Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಒಳ ಮೀಸಲಾತಿ ಜಾರಿಗೆ ಬಂದ್ ಬೇಡ, ಆಗಸ್ಟ್ ತಿಂಗಳಲ್ಲಿ ಮಾದಿಗರಿಗೆ ಸ್ವತಂತ್ರ-ಆಂಜನೇಯ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಊಟ ಸಿದ್ಧವಾಗುತ್ತಿದೆ. ೩೫ ವರ್ಷ ಹಸಿವು ಅನುಭವಿಸಿದವರು ಒಂದು ತಿಂಗಳು ಕಾಯಲು ಏನು ಕಷ್ಡ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದರು.

ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಒಳಮೀಸಲಾತಿ ಹೋರಾಟಕ್ಕೆ ಧೀರ್ಘ ಇತಿಹಾಸ ಇದೆ. ಈಗ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಜಾರಿಗೊಳಿಸಲು ಬದ್ಧರಾಗಿದ್ದು, ಎಲ್ಲ ರೀತಿಯ ಕ್ರಮಕೈಗೊಂಡಿದ್ದಾರೆ. ನಾವು ಬೇಡವೆಂದರು ಒಳಮೀಸಲಾತಿ ಜಾರಿಗೊಳಿಸುವುದಾಗಿ ಹೇಳಿದ್ದಾರೆ ಎಂದರು.

ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿ ಸಿದ್ದರಾಮಯ್ಯ ಅವರ ಕೈ ಸೇರುತ್ತಿದ್ದಂತೆ ಜಾರಿಗೊಳಿಸಲಿದ್ದಾರೆ. ಇಂತಹ ಸಂದರ್ಭ ಅನಗತ್ಯ, ರಾಜಕೀಯ ಪ್ರೇರಿತ ಹೇಳಿಕೆಗಳು ಸಲ್ಲದು ಎಂದು ತಿಳಿಸಿದರು.

 ಈಗಾಗಲೇ ಮೂರೂವರೆ ದಶಕಗಳಿಂದ ಹೋರಾಟ ನಡೆದಿದೆ. ಆಂಧ್ರದಲ್ಲಿ ಮಂದಕೃಷ್ಣ ಮಾದಿಗ ನೇತೃತ್ವದಲ್ಲಿ ನಡೆದ ಹೋರಾಟ ಕರ್ನಾಟಕಕ್ಕೆ ವಿಸ್ತಾರವಾಯಿತು. ಹರಿಯಾಣ, ಆಂಧ್ರ, ತೆಲಂಗಾಣದಲ್ಲಿ ಜಾರಿಯಾಗಿದೆ.

ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಬದ್ಧ ಎಂದು ನಮ್ಮ ಸರ್ಕಾರ ಹೇಳಿತ್ತು. ಅಕ್ಟೋಬರ್ ೨೨ ರಂದು ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ನ್ಯಾ.ನಾಗಮೋಹನ್ ದಾಸ್ ಆಯೋಗ ೨೦೧೧ ಗಣತಿ, ಸದಾಶಿವ ಆಯೋಗ, ಮಾಧುಸ್ವಾಮಿ ವರದಿ ಗಮನಿಸಿದಾಗ ಆದಿ ಕರ್ನಾಟಕ, ಆದಿಆಂದ್ರ ವರ್ಗದ ಗೊಂದಲ ಉಂಟಾಗಿದ್ದರಿಂದ ಜನಸಂಖ್ಯೆ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹೊಸದಾಗಿ ಸಮೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿ ಸಮೀಕ್ಷೆ  ನಡೆಸಿದೆ ಎಂದರು.

 ಈಗಾಗಲೇ ನಾಗಮೋಹನ್ ದಾಸ್ ಅವರು ಮೇ.೫ ರಂದು ಮೊಬೈಲ್ ಆಪ್ ಬಳಸಿ ಸಮೀಕ್ಷೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಆಗಿಲ್ಲ ಎಂಬ ಕಾರಣಕ್ಕೆ ಜೂನ್ ೬ ರವರೆಗೆ ಸಮೀಕ್ಷೆ ಆಗಿದೆ. ನಿಖರವಾದ ಅಂಕಿ ಅಂಶಗಳು ಬರಬೇಕು. ಮುಂದೆ ಕೋರ್ಟ್‌ನಲ್ಲಿ ಪ್ರಶ್ನೆ ಮಾಡುವಂತೆ ಆಗಬಾರದು ಎನ್ನುವ ಕಾರಣಕ್ಕೆ ಇಷ್ಟೆಲ್ಲಾ ಪ್ರಕ್ರಿಯೆ ಆಗಿದೆ.

ಆದರೆ, ಕೆಲ ಹೋರಾಟಗಾರರು, ಬಿಜೆಪಿಯವರು ವಿಳಂಬ ಆಗಿದೆ ಎಂದು ದೂರುತ್ತಿದ್ದಾರೆ. ಇದು ಸಮಂಜಸವಲ್ಲ ೩೫ ವರ್ಷ ಕಾದಿದ್ದೇವೆ. ಸ್ವಲ್ಪ ದಿನ ಕಾಯಬೇಕು. ಪ್ರತಿಭಟನೆ, ಬಂದ್ ಸಲ್ಲದು. ಇದನ್ನು ಕೈಬಿಡಿ.

ಬೇಗ ಅನುಷ್ಠಾನ ಮಾಡಿ ಎಂದು ರಾಹುಲ್ ಗಾಂಧಿ ಅವರೇ ಹೇಳಿದ್ದಾರೆ. ಅಲ್ಲಿಗೆ ಹೋಗಿ ಮುತ್ತಿಗೆ ಹಾಕುವುದರಲ್ಲಿ ಅರ್ಥ ಇಲ್ಲ. ಸರ್ಕಾರಕ್ಕೆ ಮುಜುಗರ ಮಾಡುವುದು ಬೇಡ. ಒಂದು ತಿಂಗಳು ಕಾಯೋಣ. ಆಗಸ್ಟ್ ತಿಂಗಳಲ್ಲಿ ಜಾರಿ ಆಗಲಿದೆ ಎಂದು ಹೇಳಿದರು.

 ಒಂಬತ್ತು ತಿಂಗಳ ಕಾಲ ಎಲ್ಲ ಹುದ್ದೆಗಳನ್ನು ಭರ್ತಿ ಮಾಡದೆ ಖಾಲಿ ಇಡಲಾಗಿದೆ. ಸರ್ಕಾರಿ ಹುದ್ದೆಗಳ ವಯೊಮಿತಿ ಹೆಚ್ಚುವರಿ ಕೊಡುವುದು ಸರ್ಕಾರದ ಜವಾಬ್ದಾರಿ. ಆಗಸ್ಟ್ ಸ್ವತಂತ್ರ ಪಡೆದ ತಿಂಗಳು. ಒಳಮೀಸಲಾತಿ ವಂಚಿತವಾಗಿದ್ದ ಮಾದಿಗ ಸಮುದಾಯಕ್ಕೆ ಎಲ್ಲ ರೀತಿಯ ಸೌಲಭ್ಯಗಳ ಸುರಿಮಳೆ ಆಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಶರಣಪ್ಪ, ರವೀಂದ್ರ, ಮುಖಂಡ ಲಿಂಗರಾಜು ಉಪಸ್ಥಿತರಿದ್ದರು.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು