LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ದೊಡ್ಡಬಳ್ಳಾಪುರದಲ್ಲಿ ಪ್ರಪ್ರಥಮ ಬಾರಿಗೆ ಒಂದೇ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವಿವಿಧ ಕ್ರೀಡೆಗಳಿಗೆ ಅಗತ್ಯವಿರುವ ವಿಶೇಷ ಕ್ರೀಡಾ ಸೌಲಭ್ಯಗಳನ್ನು ನಿರ್ಮಿಸಿ ಉದ್ಘಾಟಿಸಲಾಯಿತು.

ಶಾಲಾ ಆವರಣದಲ್ಲಿ ನಿರ್ಮಿಸಲಾಗಿರುವ ಬಾಕ್ಸಿಂಗ್ ರಿಂಗ್, ಕುಸ್ತಿ ಅಂಕಣ, ಜೂಡೋ ತರಬೇತಿ ವ್ಯವಸ್ಥೆ, ಕಬ್ಬಡಿ ಅಂಕಣ, ಶಟಲ್ ಬ್ಯಾಡ್ಮಿಂಟನ್ ಅಂಕಣ, ಸ್ಕೇಟಿಂಗ್ ಅಂಕಣ ಹಾಗೂ ಪಂಚಿಂಗ್ ಬ್ಯಾಗ್ ಸೇರಿದಂತೆ ವಿವಿಧ ಕ್ರೀಡಾ ಸೌಲಭ್ಯಗಳನ್ನು ದೊಡ್ಡಬಳ್ಳಾಪುರದ ಶಾಸಕರಾದ ಶ್ರೀಯುತ ಧೀರಜ್ ಮುನಿರಾಜು ಅವರು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಲ್ಲಿಯೂ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯ ಮೂಲಕ ಶಿಸ್ತು, ಆತ್ಮವಿಶ್ವಾಸ, ನಾಯಕತ್ವ ಗುಣ, ದೈಹಿಕ ಸಾಮರ್ಥ್ಯ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಂಡು ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು ಎಂಬ ಉದ್ದೇಶದಿಂದ ಈ ಸೌಲಭ್ಯಗಳನ್ನು ಆರಂಭಿಸಲಾಗಿದೆ.

ನ್ಯಾಷನಲ್ ಪ್ರೈಡ್ ಶಾಲೆಯ ಈ ಹೊಸ ಪ್ರಯತ್ನವು ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆಗಳನ್ನು ಒಂದೇ ಸ್ಥಳದಲ್ಲಿ ಕಲಿಯಲು ಮತ್ತು ತರಬೇತಿ ಪಡೆಯಲು ಉತ್ತಮ ಅವಕಾಶ ಕಲ್ಪಿಸಲಿದೆ. ವಿಶೇಷವಾಗಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಸ್ಕೇಟಿಂಗ್ ಹಾಗೂ ಬ್ಯಾಡ್ಮಿಂಟನ್ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಲಿದೆ.

ಕೇವಲ ಶಾಲೆಯ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ದೊಡ್ಡಬಳ್ಳಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಕ್ರೀಡಾಸಕ್ತ ವಿದ್ಯಾರ್ಥಿಗಳಿಗೂ ಈ ಕ್ರೀಡಾ ಸೌಲಭ್ಯಗಳನ್ನು ಬಳಸಿಕೊಳ್ಳುವ ಅವಕಾಶ ಕಲ್ಪಿಸುವ ಉದ್ದೇಶವನ್ನು ಶಾಲಾ ಆಡಳಿತ ಹೊಂದಿದೆ. ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಶಾಲೆಯನ್ನು ಸಂಪರ್ಕಿಸಿ, ಸೂಕ್ತ ತರಬೇತಿ ಪಡೆದು ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬಹುದು.

ಇಂದಿನ ದಿನಗಳಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಪ್ರಾಮುಖ್ಯತೆ ನೀಡುವುದು ಅತ್ಯಗತ್ಯ. ಮಕ್ಕಳಲ್ಲಿ ಬಾಲ್ಯದಿಂದಲೇ ಕ್ರೀಡಾ ಮನೋಭಾವ ಬೆಳೆಸುವುದರಿಂದ ಅವರ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಯಾಗುವುದರ ಜೊತೆಗೆ, ಭವಿಷ್ಯದಲ್ಲಿ ಕ್ರೀಡಾ ಕ್ಷೇತ್ರವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಲು ಸಹ ಅವಕಾಶ ದೊರೆಯುತ್ತದೆ.

ದೊಡ್ಡಬಳ್ಳಾಪುರದಲ್ಲಿ ಇದೇ ರೀತಿಯ ವಿವಿಧ ಕ್ರೀಡಾ ಸೌಲಭ್ಯಗಳನ್ನು ಒಂದೇ ಆವರಣದಲ್ಲಿ ಪರಿಚಯಿಸಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಂತಸ ಮೂಡಿಸಿದೆ. ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಮೂಲಕ ದೊಡ್ಡಬಳ್ಳಾಪುರದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಗುರಿಯೊಂದಿಗೆ ನ್ಯಾಷನಲ್ ಪ್ರೈಡ್ ಶಾಲೆ ಮುಂದಡಿ ಇಟ್ಟಿದೆ.

ಶಿಕ್ಷಣದ ಜೊತೆಗೆ ಕ್ರೀಡೆಗೆ ಆದ್ಯತೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ನ್ಯಾಷನಲ್ ಪ್ರೈಡ್ ಶಾಲೆಯ ಹೊಸ ಹೆಜ್ಜೆ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನ್ಯಾಷನಲ್ ಫ್ರೈಡ್ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಸಿ. ನಾಗರಾಜ್ (ಹೋಟೆಲ್ ರಾಜು ), ಕಾರ್ಯದರ್ಶಿ ಸಿ. ಎನ್. ಸತೀಶ್ ರಾಜ್, ಟ್ರಸ್ಟಿಗಳಾದ ರಶ್ಮಿ ಸತೀಶ್ ರಾಜ್,ಎನ್. ಸುನಂದಾ, ಸಿ. ಅನುಸೂಯ ರವರು ಭಾಗವಹಿಸಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ