Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಕೆಎಸ್​ಡಿಎಲ್ ಸಂಸ್ಥೆಯ ಅಧಿಕಾರಿ ಆತ್ಮಹತ್ಯೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸಾಬೂನು ಹಾಗೂ ಮಾರ್ಜಕ ನಿಯಮಿತ (ಕೆಎಸ್​ಡಿಎಲ್) ಸಂಸ್ಥೆಯ ಖರೀದಿ ವಿಭಾಗದ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಂಗಳೂರು ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.


ಅಮೃತ್ ಶಿರೂರು (42) ಆತ್ಮಹತ್ಯೆಗೆ ಶರಣಾದ ಅಧಿಕಾರಿ. ಕೆಎಸ್​ಡಿಎಲ್​ನ ಖರೀದಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್​ ಅವರು, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು.
ಡಿ. 28ರ ಸಂಜೆ 5ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದು ಘಟನೆ ಸಂಬಂಧ ಪರಿಶೀಲನೆ ನಡೆಸಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಮಾತನಾಡಿ, ಕೆಎಸ್​ಡಿಎಲ್​​ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮಾಹಿತಿ(ದೂರು) ಬಂದಿತ್ತು. ಮಹಾಲಕ್ಷ್ಮಿ ಲೇಔಟ್ ಮನೆ ಮಾಲೀಕ ಗಿರೀಶ್ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ನಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿ ನಂತರ ಅವರ ಸಹೋದರನಿಗೆ ನೀಡಿದ್ದೇವೆ ಎಂದು ಮಾಹಿತಿ ನೀಡಿದರು.

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಮೂಲದ ಮೃತ ಅಮೃತ್​ ಶಿರೂರು ಅವರು 10 ವರ್ಷದಿಂದ ಕೆಎಸ್​ಡಿಎಲ್​ನಲ್ಲಿ ಕೆಲಸ ಮಾಡುತ್ತಿದ್ದರು. ಸ್ಥಳದಲ್ಲಿ ಒಂದು ಡೆತ್ ನೋಟ್ ಸಿಕ್ಕಿದೆ. ಅದರಲ್ಲಿ ನನ್ನ ಸಾವಿಗೆ ಯಾರೂ ಕಾರಣ ಅಲ್ಲ ಎಂದು ಬರೆಯಲಾಗಿದೆ. ಅದೇ ರೀತಿ ನನ್ನ ಜೀವನ ಜಿಗುಪ್ಸೆಯಾಗಿದೆ ಎಂಬ ಮಾತನ್ನ ಉಲ್ಲೇಖಿಸಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಕರಣದ ತನಿಖೆ ನಡೆಸಲಾಗುತ್ತೆ ಎಂದು ಹೇಳಿದರು.

ಡೆತ್ ನೋಟ್​ನಲ್ಲಿ ಯಾವುದೇ ವ್ಯಕ್ತಿ, ಅಧಿಕಾರಿ ಹೆಸರು ಉಲ್ಲೇಖ ಮಾಡಿಲ್ಲ, ನನ್ನ ಕೆಲಸಕ್ಕೆ ನ್ಯಾಯ ಒದಗಿಸಲಾಗುತ್ತಿಲ್ಲ ಎಂದು ಮಾತ್ರ ಡೆತ್ ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳ ನೋಡಿದಾಗ ಯಾವುದೇ ರೀತಿಯ ಸಂಶಯ ಕಂಡು ಬಂದಿಲ್ಲ. ಇನ್ನೂ ಮೆಡಿಕಲ್ ರಿಪೋರ್ಟ್ ಬರಬೇಕಿದೆ. ಅದರ ಆಧಾರದ ಮೇಲೆ ತನಿಖೆ ನಡೆಸುತ್ತೇವೆ.


ಅಮೃತ್​ಗೆ ಮೊದಲ ಮದುವೆಯ ಡಿವೋರ್ಸ್ ಬಳಿಕ ಮತ್ತೊಂದು ಮದುವೆ ಆಗಿತ್ತು. ಅದು ಕೂಡ ವಿಚ್ಛೇದನ ಪ್ರಕ್ರಿಯೆ ನಡೆಯುತ್ತಿದೆ. ಅದರ ಬಗ್ಗೆ ನಮಗೆ ಯಾವುದೇ ಡಾಕ್ಯುಮೆಂಟ್ಸ್​ ಸಿಕ್ಕಿಲ್ಲ. ಕೌಟುಂಬಿಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎನ್ನುವ ಅನುಮಾನ ಇದೆ. ಅವರು ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ಡಿಸಿಪಿ ಮಾಹಿತಿ ನೀಡಿದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು