Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕೋಟೆ ನಾಡಿನ ಹಾಸ್ಯ ನಟ ಬ್ಯಾಂಕ್ ಜನಾರ್ಧನ ಇನ್ನಿಲ್ಲ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹಾಸ್ಯ ನಟ ಬ್ಯಾಂಕ್ ಜನಾರ್ಧನ(75) ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು
, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬ್ಯಾಂಕ್ ಜನಾರ್ಧನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 800ಕ್ಕೂ ಅಧಿಕ ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ಬಣ್ಣ ಹಚ್ಚಿದ್ದರು. ನಾಟಕ, ಕಿರುತೆರೆ ಧಾರಾವಾಹಿಗಳಲ್ಲಿ ಕೂಡ ನಟಿಸಿ ಸೈ ಎನಿಸಿಕೊಂಡಿದ್ದರು.

ಕೋಟೆನಾಡಿನ ಬ್ಯಾಂಕ್ ಜನಾರ್ಧನ-
ಬ್ಯಾಂಕ್ ಜನಾರ್ಧನ ಕೋಟೆ ನಾಡಿನ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯವರು.  1949ರಲ್ಲಿ ಜನಾರ್ಧನ್ ಜನಿಸಿದರು. ವಿದ್ಯಾಭ್ಯಾಸವನ್ನು ಹೊಳಲ್ಕೆರೆಯಲ್ಲಿಯೇ ಪೂರ್ಣಗೊಳಿಸಿದರು. 1965 ರಲ್ಲಿ ಅಂದು ಜಯಲಕ್ಷ್ಮಿ ಬ್ಯಾಂಕ್ ನಲ್ಲಿ 50 ರೂಪಾಯಿಗೆ ಕೆಲಸಕ್ಕೆ ಸೇರಿದ್ದರು. ರಾತ್ರಿ ವೇಳೆ ಮಲ್ಲಿಕಾರ್ಜುನ ಟೂರಿಂಗ್ ಟಾಕೀಸ್ ನಲ್ಲಿ ಅಸಿಸ್ಟೆಂಟ್‌ಆಪರೇಟರ್ ಆಗಿ ಕೆಲಸ ನಿರ್ವಹಿಸಿದರು. ಜೊತೆಗೆ ನಾಟಕಗಳಲ್ಲಿಯೂ ಬಣ್ಣ ಹಚ್ಚಿ ನಟಿಸುತ್ತಿದ್ದರು.


ಒಮ್ಮೆ ಹೊಳಲ್ಕೆರೆಗೆ ಬಂದಿದ್ದ ಧೀರೇಂದ್ರ ಗೋಪಾಲ್‌ಅವರು ಇವರ ನಾಟಕಗಳನ್ನು ನೋಡಿ ಬೆಂಗಳೂರಿಗೆ ಬರುವಂತೆ ಚಲನಚಿತ್ರಗಳಲ್ಲಿ ನಟಿಸುವಂತೆ ಪ್ರೇರೇಪಿಸಿದ್ದರು. ನಂತರ ಒಂದೂವರೆ ವರ್ಷ ಬಿಟ್ಟು ಜನಾರ್ಧನ್ ಅವರು ಬೆಂಗಳೂರಿಗೆ ಬಂದು ಧೀರೇಂದ್ರ ಗೋಪಾಲ್‌ಅವರನ್ನು ಭೇಟಿ ಮಾಡಿದರು. ನಂತರದ ದಿನಗಳಲ್ಲಿ ಅವರು ಊರಿಗೆ ಉಪಕಾರಿಸಿನಿಮಾದಲ್ಲಿ ವಜ್ರಮುನಿ ಅವರಿಗೆ ಬಾಡಿಗಾರ್ಡ್ ಪಾತ್ರ ಮಾಡಿದರು.

ಶೂನ್ಯ ಬ್ಯಾಲೆನ್ಸ ಬ್ಯಾಂಕ್ ಜನಾರ್ಧನ-
ಬ್ಯಾಂಕ್ ಜನಾರ್ಧನ ಹೆಚ್ಚು ಹಣ ಗಳಿಸಲಿಲ್ಲ. ಇವತ್ತಿನ ಪೋಷಕ ಕಲಾವಿದರು ಲಕ್ಷ ಲಕ್ಷ ಸಂಭಾವನೆ ಪಡೆಯುತ್ತಾರೆ. ನಮ್ಮ ಕಾಲದಲ್ಲಿ ಅಷ್ಟೆಲ್ಲಾ ಕೊಡುತ್ತಿರಲಿಲ್ಲ. ನನ್ನ ಹೆಸರಿನಲ್ಲಿ ಬ್ಯಾಂಕ್ ಇದೆ. ಆದರೆ ನನ್ನ ಬ್ಯಾಂಕ್ ಅಕೌಂಟ್‌ನಲ್ಲಿ ಏನಿಲ್ಲ ಎಂದು ಸ್ವತ: ಜನಾರ್ಧನ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.
ಕೋವಿಡ್ ಸಮಯದಲ್ಲಿ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಸಂಕಷ್ಟ ಎದುರಿಸುವಂತಾಗಿತ್ತು. ಈಗ ಪೋಷಕ ಕಲಾವಿದರಿಗೆ ಹೆಚ್ಚು ಸಂಭಾವನೆ ಕೊಡುತ್ತಾರೆ. ನಮ್ಮ ಕಾಲದಲ್ಲಿ ಇರಲಿಲ್ಲ
, ಆಗ ಸಿನಿಮಾ ನಿರ್ಮಾಣಕ್ಕೆ ಹೆಚ್ಚು ಬಜೆಟ್ ಇರುತ್ತಿರಲಿಲ್ಲ. ಈಗ ನಾವು ಹೆಸರು ಮಾಡಿದ್ದರೆ ಹೆಚ್ಚು ಹಣ ಸಂಪಾದನೆ ಮಾಡಬಹುದಿತ್ತು. ಆ ಸಮಯದಲ್ಲಿ ಹೀರೊ ಸಂಭಾವನೆ 1 ಲಕ್ಷ ರೂ. ಇರ್ತಿತ್ತು. ಇನ್ನು ನಮಗೆ ಎಷ್ಟು ಎಂದು ನೀವೆ ಯೋಚಿಸಿ ಎಂದು  ಸಂದರ್ಶನದಲ್ಲಿ ಹೇಳಿಕೊಂಡಿದ್ದ ಬ್ಯಾಂಕ್ ಜನಾರ್ಧನ್.



ಬ್ಯಾಂಕ್ ಮತ್ತು ನಟನೆ-
ಸಾಕಷ್ಟು ಬಾರಿ ಅವಕಾಶ ಕೊಟ್ಟರೆ ಸಾಕು ಎಂದು ನಟಿಸಿ ಬರುತ್ತಿದ್ದೆ. ನಿರ್ಮಾಪಕರು
, ನಿರ್ದೇಶಕರ ಜೊತೆಗಿನ ಉತ್ತಮ ಒಡನಾಟದ ಕಾರಣಕ್ಕೆ ಹಣಕ್ಕೆ ಬೇಡಿಕೆ ಇಡದೇ ನಟಿಸಿ ಬರ್ತಿದ್ದೆ. ಆರಂಭದಲ್ಲಿ ಬ್ಯಾಂಕ್ ಕೆಲಸ ಮಾಡಿಕೊಂಡೇ ಜನಾರ್ಧನ್ ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಆದರೆ ಅವಕಾಶಗಳು ಹೆಚ್ಚಾದಾಗ ಅನಿವಾರ್ಯವಾಗಿ ಬ್ಯಾಂಕ್ ಕೆಲಸ ಬಿಡಬೇಕಾಯಿತು. 90ರ ದಶಕದ ಆರಂಭದಲ್ಲೇ ಸಿನಿಮಾಗಳಲ್ಲಿ ನಟಿಸೋಕೆ ಆರಂಭಿಸಿದ ಜನಾರ್ಧನ್ 11 ವರ್ಷಗಳ ಬಳಿಕ ಕೆಲಸ ಬಿಟ್ಟು ಸಂಪೂರ್ಣವಾಗಿ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು.

ಅವಕಾಶಗಳು ಕಮ್ಮಿ ಆಗಿ ಆರ್ಥಿಕ ಸಮಸ್ಯೆ ಎದುರಾದಾಗ ಬ್ಯಾಂಕ್ ಕೆಲಸ ಬಿಡಬಾರದಿತ್ತು ಎಂದು ಭಾವಿಸಿದ್ದು ಇದೆ. ಹಿರಿಯ ಕಲಾವಿದರಿಗೆ ಪ್ರೋತ್ಸಾಹ ಸಿಗುತ್ತಿಲ್ಲ, ಅವಕಾಶ ಕೊಡುತ್ತಿಲ್ಲ. ಜಗ್ಗೇಶ್, ವಿಷ್ಣುವರ್ಧನ್, ಅಂಬರೀಶ್ ಅವರು ನಮ್ಮನ್ನು ಗಮನಿಸುತ್ತಿದ್ದರು. ತಮ್ಮ ಸಿನಿಮಾಗಳಲ್ಲಿ ಅವಕಾಶ ಕೊಡಿಸುತ್ತಿದ್ದರು. ಇತ್ತೀಚೆಗೆ ಅದು ಇಲ್ಲ ಎಂದು ಬ್ಯಾಂಕ್ ಜನಾರ್ಧನ್ ಬೇಸರ ವ್ಯಕ್ತಪಡಿಸಿದ್ದರು.

ಬ್ಯಾಂಕ್ ಜನಾರ್ಧನ್ ಅವರ ಅಭಿಮಾನಿ ಅಣ್ಣಾವ್ರು!
ಶ್ಸಿನಿಮಾ ನೋಡಿ ಅಣ್ಣಾವ್ರು ಕೂಡ ಬ್ಯಾಂಕ್ ಜನಾರ್ಧನ್ ಅವರ ಅಭಿಮಾನಿ ಆಗಿಬಿಟ್ಟಿದ್ದರು. ಓಂಚಿತ್ರವನ್ನು ನಿರ್ಮಾಣ ಮಾಡುವ ಮುನ್ನ ಉಪೇಂದ್ರ ನಿರ್ದೇಶನದ ಸಿನಿಮಾ ನೋಡಬೇಕು ಎಂದು ಅಣ್ಣಾವ್ರು ಹೇಳಿದಾಗ ಶ್ಸಿನಿಮಾ ತೋರಿಸಲಾಗಿತ್ತು. ಮೂರು ಬಾರಿ ಸಿನಿಮಾ ನೋಡಿದ ಅಣ್ಣಾವ್ರು ಮೆಚ್ಚಿಕೊಂಡಿದ್ದರು. ಅದರಲ್ಲೂ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಬ್ಯಾಂಕ್‌ಜನಾರ್ಧನ್ ಬೈಯ್ಯುವ ಸನ್ನಿವೇಶವನ್ನು ಡಾ. ರಾಜ್ ಬಹಳ ಎಂಜಾಯ್ ಮಾಡಿದ್ದರು. ಈ ವಿಚಾರವನ್ನು ಸಾಕಷ್ಟು ಸಂದರ್ಭಗಳಲ್ಲಿ ಬ್ಯಾಂಕ್ ಜನಾರ್ಧನ್ ಅವರಿಗೆ ಅಣ್ಣಾವ್ರು ಹೇಳಿದ್ದರು.

ಬ್ಯಾಂಕ್ನೊಂದಿಗೆ ಹೆಸರು-
ಜನಾರ್ಧನ್ ಅವರು ಬ್ಯಾಂಕ್ ನೌಕರನಾಗಿದ್ದುಕೊಂಡೇ ಚಿತ್ರಗಳಲ್ಲಿ ನಟಿಸುತ್ತಿದ್ದರು. ಜನಾರ್ಧನ್ ಎಂಬ ಹೆಸರಿನ ಸಾಕಷ್ಟು ಜನ ಆಗ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದರು. ಹಾಗಾಗಿ ವಿಭಿನ್ನವಾಗಿರಲಿ
, ಗುರ್ತಿಸಲು ಸುಲಭವಾಗಲಿ ಎನ್ನುವ ಕಾರಣಕ್ಕೆ ಪಿಆರ್‌ಓ ಆಗಿದ್ದ ನಾಗೇಂದ್ರ ಅವರು ಇನ್ನು ಮುಂದೆ ನಿಮ್ಮ ಹೆಸರನ್ನು ಬ್ಯಾಂಕ್ ಜನಾರ್ಧನ್ ಎಂದು ಬದಲಿಸಿಕೊಳ್ಳಿ ಎಂದಿದ್ದರು. ಅವರ ಸಲಹೆಯಂತೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಖಾಯಂ ಆಗಿತ್ತು.

ಅಜಗಜಾಂತರದ ತಿರುವು-
ಬ್ಯಾಂಕ್‌ನಲ್ಲಿ ಕೆಲಸ ಮಾಡಿಕೊಂಡೇ ನಾಟಕಗಳಲ್ಲಿ ಜನಾರ್ಧನ್ ನಟಿಸುತ್ತಿದ್ದರು. ಗೌಡ್ರ ಗದ್ದಲನಾಟಕದಲ್ಲಿ ನಟಿಸಿ ಜನಮನ್ನಣೆ ಗಳಿಸಿದ್ದರು. ಬಳಿಕ ನಾಟಕ ಕಂಪನಿಗಳಲ್ಲಿ ಬಣ್ಣ ಹಚ್ಚಲು ಆರಂಭಿಸಿದ್ದರು. ಖ್ಯಾತ ಹಾಸ್ಯನಟ ಧೀರೇಂದ್ರ ಗೋಪಾಲ್ ಸಹಾಯದಿಂದ ಊರಿಗೆ ಉಪಕಾರಿಚಿತ್ರದಲ್ಲಿ ಸಣ್ಣ ಪಾತ್ರ ಮಾಡಿದ್ದರು. ಅಜಗಜಾಂತರಚಿತ್ರದ ಪಾತ್ರ ಒಳ್ಳೆ ಹೆಸರು ತಂದುಕೊಟ್ಟಿತ್ತು. ಅಲ್ಲಿಂದ ಮುಂದೆ ಬೇಡಿಕೆ ಹೆಚ್ಚಾಗಿತ್ತು.

ಹೃದಯಾಘಾತ-
2023ರ ಸೆಪ್ಟಂಬರ್ 26ರಂದು ಹೃದಯಘಾತವಾಗಿತ್ತು. ನಂತರ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು.1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ 1991ರವರೆಗೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ತದನಂತರ ಬಣ್ಣದ ಲೋಕದಿಂದ ದೂರ ಉಳಿದುಕೊಂಡಿದ್ದರು. ಉಪೇಂದ್ರ ನಿರ್ದೇಶನದ ಶ್
, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಜೀ ಬೂಂಬಾ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ ಅಧಿಕ ಸಿನಿಮಾಗಳಲ್ಲಿ ಜನಾರ್ಧನ್ ನಟಿಸಿದ್ದಾರೆ.  ಹಿರಿತೆರೆ ಜೊತೆ ಕಿರುತೆರೆಯಲ್ಲಿಯೂ ಬ್ಯಾಂಕ್ ಜನಾರ್ಧನ್ ಕೆಲಸ ಮಾಡಿದ್ದಾರೆ. ಪಾಪ ಪಾಂಡು, ಜೋಕಾಲಿರೋಬೋ ಫ್ಯಾಮಿಲಿ, ಮಾಂಗಲ್ಯ ಧಾರಾವಾಹಿಗಳಲ್ಲಿಯೂ ಬ್ಯಾಂಕ್ ಜನಾರ್ಧನ್ ನಟಿಸಿದ್ದರು.

ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ ಗುರುತಿಸಿಕೊಂಡ ಇವರು, ದೊಡ್ಡಣ್ಣ, ಟೆನ್ನಿಸ್‌ಕೃಷ್ಣ ಅವರ ಸಮಕಾಲೀನರು. ಅವರೊಂದಿಗೆ ಮಾತ್ರವಲ್ಲದೆ, ತಮ್ಮ ನಂತರ ಬಂದ ಹಾಸ್ಯನಟರಾದ ಸಾಧುಕೋಕಿಲ, ಬುಲೆಟ್‌ಪ್ರಕಾಶ್‌ಸೇರಿದಂತೆ ಇನ್ನೂ ಹಲವರೊಂದಿಗೆ ನಟಿಸಿ ತಮ್ಮ ಛಾಪು ಮೂಡಿಸಿದ್ದರು. 2005ರ ನ್ಯೂಸ್‌, 1993ರ ಶ್‌ಹಾಗೂ 1992ರಲ್ಲಿ ಬಿಡುಗಡೆಯಾದ ತರ್ಲೆ ನನ್ಮಗ ಚಿತ್ರದಲ್ಲಿನ ಇವರ ಪಾತ್ರಗಳನ್ನು ಇಂದಿಗೂ ಜನ ನೆನಪಿಸಿಕೊಳ್ಳುತ್ತಾರೆ. 1991ರಲ್ಲಿ ಕಾಶಿನಾಥ್‌ಅವರ ಅಜಗಜಾಂತರ ಚಿತ್ರದ ಮೂಲಕ ಬ್ಯಾಂಕ್‌ಜನಾರ್ಧನ್‌, ಕನ್ನಡ ಚಿತ್ರರಂಗಕ್ಕೆ ಪೋಷಕ ಕಲಾವಿದರಾಗಿ ಕಾಲಿಟ್ಟಿದ್ದರು.

ಗಣ್ಯರಿಂದ ಸಂತಾಪ- ಕನ್ನಡ ಚಿತ್ರರಂಗದ ಹಿರಿಯ ನಟರು, ಸುಮಾರು ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅನೇಕ ವೈವಿದ್ಯಮಯ ಪಾತ್ರಗಳಲ್ಲಿ ನಟಿಸಿದ್ಧ  ಬ್ಯಾಂಕ್ ಜನಾರ್ಧನ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ತಮ್ಮ ಅಭಿನಯದಿಂದ ಪ್ರೇಕ್ಷಕರಲ್ಲಿ ಕಚಗುಳಿಯ ಕಡಲನ್ನೇ ಉಕ್ಕಿಸುತ್ತಿದ್ದ ಜನಾರ್ಧನ್ ಅವರು, ಪ್ರತಿ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಆ ಪಾತ್ರದ ಮೂಲಕ ಎಲ್ಲರನ್ನೂ ಸಮ್ಮೋಹನಗೊಳಿಸುತ್ತಿದ್ದರು. ಅವರ ನಿಧನ ನಮ್ಮ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ.

ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಂತಾಪ ಕೋರಿದ್ದಾರೆ. ರಂಗಭೂಮಿಯಲ್ಲಿ ತೊಡಗಿಸಿಕೊಂಡು ನೂರಾರು ಚಲನಚಿತ್ರಗಳು, ಧಾರಾವಾಹಿಗಳಲ್ಲಿ ನಟಿಸಿದ್ದರಲ್ಲದೇ, ಹಾಸ್ಯ ನಟರಾಗಿ ತಮ್ಮದೇ ಆದ ಛಾಪು ಮೂಡಿಸಿ ಕನ್ನಡಿಗರ ಮನೆಮಾತಾಗಿದ್ದ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಮೃತರ ಕುಟುಂಬ ವರ್ಗದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಅಗಲುವಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ವಿಜಯೇಂದ್ರ ಕೋರಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು