Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಮರಣ ದಂಡನೆಯಿಂದ ಪಾರಾದ ಕೇರಳದ ನರ್ಸ್ ನಿಮಿಷಾ ಪ್ರಿಯಾ?

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರು ವಿದೇಶದ ಯೆಮೆನ್‌ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಎದುರಿಸುತ್ತಿದ್ದು ಈಗ ನಿರಾಳತೆ ಸಿಕ್ಕಿದೆ.
ಅಲ್ಲಿನ ಸರ್ಕಾರ ನಿಮಿಷಾ ಪ್ರಿಯಾ ಅವರಿಗೆ ನೀಡಲಾದ ಮರಣದಂಡನೆ ರದ್ದುಪಡಿಸಿದೆ ಎಂದು ಕ್ರಿಶ್ಚಿಯನ್ ಧಾರ್ಮಿಕ ನಾಯಕ ಡಾ. ಕೆ.ಎ. ಪಾಲ್
 ಘೋಷಿಸುವ ಮೂಲಕ ಮರಣ ದಂಡನೆಯಿಂದ ನಿಮಿಷಾ ಪ್ರಿಯಾ ಪಾರಾಗಿದ್ದಾರೆ.

ಯೆಮೆನ್ ರಾಜಧಾನಿ ಸನಾದಿಂದ ಮಂಗಳವಾರ ರಾತ್ರಿ ಬಿಡುಗಡೆಯಾದ ವೀಡಿಯೊ ಸಂದೇಶದಲ್ಲಿ ಅವರು ಇದನ್ನು ಬಹಿರಂಗಪಡಿಸಿದರು. ಭಾರತೀಯ ರಾಜತಾಂತ್ರಿಕ ಅಧಿಕಾರಿಗಳು ಮತ್ತು ಯೆಮೆನ್ ನಾಯಕರೊಂದಿಗೆ ಹತ್ತು ದಿನಗಳ ಹಗಲು ರಾತ್ರಿ ಚರ್ಚೆಯ ನಂತರವೇ ಈ ಯಶಸ್ಸು ಸಾಧಿಸಲಾಗಿದೆ. ಇದು ದೇವರ ದಯೆಯಿಂದ ಸಾಧ್ಯ. ನಿಮಿಷಾ ಪ್ರಿಯಾ ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ. ಭಾರತ ಸರ್ಕಾರವು ಅವರ ಸುರಕ್ಷಿತ ವರ್ಗಾವಣೆಗೆ ಈಗಾಗಲೇ ಲಾಜಿಸ್ಟಿಕಲ್ ವ್ಯವಸ್ಥೆಗಳನ್ನು ಮಾಡುತ್ತಿದೆ ಎಂದು ಕೆ.ಎ. ಪಾಲ್ ಹೇಳಿದ್ದಾರೆ.

ತಮ್ಮ ಎಕ್ಸ್ ವೇದಿಕೆಯಲ್ಲಿ ಕೆಎ ಪಾಲ್ ತಮ್ಮೊಂದಿಗೆ ಯೆಮೆನ್ ನಾಯಕರ ವೀಡಿಯೊವನ್ನು ಪೋಸ್ಟ್ ಮಾಡಿದ್ದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಭಾರತ ಸರ್ಕಾರ ವಿದೇಶಾಂಗ ಸಚಿವಾಲಯದ ಮೂಲಕ ಕಾನೂನು ನೆರವು ನೀಡಿದೆ.

ನಿಮಿಷಾ ಅವರ ಕುಟುಂಬಕ್ಕೆ ಕಾನೂನು ಬೆಂಬಲ ನೀಡಲು ವಕೀಲರನ್ನು ನೇಮಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.


ಸರ್ಕಾರವು ಶರಿಯಾ ಕಾನೂನಿನಡಿಯಲ್ಲಿ ಕ್ಷಮಾದಾನ ಅಥವಾ ಪರಿಹಾರ (ದಿಯಾ) ನಂತಹ ಆಯ್ಕೆಗಳನ್ನು ಸಹ ಪರಿಗಣಿಸಿದೆ. ಮೃತ ಮಹ್ದಿ ಅವರ ಕುಟುಂಬವು ರಕ್ತದ ಹಣವನ್ನು ಸ್ವೀಕರಿಸದ ಕಾರಣ ಪ್ರಕರಣವು ಮತ್ತಷ್ಟು ಜಟಿಲವಾಗಿತ್ತು.

ಖಾಂತಪುರಂ ಎಪಿ ಅಬುಬಕ್ಕರ್ ಮುಸ್ಲಿಯಾರ್ ಯೆಮೆನ್ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದರೂ, ಮೃತರ ಕುಟುಂಬವು "ನಮಗೆ ನ್ಯಾಯ ಬೇಕು, ಕ್ಷಮೆಯಲ್ಲ" ಎಂದು ಹೇಳಿಕೊಂಡಿತ್ತು. ಇನ್ನು ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು.


2008ರಲ್ಲಿ ನರ್ಸ್ ಆಗಿ ಯೆಮೆನ್‌ಗೆ ಹೋದ ನಿಮಿಷಾ ಪ್ರಿಯಾ ಅಲ್ಲಿ ಸ್ಥಳೀಯ ಮಹ್ದಿಯೊಂದಿಗೆ ಪಾಲುದಾರಿಕೆಯೊಂದಿಗೆ ತನ್ನದೇ ಆದ ಕ್ಲಿನಿಕ್ ನಡೆಸುತ್ತಿದ್ದರು. ದಿನ ಕಳೆದಂತೆ ಆತ ಪ್ರಿಯಾಳಿಗೆ ಕಿರುಕುಳ ನೀಡಲು ಶುರು ಮಾಡಿದ್ದರಿಂದ ನಿಮಿಷಾ ಅವನಿಗೆ ಮಾದಕ ದ್ರವ್ಯಗಳ ಚುಚ್ಚುಮದ್ದು ನೀಡಿದ್ದು ಅದು ಓವರ್ ಡೋಸ್ ಆಗಿ ಮಹ್ದಿ ಮೃತಪಟ್ಟಿದ್ದ.

ಪರಿಣಾಮವಾಗಿ ನಿಮಿಷಾ ಪ್ರಿಯಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿ, ಯೆಮೆನ್ ನ್ಯಾಯಾಲವು ಆಕೆಗೆ ಮರಣದಂಡನೆ ವಿಧಿಸಿತ್ತು. ನಂತರ ವಿಚಾರಣಾ ನ್ಯಾಯಾಲಯವು 2020ರಲ್ಲಿ ಶಿಕ್ಷೆಯನ್ನು ಎತ್ತಿಹಿಡಿಯಿತು. ಆ ಬಳಿಕ 2023ರಲ್ಲಿ ಸುಪ್ರೀಂ ಕೋರ್ಟ್ ಸಹ ಶಿಕ್ಷೆಯನ್ನು ಎತ್ತಿಹಿಡಿಯಿತು. ನಿಮಿಷಾ ಪ್ರಿಯಾ ಪ್ರಸ್ತುತ ಸನಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಡಾ. ಕೆ.ಎ. ಪಾಲ್ ಅವರು ನಿಮಿಷಾ ಪ್ರಿಯಾ ಅವರ ಮರಣದಂಡನೆ ಕಡಿಮೆ ಮಾಡಲಾಗಿದೆ ಎಂದು ಘೋಷಿಸಿದರೂ, ಯೆಮೆನ್ ಸರ್ಕಾರ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ಆದಾಗ್ಯೂ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ಯಶಸ್ಸಿಗೆ ಭಾರತ ಮತ್ತು ಯೆಮೆನ್ ಸರ್ಕಾರಗಳ ಸಹಕಾರ, ಧಾರ್ಮಿಕ ನಾಯಕರ ಉಪಕ್ರಮ ಮತ್ತು ಕೆ.ಎ. ಪಾಲ್ ಅವರಂತಹ ಜನರ ನಿರಂತರ ರಾಜತಾಂತ್ರಿಕತೆ ಕಾರಣವೆಂದು ಹೇಳಬಹುದು. ಅನೇಕ ಜನರು ನಿಮಿಷಾ ಪ್ರಿಯಾ ಮನೆಗೆ ಮರಳಲು ಕಾಯುತ್ತಿದ್ದಾರೆ.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ