E-PAPER
24 Nov 2026, 08:55:16 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
​ಕಾಂಗ್ರೆಸ್ ಸರ್ಕಾರವು ನಾಚಿಕೆ, ಮಾನ-ಮರ್ಯಾದೆಗಳನ್ನು ಬದಿಗಿಟ್ಟು ನೇರವಾಗಿ ಸಾರ್ವಜನಿಕರಿಂದಲೇ ಲಂಚ ಕೇಳುವ ಮಟ್ಟಕ್ಕೆ ಇಳಿದಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಈ ಕುರಿತು ಆರ್. ಅಶೋಕ್ ಅವರು ವ್ಯಕ್ತಪಡಿಸಿದ ಪ್ರಮುಖ ಆರೋಪಗಳು:​ಸಚಿವರ ಬಹಿರಂಗ ಲಂಚದ ಹೇಳಿಕೆ: ಜನರ ಅಹವಾಲು ಆಲಿಸಲು ಸರ್ಕಾರ ಆರಂಭಿಸಿರುವ ಪ್ರಜಾಸೇವೆ ಆಂದೋಲನ ಸಭೆಯಲ್ಲೇ, ಅಬಕಾರಿ ಸಚಿವರು "ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ನಿಮ್ಮ ಧರ್ಮ" ಎಂದು ಹೇಳುವ ಮೂಲಕ ಲಂಚ ಪಡೆಯುವುದನ್ನೇ ಸರ್ಕಾರದ ಅಧಿಕೃತ ಧರ್ಮ ಎಂದು ವ್ಯಾಖ್ಯಾನಿಸಿದ್ದಾರೆ.

​ಮುಖ್ಯಮಂತ್ರಿಗಳ ನಾಟಕೀಯ ನಡೆ: 'ಲಂಚ ಕೇಳಿದರೆ ನನಗೆ ಕರೆ ಮಾಡಿ, ಭ್ರಷ್ಟರನ್ನು ಬಡಿದು ಹಾಕುತ್ತೇನೆ' ಎಂದು ನಾಟಕೀಯವಾಗಿ ಮಾತನಾಡುವ ಮುಖ್ಯಮಂತ್ರಿಗಳು, ತಮ್ಮದೇ ಸಂಪುಟದ ಸಚಿವರು ಬಹಿರಂಗವಾಗಿ ಲಂಚಕ್ಕೆ ಪ್ರೋತ್ಸಾಹ ನೀಡುತ್ತಿದ್ದರೂ ಮೌನಕ್ಕೆ ಶರಣಾಗಿದ್ದಾರೆ.

​ಅಬಕಾರಿ ಇಲಾಖೆಯ ಭ್ರಷ್ಟಾಚಾರ: ಅಬಕಾರಿ ಇಲಾಖೆಯಲ್ಲಿ ಈ ಹಿಂದಿನ ಸಚಿವರ ಅವಧಿಯಲ್ಲೇ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಅದನ್ನು ಹಾಲಿ ಸಚಿವರೂ ಮುಂದುವರಿಸುತ್ತಿದ್ದಾರೆ.

​'ಗೌರವದ ಲಂಚ ಶುಲ್ಕ' ಜಾರಿ ಭೀತಿ: ಜನರ ಕಷ್ಟ ಆಲಿಸಬೇಕಾದ ವೇದಿಕೆಯಲ್ಲೇ ಲಂಚವನ್ನು ಅಧಿಕೃತಗೊಳಿಸುವ ಯತ್ನ ನಡೆದಿದ್ದು, ಮುಂದಿನ ದಿನಗಳಲ್ಲಿ 'ಗೌರವದ ಲಂಚ ಶುಲ್ಕ' ಎಂಬ ಹೆಸರಿನಲ್ಲೇ ಹೊಸ ಆದೇಶ ಹೊರಡಿಸಿದರೂ ಅಚ್ಚರಿಯಿಲ್ಲ.

​ಹೈಕಮಾಂಡ್‌ಗೆ ಎಟಿಎಂ: ಕಾಂಗ್ರೆಸ್ ಹೈಕಮಾಂಡ್‌ಕೈಗೊಂಬೆಯಾಗಿರುವ ಈ ಸರ್ಕಾರ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಈ ನಾಚಿಕೆಗೆಟ್ಟ ಸರ್ಕಾರ ತೊಲಗುವವರೆಗೂ ರಾಜ್ಯದ ಜನತೆಗೆ ನೆಮ್ಮದಿ ಇಲ್ಲ.

​ಅಧಿಕಾರಿಗಳ ಲಂಚಕೋರತನಕ್ಕೆ ಬಹಿರಂಗವಾಗಿ ಬೆಂಬಲ ನೀಡುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆಗೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಸಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು