Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಆರೋಗ್ಯಕರ ಜೀವನ ಶೈಲಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆರೋಗ್ಯಕರ ಜೀವನ ಶೈಲಿ ನಮ್ಮ ಜೀವನದ ಯಶಸ್ಸಿಗೆ ಅತ್ಯಂತ ಮುಖ್ಯವಾಗಿದೆ. ಉತ್ತಮ ಆರೋಗ್ಯವಿದ್ದರೆ ಮಾತ್ರ ನಾವು ಜೀವನದಲ್ಲಿ ಗುರಿಗಳನ್ನು ಸಾಧಿಸಲು ಸಾಧ್ಯ. ಆರೋಗ್ಯವನ್ನು ಕಾಪಾಡಿಕೊಳ್ಳಲು ಸಮತೋಲನಯುತ ಆಹಾರ
, ನಿಯಮಿತ ವ್ಯಾಯಾಮ, ಸಮರ್ಪಕ ವಿಶ್ರಾಂತಿ ಮತ್ತು ಶುದ್ಧ ಜೀವನ ಶೈಲಿ ಅಗತ್ಯ.

ನಿಯಮಿತ ವ್ಯಾಯಾಮ ದೇಹವನ್ನು ಸದೃಢವಾಗಿರಿಸುತ್ತದೆ. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ನಡೆಯುವುದು, ಓಡುವುದು, ಯೋಗ ಅಥವಾ ಇತರೆ ವ್ಯಾಯಾಮಗಳನ್ನು ಮಾಡುವುದರಿಂದ ರಕ್ತಸಂಚಾರ ಸುಧಾರಿಸುತ್ತದೆ. ವ್ಯಾಯಾಮದಿಂದ ದೇಹದ ತೂಕ ನಿಯಂತ್ರಣವಾಗುತ್ತದೆ, ಸ್ನಾಯುಗಳು ಬಲವಾಗುತ್ತವೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದರಿಂದ ಮನಸ್ಸು ಉಲ್ಲಾಸವಾಗಿದ್ದು, ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ.

ಆರೋಗ್ಯಕ್ಕಾಗಿ ಸಮರ್ಪಕ ನಿದ್ರೆಯೂ ಅತ್ಯಗತ್ಯ. ಪ್ರತಿದಿನ 7 ರಿಂದ 8 ಗಂಟೆಗಳಷ್ಟು ನಿದ್ರೆ ಮಾಡುವುದರಿಂದ ದೇಹಕ್ಕೆ ವಿಶ್ರಾಂತಿ ದೊರೆಯುತ್ತದೆ. ನಿದ್ರೆ ಕೊರತೆಯಿಂದ ಆಯಾಸ, ಏಕಾಗ್ರತೆ ಕೊರತೆ ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ ಸಮಯಕ್ಕೆ ಮಲಗಿ ಸಮಯಕ್ಕೆ ಎದ್ದುಕೊಳ್ಳುವ ಅಭ್ಯಾಸ ಬೆಳೆಸಬೇಕು.

ವ್ಯಾಯಾಮವು ನಮ್ಮನ್ನು ಸದೃಢ ವಾಗಿ ಮತ್ತು ಬಲವಾಗಿ ಇರಿಸಿಕೊಳ್ಳಲು ಮತ್ತು ದೈನಂದಿನ ಕೆಲಸಗಳನ್ನು ಮಾಡಲು ಸಹಾಯಮಾಡುತ್ತಿದೆ. ಇದು ನಮಗೆ ತಾಜಾತನವನ್ನು ಕಾಪಾಡಿಕೊಳ್ಳಲು ಮತ್ತು ಒಳ್ಳೆಯದನ್ನು ಅನುಭವಿಸಲು ಸಹಾಯ ಮಾಡುತ್ತದೆ. ಸಮತೋಲನಯುತ ಆಹಾರ ಸೇವನೆ ಆರೋಗ್ಯಕರ ಜೀವನದ ಮತ್ತೊಂದು ಪ್ರಮುಖ ಅಂಶ. ಹಣ್ಣುಗಳು, ತರಕಾರಿಗಳು, ಧಾನ್ಯಗಳು, ಹಾಲು, ಮೊಟ್ಟೆ ಮತ್ತು ಪೋಷಕಾಂಶಗಳಿಂದ ಕೂಡಿದ ಆಹಾರವನ್ನು ಸೇವಿಸಬೇಕು. ಅತಿಯಾದ ಜಂಕ್ ಫುಡ್, ಎಣ್ಣೆ ಪದಾರ್ಥಗಳು ಮತ್ತು ಸಕ್ಕರೆಯ ಬಳಕೆಯನ್ನು ಕಡಿಮೆ ಮಾಡಬೇಕು. ಶುದ್ಧ ನೀರನ್ನು ಸಾಕಷ್ಟು ಪ್ರಮಾಣದಲ್ಲಿ ಕುಡಿಯುವುದು ದೇಹವನ್ನು ಆರೋಗ್ಯವಾಗಿರಿಸುತ್ತದೆ.

ಮಾನಸಿಕ ಆರೋಗ್ಯವೂ ದೈಹಿಕ ಆರೋಗ್ಯದಷ್ಟೇ ಮುಖ್ಯ. ಒತ್ತಡವನ್ನು ಕಡಿಮೆ ಮಾಡಲು ಧ್ಯಾನ, ಪ್ರಾಣಾಯಾಮ ಮತ್ತು ಧನಾತ್ಮಕ ಚಿಂತನೆ ಸಹಾಯ ಮಾಡುತ್ತದೆ. ಉತ್ತಮ ಸ್ನೇಹ, ಕುಟುಂಬದ ಸಹಕಾರ ಮತ್ತು ಸಂತೋಷಕರ ಚಟುವಟಿಕೆಗಳು ಮನಸ್ಸಿಗೆ ಶಾಂತಿಯನ್ನು ನೀಡುತ್ತವೆ.

ಒಟ್ಟಾರೆ, ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ದೀರ್ಘಕಾಲ ಆರೋಗ್ಯವಾಗಿರಬಹುದು. ಉತ್ತಮ ಆಹಾರ, ವ್ಯಾಯಾಮ, ನಿದ್ರೆ ಮತ್ತು ಶಿಸ್ತುಪಾಲನೆಯಿಂದ ನಾವು ಸುಖಿ ಹಾಗೂ ಸಮೃದ್ಧ ಜೀವನ ನಡೆಸಬಹುದು.

ಲೇಖನ:ಅನುಷ್ಕಾ, 8ನೇ ತರಗತಿ, ಒನ್ ವರ್ಲ್ಡ್ ಇಂಟರ್‌ನ್ಯಾಷನಲ್ ಸ್ಕೂಲ್, ಸರ್ಜಾಪುರ, ಬೆಂಗಳೂರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು