Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಾಮ್ರೆಡ್ ವಿಕ್ರಮ್ ರಾವ್ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (IFWJ) ರಾಷ್ಟ್ರೀಯ ಅಧ್ಯಕ್ಷರಾದ ಕೆ. ವಿಕ್ರಂರಾವ್ (82) ಅವರು ಇಂದು ಬೆಳಿಗ್ಗೆ ಉತ್ತರ ಪ್ರದೇಶದ ಲಕ್ನೋ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷರಾಗಿ  ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸಿದ್ದ ವಿಕ್ರಂ ರಾವ್ ಅವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಮತ್ತು ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿತ್ತು.

ರಾಷ್ಟ್ರ ಮಟ್ಟದಲ್ಲಿ ಗ್ರಾಮೀಣ ಪತ್ರಕರ್ತರನ್ನು ಸಂಘಟಿಸಿ ಯಶಸ್ವಿಯಾಗಿದ್ದ ವಿಕ್ರಮ್ ರಾವ್ ಅವರು ಪತ್ನಿ ಇಬ್ಬರು ಪುತ್ರರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕೆಯುಡಬ್ಲ್ಯೂಜೆ ಸಂತಾಪ: ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಸುಧೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತರಾದ ಕೆ.ವಿಕ್ರಮರಾವ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಪತ್ರಕರ್ತರ ಸಂಘಟನೆಗಾಗಿ ಅವರು ಮಾಡಿದ ಸೇವೆಯು ಅನನ್ಯವಾದದ್ದು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸ್ಮರಿಸಿದ್ದು, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಸಂತಾಪ: ಸುಧೀರ್ಘ ಅವಧಿಗೆ IFWJ ಅಧ್ಯಕ್ಷರಾಗಿದ್ದ ವಿಕ್ರಮ್ ರಾವ್ ಅವರ ನಿಧನದಿಂದ ಪತ್ರಕರ್ತರ ಸಂಘಟನೆಯ ಪ್ರಮುಖ ಹಿರಿಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು IFWJ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಮತ್ತು ಅಪರ ಪ್ರಧಾನ ಕಾರ್ಯದರ್ಶಿ ಎಚ್.ಬಿ ಮದನಗೌಡ ಅವರು ಸಂತಾಪ ವ್ಯಕ್ತಪಡಿಸಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು