Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಪಾಲಿಟೆಕ್ನಿಕ್ ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಲೋಕಾರ್ಪಣೆ

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಜಿಲ್ಲೆಯ ಪ್ರತಿಷ್ಠಿತ ವೀರಶೈವ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಹಾನಗಲ್ ಶ್ರೀಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
, ಕೈಗಾರಿಕೆಗಳಲ್ಲಿ ರೋಬೋಟಿಕ್ಸ್ ಕುರಿತು ಕಾರ್ಯಗಾರ ಮತ್ತು ಡಿಪ್ಲೋಮಾ ಅ-25 ಪಠ್ಯಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿತ್ತು. 

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಳ್ಳಾರಿ ಸಂಸದ ಈ.ತುಕಾರಾಂ ರವರು  ಶುದ್ಧ ಕುಡಿಯುವ ನೀರಿನ ಘಟಕ, ಕೈಗಾರಿಕೆಗಳಲ್ಲಿ ರೋಬೋಟಿಕ್ಸ್ ಕುರಿತು ಕಾರ್ಯಗಾರ, ನವೀಕೃತ ಇ ಅಂಡ್ ಸಿ ವಿಭಾಗದ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿದರು. ಕಾಲೇಜಿನ ಉಪನ್ಯಾಸಕರುಗಳಾದ ಶ್ರೀಮತಿ ನಳಿನಿ ಮತ್ತು ಟಿ.ಹೇಮಂತ್ ಕುಮಾರ್ ಬರೆದಿರುವ ಡಿಪ್ಲೋಮಾ ಅ-25 ಪಠ್ಯಪುಸ್ತಕ ಬಿಡುಗಡೆ ಮಾಡಿದರು. 

ನಂತರ ಮಾತನಾಡಿ ಜೀವನಕ್ಕೆ ಅವಶ್ಯವಿರುವ ವಸ್ತುಗಳೆಂದರೆ ಅನ್ನ, ನೀರು, ಹಣ ಸಾರ್ವಜನಿಕ ಸೇವೆಗೆ ಬರುವುದಕ್ಕಿಂತ ಮೊದಲು ಕನಸನ್ನು ಕಂಡು ಅದನ್ನು ನನಸು ಮಾಡಲು ಸಾಧನೆ ಬಹಳ ಮುಖ್ಯ ವಿದ್ಯೆ ಯಾರ ಆಸ್ತಿಯು ಅಲ್ಲ  ಸಮಾಜಕ್ಕೆ ನೀವು ಆಸ್ತಿಯಾಗಿ ಎಂದು ನೆರೆದಿದ್ದ ವಿದ್ಯಾರ್ಥಿವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಎಜಿಎಂ ಆನಂದ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಿವಿ ಸಂಘದ ಅಧ್ಯಕ್ಷ ಡಾ.ಕಣೇಕಲ್ ಮಹಾಂತೇಶ್ ವಹಿಸಿದ್ದರು. ಕಾರ್ಯದರ್ಶಿ ಡಾ.ಅರವಿಂದ ಪಾಟೀಲ್, ಖಜಾಂಚಿ ಬೈಲುವದ್ದಿಗೇರಿ ಏರ್ರಿಸ್ವಾಮಿ, ಹಾಲಿ ಕಾರ್ಯಕಾರಿ ಸಮಿತಿಯ ಸದಸ್ಯರು, ಅಜೀವ ಸದಸ್ಯರು.

ಕೈಗಾರಿಕೆಗಳಲ್ಲಿ ರೋಬೋಟಿಕ್ಸ್ ಕುರಿತು ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಕಿರಣ್ ಕಶ್ಯಪ್.ಎಂ, ಸುದೀಪ್ ಮತ್ತು ಕಾಲೇಜಿನ  ಅಡಳಿತ ಮಂಡಳಿಯ ಅಧ್ಯಕ್ಷರಾದ ಪಲ್ಲೇದ ಪ್ರಭುಲಿಂಗ, ಅಡಳಿತ ಮಂಡಳಿಯ ಸದಸ್ಯರಾದ ಬಾಣಾಪುರ  ಜಡಿ ಸಿದ್ದನಗೌಡ, ಚಂದ್ರಶೇಖರ ಪಾಶ್ಚಾಪುರ್ ಪ್ರಾಚಾರ್ಯರಾದ ಬಿ.ಶ್ರೀಶೈಲಗೌಡ, ಎಲ್ಲಾ ವಿಭಾಗ ಮುಖ್ಯಸ್ಥರು ಸಿಬ್ಬಂದಿಗಳು ಮತ್ತು  ವಿದ್ಯಾರ್ಥಿ ವಿದ್ಯಾರ್ಥಿನಿಯರು  ಭಾಗವಹಿಸಿದ್ದರು.

ನಿರೂಪಣೆಯನ್ನು ಸಿವಿಲ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಉಮ್ಮೆ ಸಲ್ಮಾ, ಪ್ರಾರ್ಥನಾ ಗೀತೆಯನ್ನು  ಉಪನ್ಯಾಸಕಿ ಕುಮಾರಿ. ಹಿಮಬಿಂದು ನಿರ್ವಹಿಸಿದರು ಮತ್ತು ವಂದನಾರ್ಪಣೆಯನ್ನು ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಎಸ್.ನಾಗರಾಜ್ ಮಾಡಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ