Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ವಿಶ್ವಮಾನವ ಸಂದೇಶ ಬಿತ್ತಿದ “ಛಡಿ ಏಟಿನ ಚೌಡಯ್ಯ”-ಗೀತಾ ಭರಮಸಾಗರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮನೋದಾಸ್ಯ
, ಜಾತಿ ವ್ಯವಸ್ಥೆಯ ವಿರುದ್ಧ ತನ್ನದೇ ಕಟು ನಿಸ್ವಾರ್ಥ ರೀತಿಯಲ್ಲಿ ಹೋರಾಡಿ ವಿಶ್ವಮಾನವ ಸಂದೇಶ ಬಿತ್ತಿಹೋದವರು ಛಡಿ ಏಟಿನ ಚೌಡಯ್ಯ ಎಂದು ಸಾಹಿತಿ ಗೀತಾ ಭರಮಸಾಗರ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ, ಜಿಲ್ಲಾ ಗಂಗಾಭಿಕ ಬೆಸ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿದ್ದ ಜಾತಿ ಪದ್ಧತಿ, ಮೌಢ್ಯ, ಅನ್ಯಾಯಗಳನ್ನು ಚೌಡಯ್ಯನವರು ತಮ್ಮ ವಚನಗಳ  ಮೂಲಕ ಕಟುವಾಗಿ ಟೀಕಿಸುತ್ತಿದ್ದರು. ಸರ್ವಜ್ಞರ ವಚನಗಳನ್ನು ಸಿಡಿಲ ನುಡಿಎಂದು ಕರೆದರೆ, ಚೌಡಯ್ಯನವರ ವಚನಗಳನ್ನು ಛಡಿ ಏಟಿನ ನುಡಿಎಂದು ಬಣ್ಣಿಸಲಾಗಿದೆ ಎಂದು ತಿಳಿಸಿದ ಅವರು, ಶೋಷಿತ ಸಮುದಾಯಗಳ ಆಶಯಗಳನ್ನು ಎತ್ತಿಹಿಡಿದು, ಸಮಾನತೆಯ ತತ್ವ ಸಾರಿದ ಚೌಡಯ್ಯನವರ ಬದುಕು ಇಂದಿಗೂ ಸಮಾಜಕ್ಕೆ ದಾರಿದೀಪ ಎಂದು ಎಂದರು.

12ನೇ ಶತಮಾನದ ವಚನ ಚಳವಳಿ ಸಮಾಜದ ಮೇಲೆ ಬೀರಿದ ಪ್ರಭಾವ ಅನನ್ಯವಾದುದು. ಸಮಾಜದ ನಾನಾ ಸ್ತರದವರು ಅನುಭವ ಮಂಟಪದ ಮೂಲಕ ತಮ್ಮೊಳಗಿನ ಬೆಳಕನ್ನು ಕಂಡುಕೊಂಡರು. ಜನಸಾಮಾನ್ಯರಿಗೂ ಬೆಳಕಾದರು. ಆ ಕಾಲದ ವಿಖ್ಯಾತ ಶಿವಶರಣ ಹಾಗೂ ವಚನಕಾರ ಅಂಬಿಗರ ಚೌಡಯ್ಯ ವೃತ್ತಿಯಿಂದ ದೋಣಿ ನಡೆಸುವವರಾಗಿದ್ದರೂ ಪ್ರವೃತ್ತಿಯಲ್ಲಿ ಅನುಭಾವಿ.

ತಮ್ಮ ತೀಕ್ಷ್ಮ ವಚನಗಳಿಂದ ಶರಣ ವಚನಕ್ರಾಂತಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಅಂಬಿಗರ ಚೌಡಯ್ಯ. ನ್ಯಾಯನಿಷ್ಠುರವಾದಿಯಾಗಿದ್ದರು. ಅಂಬಿಗರ ಚೌಡಯ್ಯನವರು ವಚನಗಳಿಗೆ ತಮ್ಮ ಹೆಸರನ್ನೇ ಅಂಕಿತವಾಗಿ ಬಳಸಿರುವುದು ಚೌಡಯ್ಯನವರ ದಿಟ್ಟತನ ತೋರಿಸುತ್ತದೆ. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವದ ಚೌಡಯ್ಯ ನೇರನಡೆ, ನಿಷ್ಠುರ, ನಿರ್ಭಿತ ನುಡಿ, ದಿಟ್ಟ ನಿಲುವಿನವರು ಇದನ್ನು ಅವರ ವಚನಗಳಲ್ಲಿಯೂ ಕಾಣಬಹುದು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಸಾಮಾಜಿಕ ಕ್ರಾಂತಿಯು ಕೇವಲ ಅಧಿಕಾರ ಅಥವಾ ಹಣಕೋಸ್ಕರ ನಡೆದಿದ್ದಲ್ಲ. ಅದು ಸತ್ಯವನ್ನು ಉಳಿಸುವುದಕ್ಕಾಗಿ ನಡೆದ ಮಹಾನ್ ಚಳುವಳಿಯಾಗಿದೆ ಎಂದು ತಿಳಿಸಿದರು.

ಅಂಬಿಗರ ಚೌಡಯ್ಯನವರು ಸೇರಿದಂತೆ ಎಲ್ಲ ಶರಣರು ವಚನ ಸಾಹಿತ್ಯವನ್ನು ಉಳಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ತಿಳಿಸಿದ ಅವರು, ಜಗತ್ತಿನಲ್ಲಿ ಎಲ್ಲವೂ ನಶ್ವರವಾಗಿದ್ದು, ಸತ್ಯ ಮಾತ್ರ ಉಳಿಯುವಂತದ್ದು. ಸತ್ಯಂ, ಶಿವಂ, ಸುಂದರಂ ತತ್ವದಂತೆ ಸತ್ಯವೇ ದೇವರಿಗೆ ಪ್ರಿಯವಾದದ್ದು. ಪ್ರತಿಯೊಂದು ಸಮುದಾಯದಿಂದ ಬಂದ ಶರಣರು ಅಂದು ಒಂದಾಗಿ ಸತ್ಯಕ್ಕಾಗಿ ಹೋರಾಡಿದ್ದು, ಇಂದಿನ ಸಮಾಜಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ಗಂಗಾಭಿಕ ಬೆಸ್ತರ ಸಂಘದ ಅಧ್ಯಕ್ಷ ಹೆಚ್.ಡಿ.ರಂಗಯ್ಯ ಅವರು ಚಿತ್ರದುರ್ಗ ನಗರದಲ್ಲಿ ಅಂಬಿಗರ ಚೌಡಯ್ಯ ಸ್ಮಾರಕ ನಿರ್ಮಿಸಲು ಭೂಮಿ ಮಂಜೂರಾತಿ ಹಾಗೂ ಕುಲಕಸುಬಗಳಾದ ಮೀನುಗಾರಿಕೆ ಹಾಗೂ ಸುಣ್ಣ ಸುಡಲು ಸೂಕ್ತ ಸ್ಥಳಾವಕಾಶ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಜಿಲ್ಲಾ ಗಂಗಾಭಿಕ ಬೆಸ್ತರ ಸಮಾಜದ ಹಿರಿಯ ಮುಖಂಡ ಚಂದ್ರಣ್ಣ ಮಾತನಾಡಿ, ಸಮುದಾಯವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ತೀರಾ ಹಿಂದುಳಿದಿದ್ದು, ಈ ಹಿನ್ನಲೆಯಲ್ಲಿ ಮೀನುಗಾರಿಕೆ ಹರಾಜು ಪ್ರಕ್ರಿಯೆಯಲ್ಲಿ ಸಮುದಾಯಕ್ಕೆ ಆದ್ಯತೆ ನೀಡಿ, ಕುಲಕಸುಬುಗಳಿಗೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ಗಂಗಾಭಿಕ ಬೆಸ್ತರ ಸಂಘದ ಕಾರ್ಯದರ್ಶಿ ಪಿ.ಶ್ರೀನಿವಾಸ್, ಉಪಾಧ್ಯಕ್ಷ ಕೃಷ್ಣ ಮೂರ್ತಿ, ಖಜಾಂಚಿ ರಂಗನಾಥ್, ಸಂಘಟನಾ ಕಾರ್ಯದರ್ಶಿ ಶಿವಕುಮಾರ್, ಮುಖಂಡರಾದ ಚಂದ್ರ, ಎಸಿಎಫ್ ಬಹುಗುಣ, ಶಶಿ, ಟಿಪ್ಪು ಸುಲ್ತಾನ್ ವೇದಿಕೆಯ ಟಿಪ್ಪು ಖಾಸಿಂ ಅಲಿ ಸೇರಿದಂತೆ ಮತ್ತಿತರರು ಇದ್ದರು. ಚಳ್ಳಕೆರೆ ತಾಲ್ಲೂಕಿನ ನೆಲಗೇತನಹಟ್ಟಿಯ ಮುತ್ತುರಾಜ್ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು. ನವೀನ್ ಮಸ್ಕಲ್ ನಿರೂಪಿಸಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು