Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಇನ್ನಿಲ್ಲ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ (92) ಅವರು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾದರು.


ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಗುರುವಾರ 8:06ಕ್ಕೆ ಸಿಂಗ್‌ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ರಾತ್ರಿ 9:15ರ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.

ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆ ಗಳಿಸಿದರು.

ಆರ್ಥಿಕ ಸುಧಾರಣೆಗಾಗಿ ಮತ್ತು ಪರಿವರ್ತಿಸುವ ಉದ್ದೇಶದಿಂದ ಆರ್ಥಿಕವಾಗಿ ವ್ಯಾಪಕ ಸುಧಾರಣೆಗಳನ್ನು ತಂದರು. ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು.

ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್‌ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್‌ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್‌ ಸಿಂಗ್‌ ಅವರದಾಗಿದೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು