E-PAPER
24 Nov 2026, 03:48:00 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರ: ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ "ಹಂಪನಾ ಅವರ " ಚಾರು ವಸಂತ" ದೇಸೀಕಾವ್ಯದ ಪರ್ಷಿಯನ್ ಭಾಷಾ ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.

ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ. ಇವರು ರಚಿಸಿರುವ "ಚಾರು ವಸಂತ" ವಿಶೇಷ ಕೃತಿಯಾಗಿದೆ. ಇಲ್ಲಿಯವರೆಗೆ 16 ಭಾಷೆಗಳಿಗೆ ತರ್ಜುಮೆ ಆಗಿ, ಈಗ 17ನೇ ಭಾಷೆಯಾಗಿ ಪರ್ಷಿಯನ್ ಗೆ ಅನುವಾದಗೊಂಡಿರುವುದು ಕನ್ನಡದ ಹೆಮ್ಮೆ ಎಂದರು. ಕನ್ನಡ ವಿಶ್ವದ ಎಲ್ಲಾ ಭಾಷೆಗಳಿಗೆ ಅನುವಾದಗೊಂಡರೆ ಕನ್ನಡದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದರು.

ಹಂಪನಾ ಅವರ ಚಾರು ವಸಂತ ಕಾವ್ಯ , ನಾಟಕವಾಗಿ ಕೂಡ ಜನಮನ್ನಣೆ ಗಳಿಸಿದೆ. ಹಂಪನಾ ದಂಪತಿ ನನಗೆ ಬಹಳ ವರ್ಷಗಳಿಂದ ಆತ್ಮೀಯರಾಗಿದ್ದರು. ನಾನು ಸಾಹಿತಿ ಅಲ್ಲ. ಆದರೆ, ಸಾಹಿತ್ಯ ಮತ್ತು ಸಾಹಿತಿಗಳ ಒಡನಾಟ ಇದೆ. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾದ ಬಳಿಕ ನಾನು ಕೇಂದ್ರ ಸರ್ಕಾರಕ್ಕೆ ಬರೆಯುವ ಪತ್ರಗಳ ಹೊರತಾಗಿ ಬೇರೆ ಕಡೆ ಇಂಗ್ಲಿಷ್ ಬಳಸುವುದೇ ಇಲ್ಲ. ಹೀಗಾಗಿ ನನಗೆ ಇಂಗ್ಲಿಷ್ ಹೆಚ್ಚು ಬರದಂತಾಯಿತು  ಎಂದರು.

ಮಲ ಹೊರುವ ಪದ್ಧತಿ ಬಗ್ಗೆ ಇರುವ ಕೃತಿ ಇದಾಗಿದೆ. ಜಾತಿ ವ್ಯವಸ್ಥೆ ರೂಪಿಸಿದ ಶಾಪ ಅಸ್ಪೃಶ್ಯತೆ. ಇದು ಅಳಿಯಬೇಕು. ಸಾಮಾಜಿಕ, ಆರ್ಥಿಕ ಶಕ್ತಿ ಎಲ್ಲರಿಗೂ ಸಿಕ್ಕಾಗ ಮಾತ್ರ ಚಲನೆ ಇಲ್ಲದ ಜಾತಿ ವ್ಯವಸ್ಥೆ ಅಳಿಯಲು ಸಾಧ್ಯ ಎಂದರು.
ಚಾರು ವಸಂತ ಅದ್ಭುತವಾದ ಕಾವ್ಯ. ಕನ್ನಡ ಭಾಷೆಯ ಉಳಿವು, ಬೆಳವಣಿಗೆಗೆ ಇಂತಹ ಕೃತಿಗಳು ಬರಬೇಕು ಎಂದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!