Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಯಲು ಸೀಮೆಗೆ ಕುಡಿಯುವ ನೀರು ನೀಡುವಂತೆ ಆಂದ್ರ ಸಿಎಂಗೆ ಮನವಿ ಮಾಡಿದ ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಕೋಲಾರದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಬಯಲು ಸೀಮೆ ಪ್ರದೇಶಕ್ಕೆ ಕೃಷ್ಣಾ ನದಿ ನೀರನ್ನು ಹರಿಸುವ ಬಗ್ಗೆ ಆಂಧ್ರ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲಾಗುವುದು ಎಂದು ಅವಳಿ ಜಿಲ್ಲೆಗಳ ಜನತೆಗೆ ಭರವಸೆ ನೀಡಿದ್ದರು.


  ಕೃಷ್ಣಾ ನದಿ ನೀರಿನ ವಿಷಯ ಎರಡು ರಾಜ್ಯಗಳ ನಡುವಿನ ಸಮಸ್ಯೆಯಾದರೂ ಭರವಸೆ ಕೊಟ್ಟ 2-3 ದಿನಗಳ ಅಂತರದಲ್ಲಿಯೇ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಬಯಲು ಸೀಮೆ ಜಿಲ್ಲೆಯ ಜನತೆಯು ನೀರಾವರಿ ವಿಚಾರದಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ವಿವರಿಸಿ ಸಮಸ್ಯೆಯ ಪರಿಹಾರಕ್ಕಾಗಿ ಕೈ ಜೋಡಿಸುವಂತೆ ಮನವಿ ಮಾಡಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಆಂದ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ರೈತರ ವಿಚಾರದಲ್ಲಿ ಕೊಟ್ಟ ಮಾತನ್ನು ಸದಾ ಉಳಿಸಿಕೊಳ್ಳುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಬದ್ದತೆಗೆ ಬಡ ಮತ್ತು ರೈತ ವರ್ಗದ ಜನತೆ ಅವರನ್ನು ಆರಾಧಿಸುತ್ತಾರೆ.


ಕುಮಾರಸ್ವಾಮಿ ಅವರ ಈ ಬದ್ದತೆಗೆ ನಾವು ನಿಜವಾಗಲೂ ಅವರ ಅಭಿಮಾನಿಗಳಾಗಿ ಅವರಿಗಾಗಿ ದುಡಿಯುತ್ತಿರುವ ಅವಕಾಶ ನಮಗೆ ಸಿಕ್ಕಿರುವುದು ನಮ್ಮೆಲ್ಲರ ಅದೃಷ್ಟ, ಇಂತಹ ನಿಜವಾದ ಜನನಾಯಕರನ್ನು ಅಧಿಕಾರಕ್ಕೆ ತರಲು ಪಕ್ಷದ ಜವಾಬ್ದಾರಿ ಹೊತ್ತಿರುವ ನಿಖಿಲ್ ಕುಮಾರಸ್ವಾಮಿ ಮತ್ತು ಕೃಷ್ಣಾರೆಡ್ಡಿ  ರಂತಹ ರಾಜ್ಯ ನಾಯಕರು ಕಾರ್ಯಕರ್ತರಿಗೆ ಇನ್ನಷ್ಟು ಬಲ ತುಂಬಿ ಪಕ್ಷ ಸಂಘಟನೆಗೆ ಹೆಚ್ಚು ಹೊತ್ತುಕೊಟ್ಟು ಮುಂದಿನ ಭಾರಿ ರಾಜ್ಯದಲ್ಲಿ ಜೆಡಿಎಸ್  ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರಲು ನಿರಂತರವಾಗಿ ಶ್ರಮಿಸಬೇಕಿದೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು