Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ವಕ್ಫ್ ಆಸ್ತಿ ತೆರವುಗೊಳಿಸಲು 216 ಪ್ರಕರಣಗಳಲ್ಲಿ ಬಿಜೆಪಿಯೇ  ನೋಟಿಸ್ ಕೊಟ್ಟಿತ್ತು: ಸಿಎಂ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ  ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ  ವಿರುದ್ಧವಾಗಿ ಮಾತನಾಡುತ್ತಾರೆ  ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.


ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ  ನೋಟೀಸು ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟೀಸು ನೀಡಲಾಗಿದೆ ಎಂದು  ಜನರಿಗೆ ಅರ್ಥವಾಗಿದೆ.

 ನಾನು ಸಚಿವರಾದ   ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸು ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು

ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾಗಿದೆ. ಮುಸ್ಲಿಂ , ಹಿಂದೂ, ಕ್ರಿಶ್ಚಿಯನ್ ಆಗಿರಲಿ, ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

ವಕ್ಫ್ ಆಸ್ತಿ  ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟೀಸು ಹಿಂಪಡೆಯಲಾಗಿದೆ . ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟೀಸು ಕೊಟ್ಟಿದ್ದರು.  ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟೀಸು ಕೊಟ್ಟಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

 ಬಿಜೆಪಿಯ ಈ ಡಬ್ಬಲ್ ಗೇಮ್  ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು