Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಸಾಮಾಜಿಕ ಜಾಲತಾಣ ದುರ್ಬಳಕೆ, 28 ರೌಡಿ ಶೀಟರ್ ಗಳ ಮೇಲೆ ಎಫ್ಐಆರ್ ದಾಖಲು

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಹವಾ ಸೃಷ್ಟಿ ಮಾಡುತ್ತಿದ್ದ 28 ರೌಡಿಶೀಟರ್​ಗಳ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.


ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್​.ಶಶಿಕುಮಾರ್​ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನಗರದಲ್ಲಿ ರೌಡಿಶೀಟರ್ ಚಟುವಟಿಕೆ ನಡೆಸುವವರ ಮೇಲೆ ನಿರಂತರ ಕ್ರಮ ವಹಿಸಿದ್ದೇವೆ. 1,700 ರೌಡಿಗಳನ್ನು ಎ, ಬಿ, ಸಿ ವರ್ಗ ಮಾಡಿ ಕ್ರಮ ಕೈಗೊಳ್ಳುತ್ತಾ ಬಂದಿದ್ದೇವೆ. 1,158 ಜನರ ಮೇಲೆ ಮುಂಜಾಗ್ರತಾ ಕ್ರಮವಾಗಿ ಬಾಂಡ್ ಬರೆಸಿಕೊಂಡಿದ್ದೇವೆ. 52 ರೌಡಿ ಶೀಟರ್ ಗಳಿಗೆ ಗಡಿಪಾರು ಆದೇಶ ಹೊರಡಿಸಿದ್ದೇವೆ. ಪ್ರಮುಖ ರೌಡಿಶೀಟರ್​ಗಳ ಮೇಲೆ ಗೂಂಡಾ ಆ್ಯಕ್ಟ್ ಹಾಕಿದ್ದೇವೆ ಎಂದು ಮಾಹಿತಿ ನೀಡಿದರು.

ಚಿಕ್ಕ ಮಕ್ಕಳು ಕೂಡ ಇತ್ತೀಚೆಗೆ ಚಾಕು ಇರಿಯುವ ಪ್ರಕರಣ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳನ್ನು ತಮ್ಮ ವೈಭವಕ್ಕೆ ಉಪಯೋಗಿಸಿಕೊಳ್ಳುತ್ತಿರುವವರ ಮೇಲೆ ನಿಗಾ ಇಟ್ಟಿದ್ದೇವೆ. 28 ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದೇವೆ‌. ಈ ಪ್ರಕರಣಗಳಲ್ಲಿ 58 ರೌಡಿಶೀಟರ್​ಗಳನ್ನು ಗುರಿಯಾಗಿಸಿಕೊಂಡಿದ್ದೇವೆ ಎಂದು ಶಶಿಕುಮಾರ್ ತಿಳಿಸಿದರು.
700 ಸಾಮಾಜಿಕ ಜಾಲತಾಣಗಳ ಖಾತೆಗಳ ಮೇಲೆ ಹದ್ದಿನ ಕಣ್ಣನ್ನು ಇರಿಸಲಾಗಿದೆ. ಕಾಮೆಂಟ್​ಗಳನ್ನು ಸಹ ಪರಿಶೀಲನೆ ನಡೆಸಿದ್ದೇವೆ‌. ತಲ್ವಾರ್ ಸೇರಿ ಆಯುಧಗಳನ್ನು ಇಟ್ಟುಕೊಂಡು ವೈಯಕ್ತಿಕ ವೈಭವೀಕರಣ ಮಾಡುವಂತವರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು
.

ಅಪರಾಧ ಜಗತ್ತಿಗೆ ಯುವ ಸಮುದಾಯ ಸೆಳೆಯುವಂತೆ ಮಾಡುವುದು‌, ಪ್ರತಿಭಟನೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಬೆಂಬಲಿಗ ಪಡೆ ಮಾಡಿಕೊಂಡು ಭಯಪಡಿಸುವ ವಾತಾವರಣ ಸೃಷ್ಟಿ ಮಾಡುವುದು‌. ಶಾಲಾ-ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಭಯ ಹುಟ್ಟಿಸುವ ವಿಡಿಯೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹರಿಬಿಡುತ್ತಾರೆ. ಹೀಗಾಗಿ, ಹು-ಧಾ ಕಾನೂನು-ಸುವ್ಯವಸ್ಥೆಯ 15 ಠಾಣೆಗಳಲ್ಲಿ ಒಟ್ಟು 28 ಪ್ರಕರಣಗಳನ್ನು ದಾಖಲಿಸಿದ್ದೇವೆ ಎಂದು ಆಯುಕ್ತರು ವಿವರಿಸಿದರು.

ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾಗಿರುವಂತ ಸೋಶಿಯಲ್ ಮೀಡಿಯಾ ಅಕೌಂಟ್​ಗಳನ್ನು ಬಂದ್​​ ಮಾಡುವ ಕೆಲಸವನ್ನೂ ಸಹ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಮ್ಮ ಹಿರಿಯ ಅಧಿಕಾರಿಗಳು ನಿಗಾ ಇಡುತ್ತಿದ್ದಾರೆ. ನಮಗೆ ಗೃಹ ಇಲಾಖೆಯಿಂದ ಈ ಬಗ್ಗೆ ನಿರ್ದೇಶನ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದೇವೆ" ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದರು.

ಇತ್ತೀಚೆಗೆ ನಮ್ಮಲ್ಲೇ ಒಂದು ಬಾಲಕಿಯ ಸಾವಾಗಿತ್ತು. ಮಕ್ಕಳ ರಕ್ಷಣೆ ಕೇವಲ ಇಲಾಖೆಗಳ ಜವಾಬ್ದಾರಿ ಅಲ್ಲ. ಪ್ರತಿಯೊಬ್ಬ ಪೋಷಕರು, ನಾಗರಿಕರ ಜವಾಬ್ದಾರಿಯಾಗಿದೆ‌. ಈ ರೀತಿಯ ಹಲವು ಪ್ರಕರಣಗಳು ನಮ್ಮ ವ್ಯಾಪ್ತಿಯಲ್ಲಿ ನಡೆದಿವೆ. 2023ರ ಏಪ್ರಿಲ್​ನಲ್ಲಿ 7 ವರ್ಷದ ಮಗುವಿನ ಮೇಲೆ 26 ವರ್ಷದ ಯುವಕ ದೌರ್ಜನ್ಯ ಎಸಗಿದ್ದ. ಆ ಪ್ರಕರಣದಲ್ಲಿ ಪೋಕ್ಸೋ ನ್ಯಾಯಾಲಯ ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿದೆ ಎಂದು ಆಯುಕ್ತ ಎನ್​.ಶಶಿಕುಮಾರ್ ಮಾಹಿತಿ ನೀಡಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು