Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಸ್ಥಿರ ಅಭಿವೃದ್ಧಿಗಾಗಿ ನವೀನ ಸಿಎಸ್ ಆರ್ ನಿರ್ವಹಣಾ ಕ್ರಮಗಳು

ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಕಾಲೇಜು ಆವರಣದಲ್ಲಿ ಪಿಎಂ ಉಷಾ
ಯೋಜನೆಯ ಅಡಿಯಲ್ಲಿ ಸ್ಥಿರ ಅಭಿವೃದ್ಧಿಗಾಗಿ ನವೀನ ಸಿಎಸ್ ಆರ್ ನಿರ್ವಹಣಾ ಕ್ರಮಗಳುಎಂಬ ವಿಷಯದ ಮೇಲೆ ಒಂದು ದಿನದ ರಾಜ್ಯ ಮಟ್ಟದ ಸಮ್ಮೇಳನ ಆಯೋಜಿಸಲಾಗಿತ್ತು.

ದಾವಣಗೆರೆ ವಿವಿಯ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಡೀನ್ ಪ್ರೊ. ಶ್ರೀನಿವಾಸ್ ಕೆ.ಟಿ ಮಾತನಾಡಿ, ನವೀನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿರ್ವಹಣಾ ಕ್ರಮಗಳು ಮತ್ತು ಸ್ಥಿರ ಅಭಿವೃದ್ಧಿಯಲ್ಲಿ ಅವುಗಳ ಮಹತ್ವದ ಬಗ್ಗೆ ವಿವರವಾದ ಉಪನ್ಯಾಸ ನೀಡಿದರು.
ಸಂಸ್ಥೆಗಳು ಸಿಎಸ್ ಆರ್ ನಿಧಿಯನ್ನು ತಮ್ಮ ಮೂಲ ವ್ಯವಹಾರ ತಂತ್ರಗಳಲ್ಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ಅವರು ಒತ್ತಿ ಹೇಳಿದರು.


ಮೈಸೂರು ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಹಾಗೂ ಅಧ್ಯಯನ ಮಂಡಳಿಯ ಅಧ್ಯಕ್ಷ ಮತ್ತು ಸಂಪರ್ಕಾಧಿಕಾರಿ ಪ್ರೊ. ಬಿ. ನಾಗರಾಜು ಮಾತನಾಡಿ ಸಮಾಜದ ಹೊಣೆಗಾರಿಕೆ, ಕುಟುಂಬ ಮತ್ತು ಪ್ರಕೃತಿ ನಡುವಿನ ಅವಿನಾಭಾವ ಸಂಬಂಧ, ಶಿಕ್ಷಣ, ಆರೋಗ್ಯ ಹಾಗೂ ಪರಿಸರದ ಪ್ರಸ್ತುತ ಸ್ಥಿತಿ ಮತ್ತು ಭಾರತದ ಅಭಿವೃದ್ಧಿ ದಿಕ್ಕಿನ ಬಗ್ಗೆ ಅವರು ಸಮಗ್ರವಾಗಿ ವಿಶ್ಲೇಷಿಸಿದರು.

ಅಧ್ಯಕ್ಷೀಯ ಭಾಷಣದಲ್ಲಿ ಪ್ರೊ. ಕೋಟ್ರಪ್ಪ ಸಿ.ಕೆ. ಅವರು ಇಂತಹ ಶೈಕ್ಷಣಿಕ ವೇದಿಕೆಗಳು ನವೀನ ಸಿಎಸ್ ಆರ್ ಅಭ್ಯಾಸಗಳನ್ನು ಉತ್ತೇಜಿಸಲು ಮಹತ್ವದ್ದಾಗಿವೆ ಎಂದು ತಿಳಿಸಿ, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಕರೆ ನೀಡಿದರು. ವಿವಿಧ ಕಾಲೇಜುಗಳ ಸಂಪನ್ಮೂಲ ವ್ಯಕ್ತಿಗಳು ಡಾ ಸತ್ಯನಾರಾಯಣ, ಡಾ.ವೆಂಕಟೇಶಬಾಬು, ಪೊ. ಸಿಕೆ ಮಹೇಸ್ವರಪ್ಪ, ಪ್ರೊ. ಕೆ ರಾಮರಾವ್‌, ಪ್ರೊ. ರಾಜಶೇಖರಪ್ಪ ಮುಂತಾದವರು ಸಮ್ಮೇಳನದಲ್ಲಿ ಭಾಗವಹಿಸಿ ಸಿಎಸ್ ಆರ್ ಮತ್ತು ಸ್ಥಿರ ಅಭಿವೃದ್ಧಿಯ ವಿವಿಧ ಆಯಾಮಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪ್ರತಿನಿಧಿಗಳು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಮ್ಮೇಳನದ ವಿಷಯಕ್ಕೆ ಸಂಬಂಧಿಸಿದ ಪೋಸ್ಟರ್ ಪ್ರದರ್ಶನಗಳನ್ನು ನೀಡಿ ವಿಷಯಗಳನ್ನು ಮಂಡನೆ ಮಾಡಿದರು.

ಕಾಲೇಜಿನ ಬೋಧಕ ಮತ್ತು ಬೋದಕೇತರ ವರ್ಗದವರು ಹಾಗೂ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಿದರು.
ಈ ಸಮ್ಮೇಳನವು ಜ್ಞಾನ ಹಂಚಿಕೆ
, ಸಂವಾದ ಮತ್ತು ಸ್ಥಿರ ಸಿಎಸ್ ಆರ್ ಕ್ರಮಗಳ ಪ್ರಚಾರಕ್ಕೆ ಪರಿಣಾಮಕಾರಿ ವೇದಿಕೆಯಾಗಿತ್ತು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು