E-PAPER
14 Nov 2026, 11:48:45 PM|
Gold₹13605/gGold24K ₹13,605/g - 22K ₹12,460/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಗ್ರಾಮೀಣ, ನಗರ ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಪಾಲು: ಪ್ರಸ್ತಾವನೆ ಸಲ್ಲಿಸಲು ಸಿಎಂ ನಿರ್ಧಾರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆದಾಯದಲ್ಲಿ ಅವುಗಳಿಗೂ ನಿಗದಿತ ಪಾಲನ್ನು ಹಂಚಿಕೆ ಮಾಡುವಂತೆ ಜಿಎಸ್‌ಟಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.

ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ತಳಮಟ್ಟದಿಂದ ಮತ್ತಷ್ಟು ಸಶಕ್ತಗೊಳಿಸಲು ಮತ್ತು ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ವಾವಲಂಬನೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಕೆಐಎಡಿಬಿ ತೆರಿಗೆ ಹಂಚಿಕೆ ಪರಿಶೀಲನೆಗೆ ಸೂಚನೆ
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೈಗಾರಿಕೆಗಳ ಮೇಲಿನ ತೆರಿಗೆ ವಿಧಿಸುವ ಅಧಿಕಾರವನ್ನು ಹಿಂಪಡೆದಿದ್ದರಿಂದ ಗ್ರಾಮ ಪಂಚಾಯಿತಿಗಳ ಆದಾಯಕ್ಕೆ ಹೊಡೆತ ಬಿದ್ದಿದೆ ಎಂಬುದನ್ನು ಸರ್ಕಾರ ಗಮನಿಸಿದೆ. ನಿಯಮಗಳ ಪ್ರಕಾರ
, ಪ್ರಾಧಿಕಾರ ಸಂಗ್ರಹಿಸುವ ಆಸ್ತಿ ತೆರಿಗೆಯಲ್ಲಿ ಶೇ. 30ರಷ್ಟು ಮೊತ್ತವನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಬೇಕು. ಈವರೆಗೆ ಎಷ್ಟು ತೆರಿಗೆ ಸಂಗ್ರಹವಾಗಿದೆ ಮತ್ತು ಪಂಚಾಯಿತಿಗಳಿಗೆ ಎಷ್ಟು ಮೊತ್ತ ನೀಡಲಾಗಿದೆ ಎಂಬ ಸಂಪೂರ್ಣ ವರದಿಯನ್ನು ತಕ್ಷಣವೇ ಸಲ್ಲಿಸುವಂತೆ ಸಿಎಂ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಸಮಿತಿ ರಚನೆ
ಬುಧವಾರ ನಡೆದ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು
, 5ನೇ ರಾಜ್ಯ ಹಣಕಾಸು ಆಯೋಗ ನೀಡಿರುವ ಶಿಫಾರಸುಗಳು ಹಾಗೂ ಆಡಳಿತಾತ್ಮಕ ಸುಧಾರಣೆಗಳನ್ನು ಪರಿಶೀಲಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು.

ಆಯೋಗದ ವರದಿಯಂತೆ ಈಗಾಗಲೇ ಸರ್ಕಾರವು ವಿವಿಧ ಹಂತದ ಪಂಚಾಯಿತಿಗಳಿಗೆ ಬಿಡುಗಡೆ ಮಾಡಿರುವ ನಿಧಿ:
ಗ್ರಾಮ ಪಂಚಾಯಿತಿಗಳು:
1,261 ಕೋಟಿ, ತಾಲೂಕು ಪಂಚಾಯಿತಿಗಳು: 557 ಕೋಟಿ, ಜಿಲ್ಲಾ ಪಂಚಾಯಿತಿಗಳು: ₹183 ಕೋಟಿ.

ನಗರ ಸ್ಥಳೀಯ ಸಂಸ್ಥೆಗಳ ಸಬಲೀಕರಣ ಹಾಗೂ ಶಾಸನಬದ್ಧ ಸುಧಾರಣೆ
74ನೇ ಸಂವಿಧಾನ ತಿದ್ದುಪಡಿಯ ಆಶಯದಂತೆ ನಗರ ಸ್ಥಳೀಯ ಸಂಸ್ಥೆಗಳನ್ನು ಸಶಕ್ತಗೊಳಿಸಲು ಮತ್ತು ಸೂಕ್ತ ಅಧಿಕಾರ ನೀಡಲು ಕ್ರಮ ವಹಿಸಲಾಗುವುದು. ಇದಕ್ಕೆ ಸಂಬಂಧಿಸಿದ ಕಾನೂನುಗಳಿಗೆ ಅಗತ್ಯ ತಿದ್ದುಪಡಿ ತರಲು ರಾಷ್ಟ್ರೀಯ ಕಾನೂನು ಶಾಲೆಯ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಅವರು ಹೇಳಿದರು.

ತಳಮಟ್ಟದ ಯೋಜನೆ ಹಾಗೂ ಬಜೆಟ್‌ಗೆ ನೆರವು
ಗ್ರಾಮಸಭೆಗಳ ಮಾದರಿಯಲ್ಲೇ ನಗರ ಪ್ರದೇಶಗಳಲ್ಲೂ ವಾರ್ಡ್ ಸಮಿತಿಗಳ ಮೂಲಕವೇ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ಈಗಾಗಲೇ ರಚನೆಯಾಗಿರುವ ಜಿಲ್ಲಾ
, ತಾಲೂಕು ಮತ್ತು ಗ್ರಾಮ ಮಟ್ಟದ ಯೋಜನಾ ಸಮಿತಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಸಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು. ಅಲ್ಲದೆ, ಯೋಜನೆಗಳ ಉಸ್ತುವಾರಿಗಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಯೋಜನಾ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲು ಅಗತ್ಯ ಅನುದಾನ ನೀಡುವುದಾಗಿ ತಿಳಿಸಿದರು.

ಜನರ ನೈಜ ಅಗತ್ಯಗಳನ್ನು ತಳಮಟ್ಟದಿಂದಲೇ ಸಂಗ್ರಹಿಸಿ ರಾಜ್ಯ ಬಜೆಟ್‌ನಲ್ಲಿ ಸೇರಿಸುವ ಉದ್ದೇಶದಿಂದ ಸರ್ಕಾರ ‘ಜನರ ಯೋಜನೆ’ ಎಂಬ ವಿನೂತನ ಪರಿಕಲ್ಪನೆಯನ್ನು ಘೋಷಿಸಿದೆ ಎಂದು ಸಿಎಂ ಶಿವಕುಮಾರ್ ವಿವರಣೆ ನೀಡಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯದ ಹೂಗಳಿಗೆ ಪ್ರೀತಿಯ ನೀರೆರೆದು, ಭವಿಷ್ಯದ ಕನಸುಗಳಿಗೆ ರೆಕ್ಕೆ ನೀಡಿ!ವಿಶ್ವ ಮಧುಮೇಹ ದಿನ – ಅರಿವಿನ ಬೆಳಕೇ ಆರೋಗ್ಯದ ರಕ್ಷಾಕವಚಎಲ್ಲಾ ನನ್ನ ಮುದ್ದು ಮಕ್ಕಳಿಗೆ ಮಕ್ಕಳ ದಿನಾಚರಣೆ ಹಾರ್ದಿಕ ಶುಭಾಶಯಗಳುಸಹಕಾರ ಕ್ಷೇತ್ರದ ಅನುಪಮ ಸೇವೆಗೆ ಎಚ್.ಎಂ. ಮಂಜುನಾಥಪ್ಪ ಅವರಿಗೆ ‘ಸಹಕಾರ ರತ್ನ’ ಪ್ರಶಸ್ತಿಕರ್ನಾಟಕ ಏಕೀಕರಣ ಚಳುವಳಿ ಕನ್ನಡಿಗರ ಸ್ವಾಭಿಮಾನ ಒಗ್ಗಟ್ಟಿನ ಸಂಕೇತ: ತ. ನ ಪ್ರಭುದೇವ್ಡಾ. ವೆಂಕಟರೆಡ್ಡಿ ಪ್ರಶಸ್ತಿ ಪುರಸ್ಕೃತ ಮಹಾಬಲೇಶ್ವರ್ ರವರಿಗೆ ಕರವೇ ಅಭಿನಂದನೆಗೂಳ್ಯ ರಸ್ತೆ ಡಾಂಬರಿಕರಣಕ್ಕೆ ಚಾಲನೆಕರ್ನಾಟಕಕ್ಕೆ 15,600 ಕೋಟಿ ಅಭಿವೃದ್ಧಿ ಕೊಡುಗೆ: ಪ್ರಧಾನಿ ಮೋದಿರಾಜ್ಯದ ಪ್ರಗತಿ ಮತ್ತು ಮೆಟ್ರೋ ವಿಸ್ತರಣೆಗೆ ಪ್ರಧಾನಿ ಮೋದಿ ಸಹಕಾರ ಕೋರಿದ ಸಿಎಂ ಡಿ.ಕೆ. ಶಿವಕುಮಾರ್ಬರ ಪರಿಹಾರ, ಕಬ್ಬು ಬೆಳೆಗಾರರ ನೆರವು ಮತ್ತು ಮೆಟ್ರೋ ಯೋಜನೆಗಳಿಗೆ ಅನುದಾನಕ್ಕಾಗಿ ಪ್ರಧಾನಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ