Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಹಿರಿಯೂರು ನಗರಸಭೆಗೆ ಸಚಿವ ಎಚ್.ಸಿ. ಬಾಲಕೃಷ್ಣ ದಿಢೀರ್ ಭೇಟಿ: ಪೌರಕಾರ್ಮಿಕರ ಸಮಸ್ಯೆ ಆಲಿಕೆ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಪೌರಾಡಳಿತ ಸಚಿವರಾದ ಎಚ್.ಸಿ. ಬಾಲಕೃಷ್ಣ ಅವರು ಸೋಮವಾರ ಮುಂಜಾನೆ ಹಿರಿಯೂರು ನಗರಸಭೆಗೆ ದಿಢೀರ್ ಭೇಟಿ ನೀಡಿ, ಪೌರಕಾರ್ಮಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ ಅವರ ಸಮಸ್ಯೆಗಳು ಹಾಗೂ ಅಗತ್ಯತೆಗಳ ಕುರಿತು ಮಾಹಿತಿ ಪಡೆದರು.

ಬಳಿಕ ನಗರದ ತರಕಾರಿ ಮಾರುಕಟ್ಟೆ ಹಾಗೂ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿದ ಸಚಿವರು, ಸ್ವಚ್ಛತೆ, ಕುಡಿಯುವ ನೀರು, ಒಳಚರಂಡಿ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.

Advertisement

ನಾಗರಿಕ ಸೇವೆಗಳೇ ಆದ್ಯತೆ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ನಾಗರಿಕ ಸೇವೆಗಳನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವರು ತಿಳಿಸಿದರು.

ಅಧಿಕಾರಿಗಳಿಗೆ ಎಚ್ಚರಿಕೆ: ವಾರ್ಡ್‌ಗಳಲ್ಲಿ ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ನಿರಂತರವಾಗಿ ಪರಿಶೀಲಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸಂಚಾರಕ್ಕೆ ಮುಕ್ತ ಅವಕಾಶ: ನಗರದ ಗಾಂಧಿ ವೃತ್ತ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರು ಮತ್ತು ವಾಹನಗಳು ಸರಾಗವಾಗಿ ಓಡಾಡಲು ಅಗತ್ಯ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ರಸ್ತೆ ಬದಿಯ ತರಕಾರಿ ವ್ಯಾಪಾರಿಗಳಿಗೆ ಸಚಿವರ ಎಚ್ಚರಿಕೆ:
ಲಕ್ಕವನಹಳ್ಳಿ ರಸ್ತೆಯಲ್ಲಿ ಮಳಿಗೆಗಳು ಇದ್ದರೂ ಹೊರಗಡೆ ಹಾಗೂ ಸಾರ್ವಜನಿಕರು ಓಡಾಡುವ ರಸ್ತೆಯ ಉದ್ದಕ್ಕೂ ತರಕಾರಿ ಮಾರಾಟ ಮಾಡುತ್ತಿರುವುದನ್ನು ಸಚಿವರು ಗಂಭೀರವಾಗಿ ಪರಿಗಣಿಸಿದರು. ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿರುವ ಅವರು, "ಮಳಿಗೆ ಬಾಡಿಗೆ ಪಡೆದುಕೊಂಡು ಹೊರಗಡೆ ವ್ಯಾಪಾರ ಮಾಡುವುದು ಸರಿಯಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಯಾವುದೇ ಸಮಸ್ಯೆ ಉಂಟಾದರೆ ನೇರ ಹೊಣೆಗಾರರು ನೀವೇ ಆಗುತ್ತೀರಿ. ಸಮಸ್ಯೆಗಳಿದ್ದರೆ ಅಧಿಕಾರಿಗಳ ಬಳಿ ತೆರಳಿ ಬಗೆಹರಿಸಿಕೊಳ್ಳಿ, ಅದನ್ನು ಬಿಟ್ಟು ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ" ಎಂದು ತಿಳಿಸಿದರು.

ಈ ಭೇಟಿಯ ಸಂದರ್ಭದಲ್ಲಿ ಪೌರಾಯುಕ್ತ ಎ. ವಾಸೀಂ, ಸಹಾಯಕ ಕಾರ್ಯಪಾಲಕ ಅಭಿಯಂತರ ಸುನೀಲ್‌ಕುಮಾರ್ ಪಿ.ಟಿ., ಸಹಾಯಕ ಅಭಿಯಂತರ ಶ್ರೀರಂಗ ಎಂ.ಎಸ್., ಹಿರಿಯ ಆರೋಗ್ಯ ನಿರೀಕ್ಷಕ ಸುನೀಲ್ ಕುಮಾರ್ ಹಾಗೂ ಅಶೋಕ ಕುಮಾರ್, ಕಿರಿಯ ಅಭಿಯಂತರರಾದ ದೀಪಾ, ಪ್ರಸನ್ನ ಕುಮಾರ್, ಕಿರಿಯ ಆರೋಗ್ಯ ನಿರೀಕ್ಷಕ ಮಹಾಲಿಂಗರಾಜ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಹನುಮಂತಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ