ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ತಾಲ್ಲೂಕು ಕ್ರೀಡಾಂಗಣದಲ್ಲಿ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕ್ರೀಡಾಕೂಟ ಕಾರ್ಯಕ್ರಮವನ್ನು ನಗರಸಭೆ ಪೌರಾಯುಕ್ತರಾದ ಎ. ವಾಸೀಂ ಅವರು ಪಂಜಿನ ಮೆರವಣಿಗೆಯ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ನೂತನ ಸಮವಸ್ತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪೌರಾಯುಕ್ತರು, "ನಗರವನ್ನು ಸದಾ ಸ್ವಚ್ಛವಾಗಿಡುವಲ್ಲಿ ಪೌರಕಾರ್ಮಿಕರ ಶ್ರಮ ಅಪಾರವಾದದ್ದು. ಇವರಿಗೆ ಮತ್ತಷ್ಟು ಹೆಚ್ಚಿನ ಆರೋಗ್ಯ ಮತ್ತು ನಗರವನ್ನು ಶುಚಿಗೊಳಿಸುವ ಶಕ್ತಿಯನ್ನು ದೇವರು ಕರುಣಿಸಲಿ" ಎಂದು ಆಶೀರ್ವದಿಸಿ, ಕಾರ್ಮಿಕರಿಗೆ ಶುಭ ಹಾರೈಸಿದರು.
ಕ್ರೀಡಾಕೂಟ ಮತ್ತು ದಿನಾಚರಣೆಯ ಈ ಸಡಗರದಲ್ಲಿ ನಗರಸಭೆ ಕಚೇರಿಯ ಎಲ್ಲಾ ಅಧಿಕಾರಿಗಳು, ನೌಕರರು ಮತ್ತು ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು, ವಾಹನ ಚಾಲಕರು ಹಾಗೂ ನೀರು ಸರಬರಾಜು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.




