ಚಂದ್ರವಳ್ಳಿ ನ್ಯೂಸ್, ಬೆಂಗಳೂರು ಗ್ರಾಮಾಂತರ:
ಪುರಸಭೆಯ ಪೌರಕಾರ್ಮಿಕರಿಗೆ ನಿವೇಶನ ಹಂಚಿಕೆಗೆ ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಹೇಳಿದರು.
ದೇವನಹಳ್ಳಿ ಟೌನ್ ನ ಪುರಸಭೆ ಕಾರ್ಯಾಲಯ ಆವರಣದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಹಾಗೂ ಆಯುಧ ಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಹಿಂದೆ ಇದೇ ಸಂದರ್ಭದಲ್ಲಿ ಪೌರಕಾರ್ಮಿಕರಿಗೆ ನಿವೇಶನ ಹಂಚಿಕೆ ಸಂಬಂಧಿಸಿದಂತೆ ಮಾತನಾಡಿದ್ದೆ.ಪೌರಕಾರ್ಮಿಕರಿಗೆ ನೀವೇಶನ ಹಂಚಿಕಗೆ ಸಂಬಂಧಿಸಿದಂತೆ ದೇವನಹಳ್ಳಿ ತಾಲ್ಲೂಕಿನ ಸಣ್ಣೆ ಗ್ರಾಮ ಹಾಗೂ ಕೆಂಪತಿಮ್ಮನಹಳ್ಳಿ ಯಲ್ಲಿ ನಿವೇಶನ ಅಭಿವೃದ್ಧಿ ಪಡಿಸಲಾಗಿದೆ. 30 ದಿನಗಳೊಳಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಒಂದು ತಿಂಗಳಲ್ಲಿ ಹಕ್ಕು ಪತ್ರ ವಿತರಿಸಲಿದ್ದೇವೆ. ಜೊತೆಗೆ ವಿಜಯಪುರ ಪುರಸಭೆಯ ಪೌರಕಾರ್ಮಿಕರಿಗೆ ಹಕ್ಕು ಪತ್ರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಾದ ಮುನಿಯಪ್ಪ, ರಮೇಶ್, ಕಲಾವತಿ, ನಿರ್ಮಲ ಅವರನ್ನು ಉತ್ತಮ ಕೆಲಸಗಾರರು ಎಂದು ಗುರುತಿಸಿ ಸನ್ಮಾನಿಸಿದರು. ಜೊತೆಗೆ ನಿವೃತ್ತಿ ಪೌರಕಾರ್ಮಿಕರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆಎನ್ ಅನುರಾಧ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ, ತಹಶೀಲ್ದಾರ್ ಅನಿಲ್, ಪುರಸಭೆ ಮುಖ್ಯಾಧಿಕಾರಿ ಶಿವಮೂರ್ತಿ, ಮುಖಂಡರಾದ ಪ್ರಸನ್ನ, ಚಿನ್ನಪ್ಪ, ಮಂಜುನಾಥ್, ತಹಶೀಲ್ದಾರ್ ಅನಿಲ್, ಮುಖಂಡರು, ಪುರಸಭೆಯ ಮಾಜಿ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.




