Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಪಕ್ಷಿಗಳ ಹಸಿವು, ದಾಹ ತಣಿಸಲು ಗಿಡ ಮರಗಳಲ್ಲಿ ನೀರು, ಆಹಾರ ವ್ಯವಸ್ಥೆ ಮಾಡಿದ ಜಿಪಂ ಸಿಇಒ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಿಸಿಲ ಧಗೆಗೆ ಪ್ರಾಣಿ-ಪಕ್ಷಿಗಳು ಬಾಯಾರಿ ಬಳಲುತ್ತಿರುತ್ತವೆ. ಮಡಿಕೆ-ಕುಡಿಕೆಯಲ್ಲಿ ನೀರಿಡಿ. ಪ್ರಾಣಿ, ಪಕ್ಷಿಗಳ ದಾಹ ನೀಗಿಸಿ ಎಂಬ ಸಂದೇಶಗಳು ಬೇಸಿಗೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಣ್ಣಿಗೆ ಬೀಳುತ್ತವೆ. ಆದರೆ ಇದನ್ನು ಅಕ್ಷರಶಃ ಕಾರ್ಯಗತಗೊಳಿಸುವ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಪಕ್ಷಿ ಪ್ರೇಮ ಮೆರೆದಿದ್ದಾರೆ.
ಕೋಟೆನಾಡು ಚಿತ್ರದುರ್ಗದಲ್ಲಿ ಈ ಬಾರಿ ಬಿಸಿಲಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ.  ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳಿನಲ್ಲಿ ಕಂಡುಬರುತ್ತಿದ್ದ ಬಿರು ಬೇಸಿಗೆ, ಈ ಬಾರಿ ಮಾರ್ಚ್ ತಿಂಗಳಿನಲ್ಲಿಯೇ ತನ್ನ ಪ್ರತಾಪ ತೋರಲು ಆರಂಭಿಸಿದೆ.  ಈ ಹಿನ್ನಲೆಯಲ್ಲಿ ಪಕ್ಷಿಗಳ ಹಸಿವು ನೀಗಿಸುವ ಹಾಗೂ ದಾಹ ತಣಿಸುವ ಪ್ರಯತ್ನವೊಂದು ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದಿದೆ.

ಬೇಸಿಗೆಯಲ್ಲಿನ ತಾಪಮಾನ ನಿಧಾನವಾಗಿ ಏರಿಕೆಯಾಗುತ್ತಿದೆ. ಪರಿಣಾಮ ನೀರಿನ ಸೆಲೆಗಳು ಬತ್ತಲಾರಂಭಿಸಿವೆ. ಬೇಸಿಗೆಯಲ್ಲಿ ಸಾಮಾನ್ಯವಾಗಿ ಜನರೊಂದಿಗೆ ಪ್ರಾಣಿ,  ಪಕ್ಷಿಗಳು ಸಹ ಬಿಸಿಲಿನ ತಾಪಕ್ಕೆ ಸಿಲುಕಿ ಕಂಗಲಾಗುವುದು ಸಹಜ.  ಹೀಗಾಗಿ ಪ್ರಾಣಿ-ಪಕ್ಷಿಗಳು ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗುವುದು ಅಸಾಮಾನ್ಯವೇನಲ್ಲ.  ಮನುಷ್ಯರಿಗೆ ನೀರಡಿಕೆಯಾದರೆ ಎಲ್ಲಿಂದಾದರೂ ನೀರು ಪಡೆದು ಕುಡಿಯುತ್ತೇವೆ. ಆದರೆ ಮೂಕ ಪ್ರಾಣಿ-ಪಕ್ಷಿಗಳಿಗೆ ಎಲ್ಲಿ ನೀರು ಸಿಗುತ್ತದೆಯೋ ಎಂದು ಹುಡುಕಿಕೊಂಡು ಅಲೆದಾಡಬೇಕು.  ಬೇಸಿಗೆಯ ಬೇಗೆಯಲ್ಲಿ ಪಕ್ಷಿಗಳು ಆಹಾರ, ನೀರಿಗಾಗಿ ಅವುಗಳು ಪಡುವ ವೇದನೆ ಗಮನಿಸಿದ ಜಿ.ಪಂ ಸಿಇಒ ಮಾನವೀಯತೆ ಮೆರೆದಿದ್ದಾರೆ.
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಗಿಡ-ಮರಗಳಿಗೆ ಮತ್ತು ಕಾರ್ಯಾಲಯದ ಮಹಡಿ ಮೇಲೆ ತಮ್ಮ ಸ್ವಂತ ಹಣದಲ್ಲಿ ಪ್ಲಾಸ್ಟಿಕ್ ಬೌಲ್‍ಗಳನ್ನು ನೇತು ಹಾಕಿ, ಒಂದರಲ್ಲಿ ನೀರು, ಇನ್ನೊಂದರಲ್ಲಿ ವಿವಿಧ ಬಗೆಯ ಧಾನ್ಯ, ಕಾಳುಗಳನ್ನು ಹಾಕಿದ್ದಾರೆ. ಇದರಿಂದಾಗಿ ಪಕ್ಷಿಗಳು ಬಂದು ಆಹಾರ ತಿಂದು, ನೀರನ್ನು ಕುಡಿದು, ಹಸಿವು ಹಾಗೂ ದಣಿವು ನೀಗಿಸಿಕೊಳ್ಳುತ್ತಿದ್ದು, ಇದರಿಂದಾಗಿ ಜಿಲ್ಲಾ ಪಂಚಾಯಿತಿ ಆವರಣ ಪಕ್ಷಿಗಳ ಚಿಲಿಪಿಲಿ, ಕಲರವದಿಂದ ಕೂಡಿದೆ.

ಬೇಸಿಗೆಯಲ್ಲಿ ಜನಸಾಮಾನ್ಯರಿಗೂ ಸಹ ಕುಡಿಯುವ ನೀರಿನ ಬವಣೆ ಸಾಮಾನ್ಯ. ಇಂತಹ ಸಂದರ್ಭದಲ್ಲಿ ಪಕ್ಷಿ ಸಂಕುಲಗಳ ಪಾಡು ಹೇಳತೀರದು. ಜನರ ದುರಾಸೆಗೆ ಅನೇಕ ಪ್ರಾಣಿ ಪಕ್ಷಿ ಸಂಕುಲಗಳು ನಾಶವಾಗುತ್ತಿವೆ.  ಇಂತಹ ಸಮಯದಲ್ಲಿ ಪ್ರಾಣಿ, ಪಕ್ಷಿಗಳ ಸಂಕುಲವನ್ನು ಉಳಿಸಿ, ಬೆಳೆಸಬೇಕಾದ್ದು ಮಾನವೀಯ ಧರ್ಮವಾಗಿದೆ.  ಹೀಗಾಗಿಯೇ ಜಿ.ಪಂ. ಆವರಣದಲ್ಲಿ ಪಕ್ಷಿಗಳ ಹಸಿವು ಹಾಗೂ ನೀರಿನ ದಾಹ ನೀಗಿಸಲು ಗಿಡಮರಗಳಲ್ಲಿ ಪ್ಲಾಸ್ಟಿಕ್ ಬೌಲ್‍ಗಳನ್ನು ನೇತುಹಾಕಿಸಿದ್ದೇನೆ.

 ಪಕ್ಷಿಗಳು ಇದರಿಂದ ತಮ್ಮ ದಾಹ ನೀಗಿಸುವುದನ್ನು ಕಂಡಾಗ ಖುಷಿಯಾಗುತ್ತದೆ.  ಇದೇ ರೀತಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯಲ್ಲಿ ಇಓ ಗಳು ಮತ್ತು ಪಿಡಿಒ ಗಳು ತಮ್ಮ ವೈಯಕ್ತಿಕ ಹಣದಲ್ಲಿ ಪಕ್ಷಿಗಳ ನೀರಿನ ದಾಹ ನೀಗಿಸಲು ಮುಂದಾಗಬೇಕು.  ತಮ್ಮ ಪಂಚಾಯತಿ ವ್ಯಾಪ್ತಿ ಸುತ್ತಮುತ್ತಲಿರುವ ಗಿಡ ಮರ, ಮಹಡಿಗಳ ಮೇಲೆ ಪಕ್ಷಿಗಳಿಗೆ ಒಂದಿಷ್ಟು ನೀರು ಮತ್ತು ಆಹಾರವಿನ್ನಿಡುವ ಕಾರ್ಯ ಮಾಡುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡುತ್ತೇನೆ ಎನ್ನುತ್ತಾರೆ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು