Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಬದುಕಿನಲ್ಲಿ ಕುವೆಂಪು ವಿಚಾರಧಾರೆ ಅಳವಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಸಚಿವ ಎಚ್.ಕೆ. ಪಾಟೀಲ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡು ಕಂಡ ಶ್ರೇಷ್ಠ ಸಾಹಿತಿಗಳಾದ ಜ್ಞಾನಪೀಠ ಪುರಸ್ಕೃತ ಕುವೆಂಪು ಅವರ ವಿಚಾರಧಾರೆಗಳನ್ನು ನಾವು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಸರ್ಕಾರ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕುಪ್ಪಳಿ, ಎಂ.ಚಂದ್ರಶೇಖರ್ ಪ್ರತಿಷ್ಠಾನ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಕುವೆಂಪು ರಾಷ್ಟ್ರೀಯ ಪುರಸ್ಕಾರಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಕುವೆಂಪು ಸಾಹಿತ್ಯ ಓದುಗರಲ್ಲಿ ಅಭಿಪ್ರಾಯ ಭೇದ ಬರಲು ಸಾಧ್ಯವಿಲ್ಲ. ಅವರ ಚಿಂತನೆ, ನಿಲುವುಗಳನ್ನು ನಾವು ಪರಿಪಾಲನೆ ಮಾಡಿದಾಗ ಮಾತ್ರ ಅವರ ಸಾಹಿತ್ಯ ನಮಗೆ ದಕ್ಕುತ್ತದೆ. ಕುಪ್ಪಳಿಯ ಕುವೆಂಪು ಅವರ ನಿವಾಸದಲ್ಲಿ ಸುಮಾರು ರೂ. 3 ಕೋಟಿಗೂ ಹೆಚ್ಚು ಪುಸ್ತಕಗಳನ್ನು ಕೊಳ್ಳುವ ಅವಕಾಶ ಜನರಿಗೆ ಸಿಕ್ಕಿರುವುದು ಸಾಹಿತ್ಯ ಕ್ಷೇತ್ರಕ್ಕೆ ಸಂದ ಗೌರವ ಎಂದು ಅವರು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ಎಸ್.ತಂಗಡಗಿ ಮಾತನಾಡಿ, ಗುಜರಾತಿ ಭಾಷೆಯ ಹಿರಿಯ ಸಾಹಿತಿ ಡಾ. ಹಿಮಾನ್ಷಿ ಇಂದುಲಾಲ್ ಶೆಲತ್ ಅವರಿಗೆ ಬಾರಿಯ ಕುವೆಂಪು ರಾಷ್ಟ್ರೀಯ ಪುರಸ್ಕಾರ ದೊರೆತಿರುವುದು ಸಂತಸ ತಂದಿದೆ. ಕುಪ್ಪಳಿಯ ಕುವೆಂಪು ಪ್ರತಿಷ್ಠಾನ ಸಾಹಿತ್ಯ ಸೇವೆ ಜೊತೆಗೆ ಜನಪರ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ. ಪ್ರತಿಷ್ಠಾನಕ್ಕೆ ಇನ್ನಷ್ಟು ಬಲ ಬರಲಿ ಎಂದು ಶುಭ ಹಾರೈಸಿದರು.

ಆಶಯ ನುಡುಗಳನ್ನಾಡಿದ ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಸಾಮಾಜಿಕ ಕ್ರಿಯಾಶೀಲತೆಯನ್ನು ನಾಡಿಗೆ ಎತ್ತಿ ತೋರಿಸಿದವರು ಕುವೆಂಪು. ಸೌಹಾರ್ದತೆ, ಸಮಾನತೆ ಜೊತೆಗೆ ಒಕ್ಕೂಟ ವ್ಯವಸ್ಥೆ ಪ್ರತಿಪಾದಿಸಿದರು. ಅವರ ವಿಚಾರಧಾರೆಗಳು, ಪ್ರಾಮಾಣಿಕತೆ, ಭಕ್ತಿಯಿಂದ ತುಂಬಿತ್ತು. ಅಲ್ಲದೇ ಅವರು ಜಾತಿ-ಧರ್ಮವನ್ನು ಮೀರಿ ಸೋದರತ್ವದ ಬೆಲೆ ತೋರಿಸಿಕೊಟ್ಟವರು ಎಂದು ಅವರು ತಿಳಿಸಿದರು.

ಕುವೆಂಪು ರಾಷ್ಟ್ರೀಯ ಪುರಸ್ಕೃತರಾದ ಸಾಹಿತಿ ಡಾ. ಹಿಮಾನ್ಷಿ ಇಂದುಲಾಲ್ ಶೆಲತ್ ಅವರ ಕುರಿತು ಪರಿಚಯ ನುಡಿಗಳನ್ನಾಡಿದ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ, ಶೆಲತ್ ಅವರು  ನೊಬೆಲ್ ಪುರಸ್ಕೃತರಾದ ವಿ.ಎಸ್.ನೈಪಾಲ್ ಅವರ ಕಾದಂಬರಿಗಳ ಕುರಿತಾಗಿ ಪಿ.ಹೆಚ್.ಡಿ ಪ್ರಬಂಧ ಮಂಡಿಸಿದರು. ಸೂರತ್ನಲ್ಲಿ ಇಂಗ್ಲೀಷ್ ಉಪನ್ಯಾಸಕಿಯಾದ ಇವರ ಮೊದಲ ಕಥೆ ಸಾತ್ ಪಗತಿಯ ಅಂದಾರ ಕೂವಮ’. ಇವರು ತಮ್ಮ ಕಥೆ, ಕಾದಂಬರಿ, ಪ್ರಬಂಧ, ಸಾಹಿತ್ಯ, ವಿಮರ್ಶೆ, ಅನುವಾದ ಮೊದಲಾದ ಪ್ರಕಾರಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಕೃತಿಗಳನ್ನು ಹೊರತಂದಿದ್ದಾರೆ.

1996ರಲ್ಲಿ ಇವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಇನ್ನೂ ಹಲವು ಪ್ರಶಸ್ತಿಗಳು ಸಂದಿವೆ ಎಂದರು.
ಪ್ರಶಸ್ತಿ ಪುರಸ್ಕೃತರಾದ ಗುಜರಾತಿ ಭಾಷೆಯ ಸಾಹಿತಿ ಡಾ.ಹಿಮಾನ್ಷಿ ಇಂದುಲಾಲ್ ಶೆಲತ್ ಮಾತನಾಡಿ, ಕನ್ನಡ ಭಾಷೆಗೆ ಭವ್ಯ ಪರಂಪರೆ ಇದೆ. ಕುವೆಂಪು ರಾಷ್ಟ್ರೀಯ ಪುರಸ್ಕಾರ ತಮಗೆ ಸಿಕ್ಕಿರುವುದು ಬಹಳ ಖಷಿ  ತಂದಿದೆ ಎಂದರು.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಕುವೆಂಪು ರಾಷ್ಟ್ರೀಯ ಪುರಸ್ಕಾರ 5 ಲಕ್ಷ ನಗದು, ಬೆಳ್ಳಿ ಪದಕ, ಪಾರಿತೋಷಕವನ್ನು ಒಳಗೊಂಡಿದ್ದು, ಇದು 12ನೇ ಪ್ರಶಸ್ತಿಯಾಗಿದೆ. ಪ್ರತಿಷ್ಠಾನವು ಬೆಂಗಳೂರಿನ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಈಗಾಗಲೇ ನಿವೇಶನ ಗುರುತಿಸಲಾಗಿದ್ದು, ಅಲ್ಲಿ ಕುವೆಂಪು ಭವನ ನಿರ್ಮಿಸಲು ಸಿದ್ದವಿದೆ. ಇಲ್ಲಿ ಕುವೆಂಪು ವಿಚಾರಧಾರೆಗಳನ್ನು ಮುಂದಿನ ಪೀಳಿಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಮ್ಮ ಅನುಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಸಂದೇಶ ನೀಡಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಗುಜರಾತಿ ಸಾಹಿತಿ ಡಾ. ಹಿಮಾನ್ಷಿ ಶೆಲತ್ ರಚನೆಯ ಅಗ್ರಹಾರ ಕೃಷ್ಣಮೂರ್ತಿ ಕನ್ನಡ ಅನುವಾದದ ರೆಕ್ಕೆ ಇಲ್ಲದ ಹಕ್ಕಿಪುಸ್ತಕವನ್ನು ಗಣ್ಯರು ಬಿಡುಗಡೆಗೊಳಿಸಿದರು.
ನಂತರ ಕುವೆಂಪು ಪ್ರಶಸ್ತಿ ಪುರಸ್ಕೃತರ ಜೊತೆಗೆ ಸಂವಾದ ಹಾಗೂ ಸಮಕಾಲೀನ ಸಂದರ್ಭದಲ್ಲಿ ಕುವೆಂಪು ಚಿಂತನೆಗಳುವಿಷಯ ಕುರಿತು ಚರ್ಚೆ ನಡೆಯಿತು.
ಕಾರ್ಯಕ್ರಮದಲ್ಲಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್, ಎಂ.ಚಂದ್ರಶೇಖರ್ ಪ್ರತಿಷ್ಠಾನದ ಸರೋಜ ಎಂ.ಚಂದ್ರಶೇಖರ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.




Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ