Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಚಿತ್ತಾಪುರದಲ್ಲಿ ಆರ್​​ಎಸ್​ಎಸ್ ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​​ಎಸ್​ಎಸ್)ಕ್ಕೆ
100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್‌-16ರ ಸೋಮವಾರದಂದು ಆಯೋಜಿಸಲಾಗಿದ್ದ ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ ನೀಡಿ ಆದೇಶಿಸಿದೆ.

ಇದೇ ಸಂದರ್ಭದಲ್ಲಿ ನ್ಯಾಯಪೀಠವು, 300 ಮಂದಿ ಆರ್‌ಎಸ್‌ಎಸ್‌ ಸದಸ್ಯರು ಮತ್ತು 50 ಮಂದಿ ವಾದ್ಯಗಾರರೊಂದಿಗೆ ಪಥಸಂಚಲನ ನಡೆಸುವುದಕ್ಕೆ ಅನುಮತಿ ನೀಡುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಿ, ಆರ್​ಎಸ್ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಕಲಬುರಗಿಯ ನ್ಯಾಯಪೀಠ, ಪಥಸಂಚಲನಕ್ಕೆ ತಹಶೀಲ್ದಾರ್​ ಅವರು ನೀಡಿರುವ ಅನುಮತಿಯನ್ನು ಪರಿಗಣಿಸಿ, ಈ ಆದೇಶ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.

ಆದೇಶದಲ್ಲಿ ಏನಿದೆ?
2025ರ ಅಕ್ಟೋಬರ್ 18ರಂದು ರಾಜ್ಯ ಸರ್ಕಾರವು, ಉದ್ಯಾನ, ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಹೆಚ್ಚು ಮಂದಿ ಶಾತಿಯುತ ನಾಗರಿಕ, ಸಾಮಾಜಿಕ ಅಥವಾ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸರ್ಕಾರದ ಅನುಮತಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಸಂವಿಧಾನದಲ್ಲಿ ಲಭ್ಯವಿರುವ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಸಭೆಯನ್ನು ನಡೆಸುವ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಿದೆ ಎಂದು ತಿಳಿಸಿ, ಆದೇಶಕ್ಕೆ ತಡೆ ನೀಡಿದೆ. ಈ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಸಲ್ಲಿಸಿದ್ದ ಮೇಲ್ಮನವಿಯನ್ನೂ ದ್ವಿಸದಸ್ಯಪೀಠ ವಜಾಗೊಳಿಸಿ ಆದೇಶಿಸಿರುವ ಅಂಶವನ್ನು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.


ವಕೀಲರ ವಾದ:
ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ
, ಅರ್ಜಿದಾರರ ಪರ ವಕೀಲರು, ''ಪಥಸಂಚಲನದಲ್ಲಿ 300 ಮಂದಿ ಮತ್ತು ವಾದ್ಯಗೋಷ್ಠಿಯಲ್ಲಿ 25 ಮಂದಿಗೆ ಸೀಮಿತಗೊಳಿಸಲಾಗಿದೆ. ಆದ್ದರಿಂದ ಪಥಸಂಚಲನಕ್ಕೆ 600 ಮಂದಿ ಮತ್ತು ವಾದ್ಯಗೋಷ್ಠಿಯಲ್ಲಿ 50 ಮಂದಿಗೆ ಅವಕಾಶ ನೀಡಬೇಕು. ಅಲ್ಲದೆ, ಸಂಘ 100 ವರ್ಷ ಪೂರೈಸಿರುವ ವಿಶೇಷ ಸಂದರ್ಭದಲ್ಲಿ ಪಥಸಂಚಲನ ಹಮ್ಮಿಕೊಳ್ಳಲಾಗಿದೆ. ಜನರ ಭಾವನೆಗಳನ್ನು ಪರಿಗಣಿಸಿ, ಒಂದು ಅವಧಿಗಾಗಿ ಈ ಮನವಿ ಮಾಡಲಾಗುತ್ತಿದ್ದೇವೆ'' ಎಂದು ಕೋರಿದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು