Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಾಂಗ್ರೆಸ್ ವತಿಯಿಂದ ಡಿ.27ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಕಾಂಗ್ರೆಸ್ ವತಿಯಿಂದ ಡಿ.27ರಂದು ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯ ಸಮಾವೇಶಕ್ಕೆ ಜೈ ಬಾಪು
, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿ ಕ್ಲಬ್ ರಸ್ತೆಯ ಸಿಪಿಇಡ್ ಮೈದಾನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ, ಸಮಾವೇಶ ನಡೆಯಲಿರುವ ಪ್ರದೇಶಕ್ಕೆ ಮಹಾತ್ಮ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಲಾಗಿದೆ. 26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ವೀರಸೌಧ ಬಳಿಯ ಗಾಂಧಿ ಬಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಗಾಂಧಿ ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಚಾರ. ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್​ಲಾಲ್ ನೆಹರು ಅವರು ಅಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು.

ಅವರೂ ಸೇರಿ ಬೆಳಗಾವಿಯಲ್ಲಿ ಈ ಅಧಿವೇಶನ ಮಾಡಿದ್ದರು. ಅಂದು 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಡಿಕೆಶಿ ಮಾಹಿತಿ ನೀಡಿದರು.

ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರು, ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಹಾಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ಸಂಸತ್ ಸದಸ್ಯರು, ಶಾಸಕರು, ರಾಜ್ಯದ ವಿವಿಧೆಡೆ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದೇವೆ, ಬಹುತೇಕ ಎಲ್ಲರೂ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಬೆಳಗಾವಿಯಲ್ಲಿ 1924ರಲ್ಲಿ ನಡೆದ ಅಧಿವೇಶನದ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿ ಪುಸ್ತಕ ಮಾಡಿ ಬಿಡುಗಡೆ ಮಾಡುತ್ತಿದ್ದೇವೆ. 26ರಂದು ಬೆಳಗ್ಗೆ 10 ಗಂಟೆಗೆ ವೀರಸೌಧದಲ್ಲಿ ಗಾಂಧಿ ಅವರ ಪುತ್ಥಳಿ ಅನಾವರಣ ಮಾಡಲಾಗುವುದು. ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು.

ಬೆಳಗ್ಗೆ 10.45ಕ್ಕೆ ಖಾದಿ ಮೇಳ ಉದ್ಘಾಟನೆ ಮಾಡಲಾಗುವುದು. 11.15ಕ್ಕೆ ಗಂಗಾಧರ ದೇಶಪಾಂಡೆ ಅವರ ಸ್ಮಾರಕವನ್ನು ನಾನು ಹಾಗೂ ಮುಖ್ಯಮಂತ್ರಿಗಳು ಅನಾವರಣ ಮಾಡಲಿದ್ದೇವೆ. ನಂತರ ಗಂಗಾಧರ ದೇಶಪಾಂಡೆ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು.

ಮಧ್ಯಾಹ್ನ 3 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ರಾತ್ರಿ 7ಕ್ಕೆ ಎಐಸಿಸಿ ಅಧ್ಯಕ್ಷರಿಂದ ಭೋಜನಕೂಟ ಏರ್ಪಡಿಸಲಾಗಿದೆ ಎಂದು ಶಿವಕುಮಾರ್ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಡಿ.27ರಂದು ಬೆಳಗ್ಗೆ 10.30ಕ್ಕೆ ಗಾಂಧಿ ಪ್ರತಿಮೆಯನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಅನಾವರಣಗೊಳಿಸಲಿದ್ದಾರೆ.

ಮುಖ್ಯಮಂತ್ರಿಗಳು ಅಧ್ಯಕ್ಷತೆ ವಹಿಸಲಿದ್ದು, ಸಭಾಧ್ಯಕ್ಷ ಯು.ಟಿ ಖಾದರ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಖಂಡತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗುವುದು. ಸ್ಥಳೀಯ ನಾಯಕರು, ರಾಜ್ಯದ ಎಲ್ಲಾ ಸಂಸದರನ್ನು ನಾವು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. 12 ಗಂಟೆಗೆ ಮುಖ್ಯಮಂತ್ರಿಗಳಿಂದ ಔತಣಕೂಟ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಕಾರಿ ಸಮಿತಿಗೆ ಆಗಮಿಸುವ ಕಾರ್ಯಕಾರಿ ಸಿಮಿತಿ ಸದಸ್ಯರನ್ನು ಸೇವಾದಳದ ಕಾರ್ಯಕರ್ತರು ಪಾದಯಾತ್ರೆ ಮೂಲಕ ಸಭೆಯ ಜಾಗಕ್ಕೆ ಗೌರವಯುತ ಪಥಸಂಚಲನದ ಮೂಲಕ ಕರೆದೊಯ್ಯಲಿದ್ದಾರೆ. ನಂತರ ವಿವಿಧ ವಿಚಾರಗಳ ಚರ್ಚೆ ಮಾಡಿ ತೀರ್ಮಾನ ಮಾಡಲಿದ್ದಾರೆ ಎಂದರು.

ರಾಜ್ಯಾದ್ಯಂತ ಸರ್ಕಾರ ಹಾಗೂ ಪಕ್ಷದ ವತಿಯಿಂದ ಶತಮಾನೋತ್ಸವ ನಿಮಿತ್ತ ಗಾಂಧಿ ಭಾರತ ಕಾರ್ಯಕ್ರಮ ಆಚರಿಸಲಾಗುವುದು. ಶಾಲಾ-ಕಾಲೇಜುಗಳಲ್ಲಿ ಚರ್ಚಾಸ್ಪರ್ಧೆ ನಡೆಸಲಾಗುವುದು.

ಗಾಂಧಿ ತತ್ವ, ಆಚಾರ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಲಾಗುವುದು. ಪಕ್ಷ ಹಾಗೂ ಸರ್ಕಾರದ ವತಿಯಿಂದ ಈಗಾಗಲೇ ಗಾಂಧಿ ಜಯಂತಿ ಅಂಗವಾಗಿ ಕಳೆದ ಅಕ್ಟೋಬರ್ 2ರಂದು ಗಾಂಧಿ ನಡಿಗೆ ಪಾದಯಾತ್ರೆ ಮಾಡಿದ್ದೇವೆ, ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಮಾಡಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ದೀಪಾಲಂಕಾರ:
ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ 1904ರಲ್ಲಿ ಆರಂಭವಾಗಿತ್ತು.
1924ರಲ್ಲಿ ನಡೆದಿದ್ದ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಅದರ ಫೋಟೋಗಳಿವೆ. ವಿಜಯನಗರದ ವಿರೂಪಾಕ್ಷ ದೇಗುಲ ಮಾದರಿಯ ದೀಪಾಲಂಕಾರದ ಫೋಟೋ ಲಭ್ಯವಾಗಿದೆ.

ಈ ಬಾರಿಯೂ ದೀಪಾಲಂಕಾರ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದ ಜನರು ಸೇರಿದಂತೆ ರಾಜ್ಯ ಹೊರ ರಾಜ್ಯಗಳಿಂದ ಬರುವ ಜನರು ದೀಪಾಲಂಕಾರ ವೀಕ್ಷಣೆ ಮಾಡಿ ಕಣ್ತುಂಬಿಕೊಳ್ಳಬೇಕು ಎಂದು ಶಿವಕುಮಾರ್ ಮನವಿ ಮಾಡಿದರು. ಸಚಿವರಾದ ಜಮೀರ್ ಅಹ್ಮದ್, ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಮಾಗಡಿ ಬಾಲಕೃಷ್ಣ, ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಸೇರಿ ಮತ್ತಿತರರು ಇದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು