Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಜವಾಹರ್ ಲಾಲ್ ನೆಹರೂ ಆಧುನಿಕ ಭಾರತದ ಶಿಲ್ಪಿ-ಸಿಎಂ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರ್‌ಲಾಲ್ ನೆಹರೂರವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ನೆಹರೂರವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಅವರನ್ನು ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು. ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ದೇಶದಲ್ಲಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು.

ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್  ಕಾಂಗ್ರೆಸ್ ಕಟ್ಟಿದರು. 17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು.

ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು. ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರೂ ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು ಎಂದು ಸಿಎಂ ಹೇಳಿದರು.

ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ. ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಮ್, ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅದಕ್ಕೆ ನೆಹರೂರವರು ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು