Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕೃಷಿ ಪಂಪ್‌ ಸೆಟ್‌ ಆಧಾರ್ ಜೋಡಣೆ ಬೇಡ ರೈತರ ಒತ್ತಾಯ

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಜ್ಯ ಸರ್ಕಾರ ಬೆಳೆವಿಮೆಯೂ ಸೇರಿದಂತೆ ಹಲವಾರು ವಿಚಾರಗಳಲ್ಲಿ ರೈತರ ವಿರೋಧಿಧೋರಣೆ ತಾಳಿದೆ. ಕೈಗಾರಿಕಾ ವಲಯವೂ ಸೇರಿದಂತೆ ಎಲ್ಲಾ ವಲಯಕ್ಕೂ ಕೃಷಿ ಪೂರಕವಾಗಿದೆ.

ಕೃಷಿಯನ್ನು ಉತ್ತೇಜಿಸುವ ಯಾವುದೇ ಯೋಜನೆ ಸರ್ಕಾರದಲ್ಲಿ ಇಲ್ಲದಿದ್ದರೂ ಕೃಷಿಯನ್ನು ಸಂಪೂರ್ಣವಾಗಿ ನಾಶಮಾಡುವ ಹಲವಾರು ಯೋಜನೆಗಳ ಜಾರಿಗೆ ಸರ್ಕಾರ ಮುಂದಾಗಿರುವುದು ನೋವಿನ ಸಂಗತಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಪ್ರೊ.ಬಣ) ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿವೀರಣ್ಣ ಬೆಸ್ಕಾಂ ಇಲಾಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಅವರು, ಶುಕ್ರವಾರ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಬೆಸ್ಕಾಂ ಇಲಾಖೆ ಇತ್ತೀಚೆಗೆ ರೈತರ ಕೃಷಿ ಪಂಪ್‌ಸೆಟ್‌ಗಳ ಆರ್‌ಆರ್‌ನಂಗೆ ಆಧಾರ್ ಜೋಡಣೆ ಮಾಡುವ ಸೂಚನೆ ನೀಡಿದ್ದು, ಯಾವುದೇ ಲಿಖಿತ ಆದೇಶ ನೀಡದೆ ಕೇವಲ ಇಲಾಖೆಯ ಲೈನ್‌ಮ್ಯಾನ್‌ಗಳ ಮೂಲಕ ರೈತರಿಗೆ ಸಂದೇಶ ರವಾನಿಸುತ್ತಿದೆ. ಇದರಿಂದ ರೈತರಿಗೆ ಗಾಯದಮೇಲೆ ಬರೆಎಳೆದಂತಾಗುತ್ತದೆ. ಯಾವುದೇ ಕಾರಣಕ್ಕೂ ಕೃಷಿ ಪಂಪ್‌ಸೆಟ್‌ಗಳ ಆರ್‌ಆರ್‌ನಂಗೆ ಆಧಾರ್ ಜೋಡಣೆ ಮಾಡಬಾರದು ಎಂದು ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ. ಸರ್ಕಾರ ತನ್ನ ಮೊಂಡು ಧೋರಣೆ ಮುಂದುವರೆಸಿದರೆ ಬೀದಿಗಿಳಿದು ಹೋರಾಟ ನಡೆಸಲು ರೈತ ಸಂಘ ಹಿಂಜರಿಯದು ಎಂದು ಎಚ್ಚರಿಸಿದರು.

ರೈತ ಸಂಘದ ಮುಖಂಡ ಎಂ.ಎನ್.ಚನ್ನಕೇಶವಮೂರ್ತಿ ಮಾತನಾಡಿ, ಬೆಸ್ಕಾಂ ಇಲಾಖೆ ರೈತರನ್ನು ಹಗುರವಾಗಿ ಪರಿಗಣಿಸಿದ್ಧಾರೆ. ಬೆಸ್ಕಾಂ ಇಲಾಖೆಯ ಎಲ್ಲಾ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕಾರಣ, ರೈತ ಸಂಘ ಗಟ್ಟಿಯಾಗಿ ನೆಲೆಯೂರಿದೆ. ಕೆಲ ತಿಂಗಳ ಹಿಂದೆ ಬೆಸ್ಕಾಂ ಇಲಾಖೆ ವಿರುದ್ದ ಪ್ರತಿಭಟಿಸಿ ಯಶಸ್ವಿಯಾಗಿದ್ದೇವೆ. ರೈತರನ್ನು ಸಂಕಷ್ಟಕ್ಕೆ ದೂಡುವ ಹುನ್ನಾರದ ವಿರುದ್ದ ನಮ್ಮ ಹೋರಾಟ ಮುಂದುವರೆಯುವುದು ಎಂದರು.

ಕಿಸಾನ್‌ಸಭಾ ಜಿಲ್ಲಾಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ ಮಾತನಾಡಿ, ಬೆಸ್ಕಾಂ ಇಲಾಖೆಗೆ ರೈತರ ಬಗ್ಗೆ ಯಾವುದೇ ಕಾಳಜಿ ಇಲ್ಲವೆಂಬುವುದನ್ನು ತೋರಿದೆ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗುತ್ತಿಲ್ಲ, ರೈತನ ಬೆಳೆ ಜಮೀನಿನಲ್ಲಿರುವ ಸಂದರ್ಭದಲ್ಲಿ ನಿರಂತರವಾಗಿ ವಿದ್ಯುತ್ ಕೈಕೊಡುತ್ತಿದೆ. ಈ ಬಗ್ಗೆ ಇಲಾಖೆ ಸಿಬ್ಬಂದಿಯನ್ನು ಪ್ರಶ್ನಿಸಿದರೆ ಏನು ಉತ್ತರ ನೀಡುವುದಿಲ್ಲ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳು ಮೌನವಾಗಿದ್ಧಾರೆ. ರೈತರನ್ನು ರಕ್ಷಿಸುವ ಬದಲು ಶಿಕ್ಷಿಸಲಾಗುತ್ತಿದೆ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಬೆಸ್ಕಾಂ ಎಇಇ ಜಿ.ಶಿವಪ್ರಸಾದ್, ಕೃಷಿ ಪಂಪ್‌ಸೆಟ್‌ಗಳ ಆರ್‌ಆರ್‌ನಂಗೆ ಆಧಾರ್ ಜೋಡಣೆ ವಿರುದ್ದ ತಾವು ಪ್ರತಿಭಟಿಸಿ ಮನವಿ ನೀಡಿದ್ದೀರ, ನಿಮ್ಮ ಮನವಿಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರುವ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ಕೆ.ಸಿ.ಶ್ರೀಕಂಠಮೂರ್ತಿ, ಪ್ರಧಾನ ಕಾರ್ಯದರ್ಶಿ ಆರ್.ಬಸವರಾಜ, ಜಿಲ್ಳಾ ಕಾರ್ಯದರ್ಶಿ ಪಾತಪ್ಪರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಹಿರೇಹಳ್ಳಿಯರ್ರಿಸ್ವಾಮಿ, ಗೌಡ್ರಚಿಕ್ಕಣ್ಣ, ಬೋರಮ್ಮ, ಬುಡ್ನಹಟ್ಟಿತಿಪ್ಪೇಸ್ವಾಮಿ, ನರಸಿಂಹಪ್ಪ, ಬಿ.ಜಯಣ್ಣ ಮುಂತಾದವರು ಭಾಗವಹಿಸಿದ್ದರು. 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು