ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕುಲಶಾಸ್ತ್ರ ಅಧ್ಯಯನ ವರದಿ ಆಧರಿಸಿ, ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರ ಮಾಡಿದ ಶಿಫಾರಸ್ಸನ್ನು ಕೇಂದ್ರ ಸರ್ಕಾರಕ್ಕೆ ತಿರಸ್ಕರಿಸಿದೆ. ರಾಜ್ಯದ ವಿವಿಧ ಜಿಲ್ಲೆಯಲ್ಲಿರುವ ಸುಮಾರು 2.5 ಲಕ್ಷ ಕಾಡುಗೊಲ್ಲರ ಅಭಿವೃದ್ಧಿಗೆ ಇದು ಮಾರಕವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಹಿರಿಯೂರು ನಗರದ ನಂಜಯ್ಯನಕೊಟ್ಟಿಗೆಯಲ್ಲಿನ ಒಕ್ಕಲಿಗರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ಹಿರಿಯೂರು ತಾಲ್ಲೂಕಿನಲ್ಲಿ ಸುಮಾರು 60 ಸಾವಿರದಷ್ಟು ಇರುವ ಕಾಡುಗೊಲ್ಲ ಸಮುದಾಯ ಶೈಕ್ಷಣಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಸಾಕಷ್ಟು ಹಿಂದುಳಿದೆ. ಸಮುದಾಯ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಶಿಫಾರಸ್ಸು ಪೂರಕವಾಗಿತ್ತು. ರಾಜ್ಯ ವಿರೋಧ ಪಕ್ಷಗಳ ನಾಯಕರು ಸಹ ಕೇಂದ್ರ ಸರ್ಕಾರದ ಮನವೊಲಿಸಿ ಶಿಫಾರಸ್ಸಿನ ಅಂಗಿಕಾರಕ್ಕೆ ಪ್ರಯತ್ನಿಸುವುದಾಗಿ ಹೇಳಿದ್ದರು. ಆದರ ಕೇಂದ್ರ ಸರ್ಕಾರ ನಡೆ ವ್ಯತಿರಿಕ್ತವಾಗಿದ್ದು ವಿರೋಧ ಪಕ್ಷ ನಾಯಕರು ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದರು.
ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮರು ತೀರ್ಮಾನ ಕೈಗೊಂಡು, ಕೇಂದ್ರ ಸರ್ಕಾರದ ಮೇಲೆ ಮತ್ತೆ ಒತ್ತಡ ಹೇರಿ ಈ ಸಮುದಾಯಕ್ಕೆ ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ನ್ಯಾಯ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.
ನೀರಾವರಿ ಸೇರಿದಂತೆ ಸುಮಾರು ರೂ.2,500 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಬಡವರು ಹಾಗೂ ವಸತಿ ರಹಿತರಿಗೆ ಸುಮಾರು 5 ಲಕ್ಷ ನಿವೇಶನಗಳನ್ನು (ಸೈಟ್) ಗುರುತಿಸಿ ಹಂಚುವ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಲಾಗಿದೆ.
ರಾಜ್ಯ ಸರ್ಕಾರವು ಈ ಭಾಗದ ಅಭಿವೃದ್ಧಿಗೆ ಹಾಗೂ ನೀರಾವರಿ ಯೋಜನೆಗಳ ಮುಂದುವರಿಕೆಗೆ ಸಂಪೂರ್ಣ ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ , ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ, ಸಮಾಜ ಕಲ್ಯಾಣ ಸಚಿವ ಕೆ.ಹೆಚ್.ಮುನಿಯಪ್ಪ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೇ,ಸಣ್ಣ ನೀರಾವರಿ ಸಚಿವ ಅಜಯ್ ಸಿಂಗ್, ಮುಜುರಾಯಿ ಖಾತೆ ಸಚಿವ ಬಸಂತಪ್ಪ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಹಾಗೂ ಶಾಸಕ ಬಿ.ಜೆ. ಗೋವಿಂದಪ್ಪ,ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್. ಮಂಜುನಾಥ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ಬೊವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ.ಬಿ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಆರೊಗೆರೆ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಶಾಸಕ ಡಿ.ಟಿ. ಶ್ರೀನಿವಾಸ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರು ಶಿವಣ್ಣ ಆರ್. ಗಂಜಿಗಟ್ಟೆ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್ಪೀರ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಎಂ.ಚಂದ್ರಪ್ಪ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಇದ್ದರು.




