Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಐತಿಹಾಸಿಕ ಕೋಟೆ ನಗರಿಯಲ್ಲಿ ಕನ್ನಡ ಕಲರವ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ರಾಜ್ಯೋತ್ಸವ ಅಂಗವಾಗಿ ಶುಕ್ರವಾರ ಆಯೋಜಿಸಲಾದ ಸ್ತಬ್ಧಚಿತ್ರ ಮೆರವಣಿಗೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ತಾಯಿ ಭುವನೇಶ್ವರಿ ಭಾವಚಿತ್ರ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಿದರು.

ಆಕರ್ಷಕ ಸ್ತಬ್ದಚಿತ್ರ ಮೆರವಣಿಗೆ
ನಗರದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಕಲರವವನ್ನು ಸ್ತಬ್ದಚಿತ್ರ ಮೆರವಣಿಗೆ ಮೂಡಿಸಿತು. ಹೊನ್ನ ಬಿತ್ತೇವು ಹೊಲಕೆಲ್ಲಾ' ಎಂಬ ನಾಣ್ನುಡಿಯಂತೆ ಜೋಡೆತ್ತುಗಳೊಂದಿಗೆ ಹೊಲದಲ್ಲಿ ಬಿತ್ತನೆ ಮಾಡುತ್ತಿರುವ ರೈತನ ಪ್ರತಿಮೆ ಇರುವ ಕೃಷಿ ಇಲಾಖೆಯ ಸ್ತಬ್ದಚಿತ್ರ ಮೆರವಣಿಗೆಯಲ್ಲಿ ಜನರ ಗಮನ ಸೆಳೆಯುತು.

ಕನ್ನಡಗರ ಅಸ್ಮಿತೆ ಹಣತೆ ಹಚ್ಚಿ ವಿಶಾಲ ಕನ್ನಡ ಸಾಮ್ರಾಜ್ಯ ಸ್ಥಾಪನೆಗೆ ನಾಂದಿ ಹಾಡಿದ ಕದಂಬ ರಾಜ ಮಯೂರ ವರ್ಮನ ಪುತ್ಥಳಿ ಜೊತೆಗೆ, ಜಿಲ್ಲೆಯ ತೋಟಗಾರಿಕೆ ಬೆಳೆಗಳ ಮಾಹಿತಿ ನೀಡುವ ತೋಟಗಾರಿಕೆ ಇಲಾಖೆ ಸ್ತಬ್ದಚಿತ್ರ ನೋಡುಗರಲ್ಲಿ ಕನ್ನಡ ಅಭಿಮಾನವನ್ನು ಮೂಡಿಸಿತು.

ಮಹಿಳೆಯರ ಸಬಲೀಕರಣಕ್ಕೆ ಇಂಬಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗೃಹಲಕ್ಷ್ಮೀ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ ಪುಷ್ಪಾಲಂಕೃತಗೊA ಕೆ.ಎಸ್.ಆರ್.ಟಿ.ಸಿ ಶಕ್ತಿ ಸ್ತಬ್ದಚಿತ್ರಗಳು ಯೋಜನೆಗಳ ಮಹತ್ವ ಸಾರಿದವು.

ಪ್ರಥಮ ಬಹುಮಾನಕ್ಕೆ ಭಾಜವಾದ ಸಾರಿಗೆ ಇಲಾಖೆ ಸ್ತಬ್ದಚಿತ್ರ:
ಸಾರಿಗೆ ಇಲಾಖೆಯ ಪ್ರಾದೇಶಿಕ ಕಚೇರಿಯಿಂದ ರಸ್ತೆ ಸುರಕ್ಷತೆ ಹಾಗೂ ಬ್ಯಾಟರಿ ಚಾಲಿತ ವಿದ್ಯುತ್ ವಾಹನಗಳ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಸ್ತಬ್ದಚಿತ್ರ ಎಲ್ಲರ ಮೆಚ್ಚುಗೆ ಗಳಿಸುವುದರೊಂದಿಗೆ ಪ್ರಥಮ ಬಹುಮಾನಕ್ಕೆ ಭಾಜವಾಯಿತು.

ತೋಟಗಾರಿಕೆ ಹಾಗೂ ಕೆ.ಎಸ್.ಆರ್.ಟಿ ಸ್ತಬ್ದಚಿತ್ರಗಳು ಅನುಕ್ರಮವಾಗಿ ದ್ವೀತಿಯ ಹಾಗೂ ತೃತೀಯ ಬಹುಮಾನ ಗಳಿಸಿದವು. ಶಿಕ್ಷಣ ಹಾಗೂ ಕೃಷಿ ಇಲಾಖೆ ಸ್ತಬ್ದಚಿತ್ರಗಳು ಸಮಾದಾನಕರ ಬಹುಮಾನ ಪಡೆದವು. ಜಿಲ್ಲಾ ಕೈಗಾರಿಕೆ ತರಬೇತಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅರಣ್ಯ, ಪ್ರವಾಸೋದ್ಯಮ ಇಲಾಖೆಗಳ ಸ್ತಬ್ದಚಿತ್ರಗಳು ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸಿದವು.

ಮೆರವಣಿಗೆಯಲ್ಲಿ ಸೇವಾದಳ, ಶಾಲಾ ಮಕ್ಕಳ ವಾದ್ಯ ತಂಡ, ಗೊಂಬೆ ಹಾಗೂ ಪಟ ಕುಣಿತ, ಡೊಳ್ಳು, ವೇಷಗಾರ, ಬ್ಯಾಂಡ್ ಸೇರಿದಂತೆ ಇತರೆ ಸಾಂಸ್ಕೃತಿಕ ಕಲಾ ತಂಡಗಳು ಪಾಲ್ಗೊಂಡಿದ್ದವು. ಮೆರವಣಿಗೆಯು ನಗರದ ಮಹಾತ್ಮ ಗಾಂಧಿ, ಎಸ್.ಬಿ.ಎಂ, ಅಂಬೇಡ್ಕರ್ ಹಾಗೂ ಓಬವ್ವ ವೃತ್ತದ ಮೂಲಕ ಪೊಲೀಸ್ ಕವಾಯತು ಮೈದಾನ ತಲುಪಿದವು.

ವೇಳೆ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್, ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ನಗರ ಸಭೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಡಾ.ನಾಗವೇಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.



 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು