Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಜನಸಾಮಾನ್ಯರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಜೆಡಿಎಸ್

ಚಂದ್ರವಳ್ಳಿ ನ್ಯೂಸ್, ಹಗರಿಬೊಮ್ಮನಹಳ್ಳಿ:
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಯು.ಕೆ. ಕೊಟ್ರಬಸಪ್ಪ ಬಯಲು ಜಾಗದಲ್ಲಿ ಹಮ್ಮಿಕೊಂಡ ಜನರೊಂದಿಗೆ ಜನತಾದಳ ಹಾಗೂ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮಿರಾಜ್ ನಾಯ್ಕ್ ಅವರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉದ್ಘಾಟಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಇದಕ್ಕೂ ಮೊದಲು ಬೈಕ್ ಹಾಗೂ ಆಟೋ ರ‍್ಯಾಲಿ ಮೂಲಕ ಅದ್ದೂರಿ ಸ್ವಾಗತ ಕೋರಿದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಮಹಾಜನತೆಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿ, ಜನತದಾಳ ಪಕ್ಷ ಎಲ್ಲಿದೆ ಎಂದರೇ ನಿಮ್ಮೆಲ್ಲರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದೆ ಎಂಬುದನ್ನು ತೋರಿಸಿದ ಜನತೆಗೆ ಅಭಿನಂದನೆಗಳನ್ನು ನಿಖಿಲ್ ತಿಳಿಸಿದರು.

ರೈತರ ಆತ್ಮಹತ್ಯೆ ತಡೆಯಲು ವಿಫಲವಾದ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ, ನೀರಾವರಿಗೆ ಮೀಸಲಾಗಿದ್ದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸುವ ಮೂಲಕ ರಾಜ್ಯದ ರೈತರಿಗೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡಿದೆ ಎಂದು ತಿಳಿಸಿ, ಈ ಲೂಟಿ ಸರ್ಕಾರವನ್ನು ಕಿತ್ತೊಗೆದು ರೈತಪರ ಚಿಂತನೆ ಹೊಂದಿರುವ ಎನ್ ಡಿಎ ಸರ್ಕಾರವನ್ನು ತರುವ ಸಂಕಲ್ಪ ಮಾಡುವಂತೆ ನಿಖಿಲ್ ಕರೆ ನೀಡಿದರು.

ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಸಾಹೇಬರು ಕಟ್ಟಿದ ಜನತದಾಳ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರ ಪಡೆಯಿದೆ. ಯಾವುದೇ ಸ್ಥಾನ-ಮಾನದ  ಫಲಾಪೇಕ್ಷೆ ಇಲ್ಲದೇ, ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರ ಪಡೆಯಿದೆ.

ಜನತದಾಳ ಪಕ್ಷ ಜನಸಾಮಾನ್ಯರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದು, ಮುಂಬರುವ ದಿನಗಳಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳಲಿದೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡ ಜನರೊಂದಿಗೆಜನತಾದಳ - ಜೆಡಿಎಸ್ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮದ ವಿಹಂಗಮ ನೋಟ‌.      

ಹಗರಿಬೊಮ್ಮನಹಳ್ಳಿ ಕ್ಷೇತ್ರದ ಅಪಾರ ಸಂಖ್ಯೆಯ ಜನ ಬೆಂಬಲದೊಂದಿಗೆ #ಜನರೊಂದಿಗೆ ಜನತಾದಳ ಸಮಾವೇಶವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಮುಖಂಡರಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು.

ಇದೇ ವೇಳೆ ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡ ಸಾಹೇಬರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಕುಮಾರಣ್ಣ ಅವರ ಸಾಧನೆ ಹಾಗೂ ಕೊಡುಗೆಯನ್ನು ತಿಳಿಸಿ, ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟಲು ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ನಿಖಿಲ್ ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಶಾಸಕರಾದ ಅನಿಲ್ ಲಾಡ್, ಹೆಚ್.ಎಸ್. ಶಿವಶಂಕರ್, ಜಿಲ್ಲಾಧ್ಯಕ್ಷ ಬಾದಾಮಿ ಮೃತ್ಯುಂಜಯ, ತಾಯಣ್ಣ, ಚಿದಾನಂದ, ಮುಖಂಡರಾದ ಹರ್ಷವರ್ಧನ,  ಮಲ್ಲಿಕಾರ್ಜುನ, ಭರಮರೆಡ್ಡಿ, ರಾಜು ನಾಯಕ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಹಾಗೂ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಮಹಾಜನತೆ ಉಪಸ್ಥಿತರಿದ್ದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು