Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ದರ್ಗಾಪುರದಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿ ಓ, ಡಿ ಎಸ್‌ಜಿ ಸ್ಪೋರ್ಟ್ ಸಹಕಾರದೊಂದಿಗೆ ನಗರದ ದರ್ಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ ಅಯೋಜನೆ ಮಾಡಲಾಗಿತ್ತು.

ಉಚಿತ ಆರೋಗ್ಯ ತಪಾಸಣೆ  ಶಿಬಿರವನ್ನು ಉದ್ಘಾಟಿಸಿದ ನಗರಸಭಾ ಉಪಾಧ್ಯಕ್ಷ ಎಂ ಮಲ್ಲೇಶ ಮಾತನಾಡಿ ರೋಗಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು, ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಮತ್ತು ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಉಚಿತ ಅರೋಗ್ಯ ಶಿಬಿರಗಳು ಅತ್ಯಗತ್ಯ. ಇದು ಕೊಲೆಸ್ಟ್ರಾಲ್, ರಕ್ತದ ಸಕ್ಕರೆ, ಬಿಪಿ, ಮತ್ತು ಕ್ಯಾನ್ಸರ್‌ನಂತಹ ರೋಗಗಳ ಮುನ್ನೆಚ್ಚರಿಕೆ ವಹಿಸಲು, ಹಾಗೆಯೇ ಸರಿಯಾದ ಜೀವನಶೈಲಿ ಅಳವಡಿಸಿಕೊಳ್ಳಲು ವೈದ್ಯರ ಮಾರ್ಗದರ್ಶನ ಪಡೆಯಲು ಸಹಾಯ ಮಾಡುತ್ತದೆ.

ದೊಡ್ಡಬಳ್ಳಾಪುರ ನಗರದ ಹೃದಯ ಭಾಗವಾದ ಖಾಸಬಾಗ್ ದರ್ಗಾಪುರ ರಂಗಪ್ಪ ಸರ್ಕಲ್ ಈ ಬಾಗದಲ್ಲಿ ಹೆಚ್ಚು ಬಡ ಕುಟಂಬಗಳು ಇದ್ದು  ಅರೋಗ್ಯ ತಪಾಸಣೆ ಶಿಬಿರದ ಪ್ರಯೋಜನ ವನ್ನು ಜನತೆ ಸದುಪಯೋಗ ಪಡೆದುಕೊಳ್ಳಬೇಕಿದೆ.

  ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿ ಓ, ಡಿ ಎಸ್‌ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅಯೋಜಿಸಿದ್ದು ಬೆಳಗ್ಗೆ ಯಿಂದ ಈ ಬಾಗದ ಸಾರ್ವಜನಿಕರು ಸ್ಪಂದಿಸಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಸಹಕಾರ ನೀಡಿದ್ದಾರೆ ಎಂದರು.                

ಈ ಸಂದರ್ಭದಲ್ಲಿ ನವಚೇತನ ಆಸ್ಪತ್ರೆಯ ಎಂಡಿ ಡಾ.ರಾಜೇಶ್, ನೇತ್ರ ತಜ್ಞ ಡಾ.ವೈ.ಗಿರೀಶ್, ನಿರ್ದೇಶಕ ಪ್ರಕಾಶ್, ಮಾರ್ಕೆಟಿಂಗ್ ವಿಭಾಗದ ಮೊಹಮ್ಮದ್ ರಫೀ, ಆನಂದ್ ಮತ್ತಿತರರು ಹಾಜರಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ