E-PAPER
23 Nov 2026, 09:42:00 PM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಾಂತಾರ ಸಿನೆಮಾ ಹಾಸ್ಯ ಕಲಾವಿದ ಹೃದಯಾಘಾತಕ್ಕೆ ಬಲಿ

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಕಾಂತಾರ ಅಧ್ಯಾಯ-
1 ಚಲನಚಿತ್ರದ ಹಾಸ್ಯ ಕಲಾವಿದ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಆಗುಂಬೆಯಲ್ಲಿ ಜರುಗಿದೆ.

ತೀರ್ಥಹಳ್ಳಿ ತಾಲೂಕಿನ ಸುತ್ತಮುತ್ತ ಕಳೆದ ಕಳೆದ 15 ದಿನಗಳಿಂದ ಕಾಂತಾರ ಅಧ್ಯಾಯ-1ರ ಸಿನೆಮಾದ ಚಿತ್ರೀಕರಣ ನಡೆಯುತ್ತಿತ್ತು.

 ಕೇರಳದ ತ್ರಿಶೂರ್​ ಮೂಲದ ಹಾಸ್ಯ ಕಲಾವಿದ ನಿಜು ಕಲಾಭವನ್(55) ಬುಧವಾರ ಶೂಟಿಂಗ್​ಗೆಂದು ಆಗಮಿಸಿದ್ದರು. ಆಗುಂಬೆಯ ಮಿಥಿಲ ಹೋಂ ಸ್ಟೇನಲ್ಲಿ ನಿಜು ಸೇರಿದಂತೆ ಇತರರಿಗೆ ಉಳಿದುಕೊಳ್ಳಲು ಚಿತ್ರತಂಡ ವ್ಯವಸ್ಥೆ ಮಾಡಿಕೊಟ್ಟಿತ್ತು.


ಬುಧವಾರ ರಾತ್ರಿ ಹೋಂಸ್ಟೇನಲ್ಲಿ ನಿಜು ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆಗ ತಕ್ಷಣವೇ ಅವರನ್ನು ಆಂಬ್ಯುಲೆನ್ಸ್​ನಲ್ಲಿ ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ನಿಜು ಕೊನೆಯುಸಿರೆಳೆದಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಮೃತ ನಿಜು ಅವರ ಕುಟುಂಬಕ್ಕೆ ಮಾಹಿತಿ ನೀಡಿಲಾಗಿದೆ. ಅವರ ಕುಟುಂಬದವರು ತ್ರಿಶೂರ್​ನಿಂದ ಹೊರಟಿದ್ದು, ತೀರ್ಥಹಳ್ಳಿಗೆ ಬಂದ ನಂತರ ದೂರು ಸ್ವೀಕರಿಸಿ ಆಗುಂಬೆ ಪೊಲೀಸರು ಮುಂದಿನ ಕ್ರಮ ಜರುಗಿಸಲಿದ್ದಾರೆ ಎಂದು ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ ಕಲಗುಜ್ಜಿ ತಿಳಿಸಿದ್ದಾರೆ.

ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯ ಶವಗಾರದಲ್ಲಿ ನಿಜು ಶವವನ್ನು ಇಡಲಾಗಿದೆ. ಇದಕ್ಕೂ ಮೊದಲು ಕಾಂತಾರ-2 ಚಿತ್ರ ತಂಡದ ಇಬ್ಬರು ಕಲಾವಿದರು ಸಾವನ್ನಪ್ಪಿದ್ದನ್ನ ಸ್ಮರಿಸಬಹುದಾಗಿದೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!