E-PAPER
24 Nov 2026, 12:08:59 AM|
Gold₹12538/gGold24K ₹12,538/g - 22K ₹11,493/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಸರ್ಕಾರಿ ಉದ್ಯೋಗದ ಕನಸು ನನಸು

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೋಜ್‌ಗಾರ್ ಮೇಳದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಯುವ ಜನತೆಯ ಸರ್ಕಾರಿ ಉದ್ಯೋಗದ ಕನಸನ್ನು ನನಸಾಗಿಸುತ್ತಿದೆ ಎಂದು ಬಿಜೆಪಿ ತಿಳಿಸಿದೆ.

ರೋಜ್‌ಗಾರ್ ಮೇಳವನ್ನು ದೇಶಾದ್ಯಂತ ನಡೆಸಲಾಗುತ್ತಿದ್ದು, ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನೇಮಕಾತಿಗಳನ್ನು ನಡೆಸಲಾಗುತ್ತಿದೆ ಎಂದು ಬಿಜೆಪಿ ಮಾಹಿತಿ ನೀಡಿದೆ.

ಕಳೆದ ಹತ್ತು ವರ್ಷಗಳಿಂದ ಸರ್ಕಾರಿ ಇಲಾಖೆಗಳು, ಸಚಿವಾಲಯಗಳು ಮತ್ತು ಸಂಸ್ಥೆಗಳಲ್ಲಿ ಉದ್ಯೋಗಗಳನ್ನು ಒದಗಿಸುವ ಅಭಿಯಾನವು ನಿರಂತರವಾಗಿ ನಡೆಯುತ್ತಿದೆ. ಕೇಂದ್ರ ಸರ್ಕಾರದ ನೀತಿಗಳು, ಕಾರ್ಯಕ್ರಮಗಳಲ್ಲಿ ಯುವ ಜನತೆಗೆ ಆದ್ಯತೆ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ.

ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರವು ಯುವಕರಿಗೆ ಭಾಷಾ ತೊಡಕುಗಳನ್ನು ನಿವಾರಿಸಲು 13 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಒದಗಿಸಿದೆ.

2004 ರಿಂದ 2014 ಕ್ಕೆ ಹೋಲಿಸಿದರೆ, ಕಳೆದ 10 ವರ್ಷಗಳಲ್ಲಿ ಉದ್ಯೋಗದ ಅಂಕಿ ಅಂಶಗಳು ಶೇ. 60 ರಿಂದ ಶೇ. 70 ರಷ್ಟು ಹೆಚ್ಚಾಗಿದೆ. ಕಳೆದ ಕೆಲವೇ ವರ್ಷಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಯುವಕರಿಗೆ ಶಾಶ್ವತ ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ.

ಇದು ಸ್ವತಃ ದಾಖಲೆಯಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರಗಳಿಗಿಂತ ಭಿನ್ನವಾಗಿ ಇಂದು ಪಾರದರ್ಶಕ ನೇಮಕಾತಿ ಪ್ರಕ್ರಿಯೆ ಮೂಲಕ ಲಕ್ಷಾಂತರ ಯುವಕರು ಸರ್ಕಾರಿ ಉದ್ಯೋಗಗಳನ್ನು ಪಡೆಯುತ್ತಿದ್ದಾರೆ. ಯುವಜನರಿಗೆ ರಾಷ್ಟ್ರ ನಿರ್ಮಾಣ ಮತ್ತು ಸ್ವಯಂ ಸಬಲೀಕರಣಕ್ಕೆ ಕೊಡುಗೆ ನೀಡಲು ಅರ್ಥಪೂರ್ಣ ಅವಕಾಶಗಳನ್ನು ಮೋದಿ ಸರ್ಕಾರ ನೀಡುತ್ತಿದೆ ಎಂದು ಬಿಜೆಪಿ ಮೆಚ್ಚುಗೆ ವ್ಯಕ್ತಪಡಿಸಿದೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!