Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮಾನವ-ವನ್ಯಜೀವಿ ಸಂಘರ್ಷ ತಡೆಯಲಿ ಮನವಿ ಮಾಡಿದ ಕುಮಾರಸ್ವಾಮಿ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಾನವ-ವನ್ಯಜೀವಿ ಸಂಘರ್ಷ ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿದ್ದು ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್‌ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.

ಸಂಸತ್‌ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಮುಖ್ಯವಾಗಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಕುರಿತು ಸಚಿವರೊಂದಿಗೆ ಗಮನ ಸೆಳೆಯುವ ಚರ್ಚೆ ನಡೆಸಿದರು.

ಈ ವೇಳೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ ಅವರು, ಕರ್ನಾಟಕ ರಾಜ್ಯದಲ್ಲಿ ವನ್ಯಜೀವಿ ಉಪಟಳ ನಿರಂತರವಾಗಿ ನಡೆಯುತ್ತಿದೆ. ಇದರಿಂದ ಅನೇಕ ರೈತರು, ಅದರಲ್ಲಿಯೂ ಅರಣ್ಯದ ಅಂಚಿನಲ್ಲಿ ಬೇಸಾಯ ಮಾಡುವ, ದನಕರುಗಳನ್ನು ಮೇಯಿಸುವ ರೈತರು ಬಲಿಯಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಭೂಪೇಂದ್ರ ಯಾದವ್‌ಅವರನ್ನು ಕುಮಾರಸ್ವಾಮಿ ಅವರು ವಿನಂತಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಕಳಕಳಿಯ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಅರಣ್ಯ ಸಚಿವರು, ಈ ಬಗ್ಗೆ ತುರ್ತು ಗಮನ ಹರಿಸುವುದಾಗಿ ಭರವಸೆ ನೀಡಿದರು.
ಅದಕ್ಕೆ ಪೂರಕವಾದ ಎಲ್ಲಾ ಮಾಹಿತಿಯನ್ನು ಸಚಿವ ಕುಮಾರಸ್ವಾಮಿ ಅವರಿಂದ ಪಡೆದುಕೊಂಡರು. ಅಲ್ಲದೆ
, ಈ ನಿಟಿನಲ್ಲಿ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಬಗ್ಗೆ ಅಧಿಕಾರಿಗಳು ಹೇಗೆ ಕಾರ್ಯ ನಿರ್ವಹಿಸಬೇಕು ಎನ್ನುವ ಕುರಿತು ನಿರ್ದೇಶನ ನೀಡಿದರು.

ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್‌ಅಧಿವೇಶನ ಮುಗಿಯುವದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸಚಿವ ಭೂಪೇಂದ್ರ ಯಾದವ್‌ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಅತ್ಯಂತ ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ಸಚಿವರು ಭರವಸೆ ನೀಡಿದರು.

ಸಮಾಲೋಚನೆ:
ಸಚಿವದ್ವಯರು ಈ ಭೇಟಿಯ ಸಂದರ್ಭದಲ್ಲಿ ತಮ್ಮ ನಿರ್ವಹಣೆಯ ಇಲಾಖೆಗಳಿಗೆ ಸಂಬಂಧಿಸಿದ ಸುದೀರ್ಘ ಚರ್ಚೆ ನಡೆಸಿದರು. ಎರಡೂ ಇಲಾಖೆಗಳ ಸಮನ್ವಯತೆ, ಅಭಿವೃದ್ಧಿ ವಿಷಯಗಳ ಕುರಿತಾಗಿ ಅವರಿಬ್ಬರ ಮಾತುಕತೆ ಕೇಂದ್ರೀಕೃತವಾಗಿತ್ತು. ಜತೆಗೆ, ಉಕ್ಕು ಉದ್ಯಮದ ಬೆಳವಣಿಗೆ ಹಾಗೂ ಅದಕ್ಕೆ ಪೂರಕವಾಗಿ ಪರಿಸರ ಇಲಾಖೆಯಿಂದ ದೊರೆಯುತ್ತಿರುವ ಉತ್ತಮ ಸಹಕಾರದ ಬಗ್ಗೆಯೂ ಮಾತುಕತೆ ನಡೆಸಿದರು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು