Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ, ಉಚಿತ ಮೇವು ವಿತರಣೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಬಸವರಾಜು

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇತಿಹಾಸ ಪ್ರಸಿದ್ಧ  ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯ ಅಂಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿದ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಉದ್ಘಾಟಿಸಿದರು.


ಉದ್ಘಾಟನೆ ಬಳಿಕ ಮಾತನಾಡಿದ ಅವರು, “ಜಾತ್ರೆಗೆ ಸರ್ಕಾರದ ವತಿಯಿಂದ ಮೂಲಭೂತ ಸೌಲಭ್ಯಗಳ ಜೊತೆಗೆ ಉಚಿತ ನೀರು ಮತ್ತು ಆಹಾರ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯವರು ಉಚಿತ ಮೇವು ವಿತರಿಸುತ್ತಿರುವುದು ರೈತರಿಗೆ ಸಹಾಯಕವಾಗಿದೆ. ಜಾತ್ರೆಗೆ ಆಗಮಿಸಿರುವ ರೈತರು ಈ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು,” ಎಂದು ಹೇಳಿದರು. ಜಾತ್ರೆ ಪ್ರದೇಶದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಗೂ ಕಟೌಟ್‌ಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ವೇದಿಕೆ ಅಧ್ಯಕ್ಷ  ಅಂಬರೀಶ್ ಮಾತನಾಡಿ, “ಜಾತ್ರೆಗೆ ಬರುವ ಜಾನುವಾರುಗಳಿಗೆ ಉಚಿತ ಮೇವು ಮತ್ತು ನೀರು ಒದಗಿಸುವ ಮೂಲಕ ರೈತ ಸಮುದಾಯವನ್ನು ಬೆಂಬಲಿಸುವುದು ವೇದಿಕೆಯ ಉದ್ದೇಶ. ಈ ಸೇವೆಯನ್ನು ಮೂರು ವರ್ಷಗಳಿಂದ ನಿರಂತರವಾಗಿ ನೀಡುತ್ತಿದ್ದೇವೆ,” ಎಂದು ಹೇಳಿದರು.

ವೇದಿಕೆ ಕಾರ್ಯದರ್ಶಿ ಉದಯ ಆರಾಧ್ಯ ಮಾತನಾಡಿ ಇಂದು ಆರಂಭವಾದ ಮೇವು ವಿತರಣೆ ಇನ್ನೂ ಮೂರುನಾಲ್ಕು ದಿನ ನಡೆಯಲಿದೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳ ರೈತರಿಗೆ ಆದ್ಯತೆ ನೀಡಲು ತೀರ್ಮಾನಿಸಲಾಗಿದೆ,” ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಘಾಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ, ಪ್ರಗತಿಪರ ರೈತ ಭಾಸ್ಕರ್, ಕನ್ನಡ ಪರ ಹೋರಾಟಗಾರ ಪರಮೇಶ್, ಮುಖಂಡ ಕನಕದಾಸ, ವೇದಿಕೆಯ ಪದಾಧಿಕಾರಿಗಳಾದ ಶ್ರೀಧರ್, ಮಹೇಶ್, ಹಾಗೂ ಸ್ಥಳೀಯ ರೈತರು ಭಾಗಿಯಾಗಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು