ಹೋರಾಟದ ವೇಳೆ ರೈಲು ತಡೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ರೈತ ಮುಖಂಡ ಹಾಗೂ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಹುಬ್ಬಳ್ಳಿಯ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಚಿನ್ ಕುಮಾರ್ ಶಿವಪೂಜೆ ಅವರಮ್ಮುಮುಂದೆ ಆರೋಪಿಯನ್ನು ಹಾಜರುಪಡಿಸಲಾಯಿತು. ವಿಚಾರಣೆ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಜಾಮೀನು ಕೋರಿ ಮನವಿ ಮಾಡಿದರು.

Advertisement

ನ್ಯಾಯಾಧೀಶರಿಂದ ತರಾಟೆ: ಕೋಡಿಹಳ್ಳಿ ಚಂದ್ರಶೇಖರ್ ಅವರ ಮನವಿಯನ್ನು ಪರಿಗಣಿಸುವ ಮುನ್ನ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. "ಎಲ್ಲ ಹೋರಾಟಗಾರರನ್ನು ನ್ಯಾಯಾಲಯ ಗೌರವದಿಂದ ಕಾಣುತ್ತದೆ. ಅದರಂತೆ ಎಲ್ಲ ಹೋರಾಟಗಾರರು ಮೊದಲು ನ್ಯಾಯಾಲಯಕ್ಕೆ ಗೌರವ ನೀಡಬೇಕು. ಕಾನೂನಿಗೆ ಗೌರವ ನೀಡದವರು ಹೋರಾಟಗಾರರೇ ಅಲ್ಲ" ಎಂದು ಕಟುವಾಗಿ ನುಡಿದರು.

ಮುಂದುವರಿದು, "ನೀವು 2019ರಿಂದಲೂ ವಿಚಾರಣೆಗೆ ಹಾಜರಾಗಿಲ್ಲ. ಈಗ ಮತ್ತೆ ಜಾಮೀನು ನೀಡಿದರೆ ಮುಂದಿನ ಐದು ವರ್ಷಗಳ ಕಾಲ ಕೋರ್ಟ್​ಗೆ ಬರುವುದಿಲ್ಲವೇ?" ಎಂದು ಕೋಡಿಹಳ್ಳಿ ಅವರನ್ನು ತರಾಟೆಗೆ ತೆಗೆದುಕೊಂಡರು. ಅಂತಿಮವಾಗಿ ಜಾಮೀನು ತಿರಸ್ಕರಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದರು.

ಬಂಧನಕ್ಕೆ ಕಾರಣವೇನು?: ಸೋಮವಾರ ಬೆಳಗ್ಗೆ 10: ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ, ನಂತರ 11:30ಕ್ಕೆ ದಾಸನಕೊಪ್ಪದಲ್ಲಿ ರೈತರ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಕೋಡಿಹಳ್ಳಿ ಚಂದ್ರಶೇಖರ್ ಶಿರಸಿಗೆ ಆಗಮಿಸಿದ್ದರು. ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ 2013ರಲ್ಲಿ ಸುಮಾರು 6 ಗಂಟೆಗಳ ಕಾಲ ರೈಲುಗಳನ್ನು ತಡೆದು ನಡೆಸಿದ್ದ ಪ್ರತಿಭಟನೆಗೆ ಸಂಬಂಧಿಸಿದಂತೆ ಅವರ ವಿರುದ್ಧ ವಾರಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ರೈಲ್ವೆ ಪೊಲೀಸರು, ಶಿರಸಿ ಪೊಲೀಸರ ಸಹಕಾರದೊಂದಿಗೆ ಕೋಡಿಹಳ್ಳಿಯವರನ್ನು ಬಂಧಿಸಿದ್ದರು.

ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಕ್ರಿಯೆ: ನ್ಯಾಯಾಲಯದಿಂದ ಕಾರಾಗೃಹಕ್ಕೆ ಕೊಂಡೊಯ್ಯುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, "ಮಹದಾಯಿ ಮತ್ತು ಕಳಸಾ ಬಂಡೂರಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದೆವು. ನಾವು ರೈತರ ಪರವಾಗಿ ಧ್ವನಿ ಎತ್ತಿದ್ದೇವೆ. ಈಗ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ, ನಾವು ಇದರ ವಿರುದ್ಧ ಕಾನೂನಾತ್ಮಕ ಹೋರಾಟ ಮುಂದುವರಿಸುತ್ತೇವೆ" ಎಂದು ತಿಳಿಸಿದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಪ್ರಾಮಾಣಿಕತೆಗೆ ಸ್ಟಿಂಗ್ ಆಪರೇಶನ್ ಭಯವೇಕೆ?:ಮನಸ್ಸಿನ ಆರೋಗ್ಯಕ್ಕೆ ಅರಿವೇ ಮೊದಲ ಚಿಕಿತ್ಸೆ:ಮೈಸೂರು ದಸರಾ ಸಂಸ್ಕೃತಿ, ಪರಂಪರೆ, ವೈಭವ  ದೃಷ್ಟಿಕೋನ ಚಿಂತನೆ ಕಾರ್ಯಕ್ರಮ ಆಯೋಜನೆವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನಚಿತ್ರದುರ್ಗ ಜಿಲ್ಲೆಯ ರೈತರಿಗೆ ವಿಮಾ ಮೊತ್ತ ಶೀಘ್ರ ಬಿಡುಗಡೆಗೆ ಕೃಷಿ ಆಯುಕ್ತರಿಗೆ ಮನವಿ ಸಲ್ಲಿಸಿದ ಶಿವಲಿಂಗಪ್ಪಎನ್ ಡಿಎ ಅಭ್ಯರ್ಥಿ ಕೆ.ಎಂ ಸುರೇಶ್ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ಕೆ ಆಗುವುದು ನಿಶ್ಚಿತ-ಸಂಸದ ಕಾರಜೋಳದೇಶದ ಯುವಕರನ್ನು ದಾರಿ ತಪ್ಪಿಸುತ್ತಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿರಾಹುಲ್ ಗಾಂಧಿ ಪ್ರಧಾನಿಯಾಗಲು ಹುಚ್ಚರಂತೆ ಓಡಾಡುತ್ತಿದ್ದಾರೆ: ಸಂಸದ ಗೋವಿಂದ್ ಕಾರಜೋಳ ವಾಗ್ದಾಳಿಅನುಭವ ಮತ್ತು ಜ್ಞಾನ ಎರಡೂ ನನ್ನಲ್ಲಿಲ್ಲ- ಸಂಸದ ಗೋವಿಂದ್ ಕಾರಜೋಳ