Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿವಿ ಸಾಗರ ರಕ್ಷಣೆಗೆ ಹಿರಿಯೂರು ಉಪಚುನಾವಣೆ ಬಹಿಷ್ಕಾರಕ್ಕೆ ಎಚ್ಚರಿಕೆ: ಕಸವನಹಳ್ಳಿ ರಮೇಶ್ ನೇತೃತ್ವದಲ್ಲಿ ಸೆ. 8ಕ್ಕೆ ಜಂಟಿ ಹೋರಾಟದ ಸಭೆ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಮಧ್ಯ ಕರ್ನಾಟಕದ ಜೀವನಾಡಿ, ಪ್ರಸಿದ್ಧ ವಿವಿ ಸಾಗರ (ವಾಣಿ ವಿಲಾಸ ಸಾಗರ) ಜಲಾಶಯಕ್ಕೆ ಎದುರಾಗಿರುವ ಸಾಲು ಸಾಲು ಸಂಕಷ್ಟಗಳನ್ನು ತಡೆಯಲು ಹಾಗೂ ಡ್ಯಾಂ ರಕ್ಷಣೆಗಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು 'ವಿವಿಸಾಗರ ಹಾಗೂ ಭದ್ರಾ ಮೇಲ್ದಂಡೆ ಅಚ್ಚುಕಟ್ಟುದಾರ ರೈತರ ಹಿತರಕ್ಷಣ ಸಮಿತಿ' ಅಧ್ಯಕ್ಷ ಕಸವನಹಳ್ಳಿ ರಮೇಶ್ ತಿಳಿಸಿದ್ದಾರೆ.

ಆಗಸ್ಟ್ 1ರಂದು ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಮಿತಿಯ ಮಹತ್ವದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಿ ಸಾಗರಕ್ಕೆ ಎಂಟು ದಿಕ್ಕುಗಳಿಂದಲೂ ಆತಂಕ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

Advertisement

ಸಭೆಯ ಪ್ರಮುಖ ಅಂಶಗಳು:
ನೀರಿನ ಹಂಚಿಕೆಯಲ್ಲಿ ತಾರತಮ್ಯ: ಜಲಾಶಯಕ್ಕೆ ಪ್ರಸ್ತುತ ಕೇವಲ 2 ಟಿಎಂಸಿ ನೀರು ಮಾತ್ರ ಹಂಚಿಕೆಯಾಗಿದ್ದರೂ, ವಾಸ್ತವದಲ್ಲಿ 10 ಟಿಎಂಸಿ ನೀರು ಬಳಕೆಯಾಗುತ್ತಿದೆ. ಆದ್ದರಿಂದ ವಿವಿ ಸಾಗರಕ್ಕೆ ಕಾಯಂ ಆಗಿ 10 ಟಿಎಂಸಿ ನೀರನ್ನು ಮೀಸಲಿಡಬೇಕು.

ಭದ್ರಾ ಯೋಜನೆಗೆ ವೇಗ ನೀಡಿ: ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ಎತ್ತುವ ಕಾಮಗಾರಿ ಅತ್ಯಂತ ಮಂದಗತಿಯಲ್ಲಿ ನಡೆಯುತ್ತಿದ್ದು, ಇದನ್ನು ತಕ್ಷಣವೇ ಪೂರ್ಣಗೊಳಿಸಬೇಕು.

ಟಿ.ಬಿ. ಜಯಚಂದ್ರ ನಡೆಯ ವಿರುದ್ಧ ಆಕ್ರೋಶ: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕೈಗಾರಿಕೆಗಳಿಗೆ ವಿವಿ ಸಾಗರದಿಂದ ನೀರು ಹಂಚಿಕೆ ಮಾಡಲು ಶ್ರಮಿಸುತ್ತಿರುವ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರ ನಡೆಯನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಜಯಚಂದ್ರ ಅವರು ಈ ನೀರು ಒಯ್ಯುವ ಆದೇಶ ಮಾಡಿಸಿದರೆ, ಹಿರಿಯೂರು ಉಪಚುನಾವಣೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.

ಸೆಪ್ಟೆಂಬರ್ 8ಕ್ಕೆ ಸರ್ವಪಕ್ಷಗಳ ಬೃಹತ್ ಸಭೆ:
ವಿವಿ ಸಾಗರ ಉಳಿವಿಗಾಗಿ ತಾಲೂಕಿನ ಎಲ್ಲಾ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು, ರೈತರು, ವರ್ತಕರು, ನಾಗರಿಕರು ಹಾಗೂ ವೃತ್ತಿಪರರನ್ನು ಒಗ್ಗೂಡಿಸಿ ಬೃಹತ್ ಹಕ್ಕೊತ್ತಾಯ ಮಂಡಿಸಲು ನಿರ್ಧರಿಸಲಾಗಿದೆ. ಈ ಹೋರಾಟಕ್ಕೆ ಜಿಲ್ಲೆಯ ಶಾಸಕರು, ಎಂಎಲ್‌ಸಿಗಳು, ಸಂಸದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಹ್ವಾನಿಸಲಾಗುವುದು.
ಇದರ ಪೂರ್ವಭಾವಿಯಾಗಿ ಬರುವ ಸೆಪ್ಟೆಂಬರ್ 8 (ಮಂಗಳವಾರ) ರಂದು ಬೆಳಿಗ್ಗೆ ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಎಲ್ಲಾ ಪಕ್ಷ ಹಾಗೂ ಸಂಘಟನೆಗಳ ಪ್ರಮುಖರ ಸಭೆಯನ್ನು ಕರೆಯಲಾಗಿದೆ.

ಆಲೂರು ಸಿದ್ದರಾಮಣ್ಣ ಸ್ವಾಗತಿಸಿದ ಈ ಸಭೆಯಲ್ಲಿ ಕಾರ್ಯಾಧ್ಯಕ್ಷ ಎಚ್.ಆರ್. ತಿಮ್ಮಯ್ಯ, ಖಜಾಂಚಿ ಬಬ್ಬೂರು ಸುರೇಶ್ ಹಾಗೂ ಸಂಚಾಲಕ ಎಸ್.ಬಿ. ಶಿವಕುಮಾರ್ ಪ್ರಮುಖ ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಜುನಾಥ್ ಮಾಳಿಗೆ, ಗ್ರಾ.ಪಂ. ಸದಸ್ಯೆ ಶಶಿಕಲಾ, ಪಿಟ್ಲಾಲಿ ಶ್ರೀನಿವಾಸ್, ನಿವೃತ್ತ ಬ್ಯಾಂಕ್ ಅಧಿಕಾರಿ ಎಂ.ಟಿ.ಬಿ. ನಾಯ್ಕ, ಮಮತಾ ಕೃಷ್ಣಮೂರ್ತಿ, ಜೆ.ಬಿ. ರಾಜು, ಆನಂದ ಶೆಟ್ರು, ನಾರಾಯಣ ಆಚಾರ್, ಆಲೂರು ಕಲಾವತಿ, ಗೀತಮ್ಮ ರಾಮಚಂದ್ರ ಕಸವನಹಳ್ಳಿ, ಮಲ್ಲಿಕಾರ್ಜುನಪ್ಪ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅಜ್ಜ-ಅಜ್ಜಿಯರ ದಿನಾಚರಣೆ: ಹಿರಿಯ ಜೀವಗಳೊಂದಿಗೆ ಮಗುವಾದ ಸಂಭ್ರಮ!ಆತ್ರೇಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳ ಅತಂತ್ರ ಭವಿಷ್ಯ: ಸರ್ಕಾರದ ತುರ್ತು ಮಧ್ಯಪ್ರವೇಶಕ್ಕೆ ಬಿ.ಎಸ್.ಚಂದ್ರಶೇಖರ್ ಆಗ್ರಹಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕಾಂಗ್ರೆಸ್ ಮುಖಂಡರ ತೀವ್ರ ಆಕ್ರೋಶತನ್ನ ಪತ್ನಿಯನ್ನು ಆಕೆಯ ಇಚ್ಛೆಯಂತೆ ಪ್ರಿಯಕರನೊಡನೆ ಮದುವೆ ಮಾಡಿಸಿದ ವಿಶಾಲ ಹೃದಯದ ಪತಿ!ಪತ್ರಕರ್ತ ಜಿ. ಮಹಂತೇಶ್‌ಗೆ ಜೀವ ಬೆದರಿಕೆ ಪ್ರಕರಣ: ವಿಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ಎಫ್‌ಐಆರ್ ದಾಖಲಿಸಿದ ನಂದಿನಿ ಲೇಔಟ್ ಪೊಲೀಸರುಜೈಲಿನಲ್ಲೂ ಮುಂದುವರಿದ ಪ್ರಜ್ವಲ್ ರೇವಣ್ಣ ವಿಕೃತಿ: ಸೆಲ್‌ನಲ್ಲೇ ಪೆನ್ ಡ್ರೈವ್ ಬಳಸಿ ಅಶ್ಲೀಲ ವೀಡಿಯೋ ವೀಕ್ಷಣೆ!ಮಸೀದಿ ಮುಂದೆ ಗಣೇಶ ಮೆರವಣಿಗೆ ನಿಷೇಧ: ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶಭಾರತ-ಚೀನಾ ಸಂಬಂಧಕ್ಕೆ ಹೊಸ ಚೈತನ್ಯ: ಭಾರತ ಭೇಟಿಗಾಗಿ ದೆಹಲಿಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ಇಂಟರ್ನೆಟ್ ಇಲ್ಲದೆಯೂ ಯುಪಿಐ ಪಾವತಿ: ‘ಟ್ಯಾಪ್‌ಆ್ಯಂಡ್‌ಪೇ’ ಹಾಗೂ ‘ಮೈಯುಪಿಐ’ ಹೊಸ ಫೀಚರ್‌ಪರಿಚಯಿಸಿದ ಆರ್‌ಬಿಐನಮಗೆ ಹಾಕಿರುವ ಬೇಡಿ ಬಿಚ್ಚಿದರೆ ಕರ್ನಾಟಕವನ್ನೇ ಸ್ವಚ್ಛ ಮಾಡುತ್ತೇವೆ: ನ್ಯಾ. ಬಿ. ವೀರಪ್ಪ