Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ನ್ಯಾಯಾಂಗ ತರಬೇತಿ: ಹಿಂದುಳಿದ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಹಿಂದುಳಿದ ವರ್ಗ-1, 2ಎ, 3ಬಿ, ವರ್ಗಕ್ಕೆ ಸೇರಿದ ನಿರುದ್ಯೋಗಿ ಕಾನೂನು ಪದವೀಧರರನ್ನು ನ್ಯಾಯಾಂಗ ತರಬೇತಿ ಯೋಜನೆಯಡಿ 2025-26ನೇ ಸಾಲಿನಲ್ಲಿ ಆಯ್ಕೆ ಮಾಡಲು ಖಾಲಿ ಇರುವ 10 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಅರ್ಜಿ ಸಲ್ಲಿಸಲು ಇರುವ ನಿಬಂಧನೆಗಳು: ಅಭ್ಯರ್ಥಿಯು ವರ್ಗ-1, 2ಎ, 3ಬಿ, ವರ್ಗಕ್ಕೆ ಸೇರಿದ ಅಭ್ಯರ್ಥಿಗಳಾಗಿರಬೇಕು. ಆಯ್ಕೆ ಮಾಡಲಾಗುವ ಒಟ್ಟಾರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಲ್ಲಿ ಶೇ.33.33 ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಿಡಲಾಗುವುದು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಹಿಂದೆ ಎರಡು ವರ್ಷಗಳಗೊಳಗಾಗಿ ಅಭ್ಯರ್ಥಿಯು ಕಾನೂನು ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು. ಸರ್ಕಾರಿ ಆದೇಶದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ 2ಎ, 3ಎ, 3ಬಿ ವರ್ಗಗಳ (ಅಲ್ಪ ಸಂಖ್ಯಾತರ ಜಾತಿಗಳನ್ನು ಹೊರತುಪಡಿಸಿ) ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ವಾರ್ಷಿಕ ಆದಾಯ ರೂ. 2,50,000/- ಹಾಗೂ ಪ್ರವರ್ಗ-1 ಅಭ್ಯರ್ಥಿಗಳು ರೂ.3,50,00 ಗಳ ಆದಾಯ ಮೀರಿಬಾರದು. 

ಈ ತರಬೇತಿಯು 4 ವರ್ಷಗಳಾಗಿದ್ದು, ತರಬೇತಿ ಅವಧಿಯಲ್ಲಿ ನಿಯಮಾನುಸಾರ ಭತ್ಯೆ ನೀಡಲಾಗುವುದು. ಆಯ್ಕೆಯನ್ನು ಜಿಲ್ಲಾ ಆಯ್ಕೆ ಸಮಿತಿ ಮೂಲಕ ನಡೆಸಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 38 ವರ್ಷ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೊಂದಾಯಿಸಿರಬೇಕು. ನೊಂದಾಯಿಸಿಲ್ಲದ ಪಕ್ಷದಲ್ಲಿ ಆಯ್ಕೆಯಾದ ತಕ್ಷಣ ನೊಂದಾಯಿಸದ ಹೊರತು ಶಿಷ್ಯವೇತನ ಪಾವತಿಯಾಗುವುದಿಲ್ಲ.


 ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಜಾತಿ, ಆದಾಯ ಪ್ರಮಾಣ ಪತ್ರ ಅಥವಾ ಇತರೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿ ಆಯ್ಕೆಯಾದ ಪಕ್ಷದಲ್ಲಿ ಅಂತವರನ್ನು ಶಿಕ್ಷೆಗೆ ಗುರಿಪಡಿಸುವುದಲ್ಲದೇ, ಶಿಷ್ಯ ವೇತನದ ಜೊತೆಗೆ ಶೇ.10ರ ಬಡ್ಡಿಯನ್ನು ಭೂ ಕಂದಾಯ ಬಾಕಿ ರೂಪದಲ್ಲಿ ವಸೂಲಿ ಮಾಡಲಾಗುವುದು. ಅಲ್ಲದೇ ತರಬೇತಿಯನ್ನು ಮಧ್ಯದಲ್ಲಿ ಬಿಟ್ಟಲ್ಲಿ ಇಲಾಖೆಯಿಂದ ಪಡೆದ ಶಿಷ್ಯವೇತನವನ್ನು ಹಿಂತಿರುಗಿಸಬೇಕಾಗುವುದು.

ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು 20 ವರ್ಷಗಳಿಗೆ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಅಪೂರ್ಣ ಅವಧಿ ಮೀರಿದ ತಪ್ಪು ಮಾಹಿತಿ ಅಥವಾ ನಿಗದಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು. ಅರ್ಜಿದಾರರು ಬೇರೆ ಇಲಾಖೆಯಿಂದ ತರಬೇತಿ ಭತ್ಯೆ ಪಡೆಯುತ್ತಿದ್ದಲ್ಲಿ ಅರ್ಹರಿರುವುದಿಲ್ಲ. ಅರ್ಜಿದಾರರು ಸ್ಥಳೀಯ ಸಂಸ್ಥೆ ಹಾಗೂ ಸೊಸೈಟಿ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಯಾವುದೇ ಸದಸ್ಯರಾಗಿದ್ದಲ್ಲಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.


ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹಾಗೂ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಲು ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಡಿ.ದೇವರಾಜ ಅರಸು ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು