Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಡಿಎಪಿ ಗೊಬ್ಬರಕ್ಕೆ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಲು ರೈತರಿಗೆ ಸಲಹೆ

ಚಂದ್ರವಳ್ಳಿ ನ್ಯೂಸ್, ವಿಜಯನಗರ(ಹೊಸಪೇಟೆ):
 ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು ಮುಂದಾಗಬೇಕು. ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ತಿಳಿಸಿದ್ದಾರೆ.

ಪ್ರಮುಖವಾಗಿ ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಶ್ ಹೆಚ್ಚಿನ ಪ್ರಮಾಣದಲ್ಲಿ ಬೇಕಾಗಿದ್ದು,  ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು ಹಾಗೂ  ಕಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ. ಕ್ಲೋರಿನ್ಮತ್ತುನಿ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘುಪೋಷಕಾಂಶಗಳೆಂದು ವಿಂಗಡಿಸಲಾಗಿದೆ.

ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ. ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಅಧಾರ. ಮಣ್ಣಿನಿಂದ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದೆ.

ರೈತರು ರಸಗೊಬ್ಬರಗಳನ್ನು ಬಳಸುವಾಗ ಕೆಲವು ಕ್ರಮಗಳನ್ನು ಅನುಸರಿಸಬೇಕಿದೆ. ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ..ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ.

ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ(ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊAದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ : ರಂಜಕ : ಪೊಟ್ಯಾಷ ರಸಗೊಬ್ಬರಗಳನ್ನು 4:2:1 ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ಜಿಲ್ಲೆಯಲ್ಲಿ 17:7:1 ಆಗಿರುತ್ತದೆ. ಆದ್ದರಿಂದ ರೈತರು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಮಾಡಲು ವಿನಂತಿಸಿದೆ.

ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ..ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10.26.26, 12:32:16, 17:17:17. 19:19:19, ಇತ್ಯಾದಿ ರಸಗೊಬ್ಬರಗಳನ್ನೂ ಸಹ ಬಳಸಬಹುದಾಗಿದೆ.

ಮಣ್ಣು ಪರೀಕ್ಷೆ ಆಧಾರದ ಮೇಲೆ ರಸಗೊಬ್ಬರಗಳನ್ನು ಬಳಸಬೇಕು. ಬೆಳೆಗಳಿಗೆ ಅವಶ್ಯಕ ಅವಧಿಯಲ್ಲಿ ರಸಗೊಬ್ಬರಗಳನ್ನು ಬಳಸುವುದು ಉತ್ತಮ. ಹೆಚ್ಚಿನ ಪ್ರಮಾಣದಲ್ಲಿ ಸಾವಯವ ಗೊಬ್ಬರಗಳನ್ನು ಬಳಸುವುದು ಸೂಕ್ತವಾಗಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು