Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಯೊಕೊಗವ ಎಲೆಕ್ಟ್ರಿಕ್ ಕಾರ್ಪೊರೇಷನ್' ಮುಖ್ಯಸ್ಥರೊಂದಿಗೆ ಮಹತ್ವದ ಮಾತುಕತೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಪಾನ್ ಪ್ರವಾಸ: 'ಯೊಕೊಗವ ಎಲೆಕ್ಟ್ರಿಕ್ ಕಾರ್ಪೊರೇಷನ್' ಮುಖ್ಯಸ್ಥರೊಂದಿಗೆ ಮಹತ್ವದ ಮಾತುಕತೆ ವಿಸ್ತರಣೆ ಅವಕಾಶಗಳ ಪರಿಶೀಲಿಸುವುದಾಗಿ ಸಂಸ್ಥೆ ಪ್ರಕಟಿಸಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದರು.

ಹೂಡಿಕೆ ಆಕರ್ಷಣೆ, ಉದ್ಯಮ ಸ್ಥಾಪನೆ, ಉದ್ಯೋಗ ಸೃಷ್ಟಿ ತನ್ಮೂಲಕ ರಾಜ್ಯದ ಒಟ್ಟಾರೆ ಪ್ರಗತಿಯನ್ನು ಗಮನದಲ್ಲಿರಿಸಿಕೊಂಡು ಕೈಗೊಂಡಿರುವ ಜಪಾನ್ ಪ್ರವಾಸ ಆರಂಭವಾಗಿದೆ.

ಶತಮಾನಕ್ಕೂ ಮೀರಿದ ಇತಿಹಾಸವುಳ್ಳ ಜಪಾನ್ ನ ಪ್ರತಿಷ್ಠಿತ ಯೊಕೊಗವ ಎಲೆಕ್ಟ್ರಿಕ್ ಕಾರ್ಪೊರೇಷನ್ಸಂಸ್ಥೆಯ ಉನ್ನತಮಟ್ಟದ ಪ್ರತಿನಿಧಿಗಳನ್ನು ಈ ದಿನ ಭೇಟಿ ಮಾಡಿ ಮಾತು ಕತೆ ನಡೆಸಿದೆವು.

ಸಂಸ್ಥೆ ರಾಜ್ಯದಲ್ಲಿ ದೃಢವಾದ ನೆಲೆಯನ್ನು ಹೊಂದಿದ್ದು, 2,000ಕ್ಕೂ ಹೆಚ್ಚು ಜನರಿಗೆ ಉದ್ಯೋಗಾವಕಾಶ ಒದಗಿಸಿದೆ. 2025-2030ರ ನೂತನ ಕೈಗಾರಿಕಾ ನೀತಿ ಅಡಿಯಲ್ಲಿ ಲಭ್ಯವಿರುವ ಶ್ರೇಷ್ಠಮಟ್ಟದ ಪ್ರೋತ್ಸಾಹಕಗಳ ಕುರಿತು ಅವರಿಗೆ ತಿಳಿಸಲಾಯಿತು. ರಾಜ್ಯದಲ್ಲಿ ವಿಸ್ತರಣೆ ಅವಕಾಶಗಳನ್ನು ಪರಿಶೀಲಿಸುವುದಾಗಿ ಅವರು ತಿಳಿಸಿದರು.

ಇಂದಿನ ಮಾತುಕತೆ ಕರ್ನಾಟಕವನ್ನು ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳ ಕೇಂದ್ರವಾಗಿ ಮತ್ತಷ್ಟು ಬಲಪಡಿಸುವುದರಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಪಾಟೀಲ್ ಹೇಳಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ