Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Health & Fitness

ಆಸ್ಪತ್ರೆ, ಶಾಲೆ, ಅಂಗನವಾಡಿಗಳಲ್ಲಿ ಶೌಚಾಲಯ ಸುಸ್ಥಿತಿಯಲ್ಲಿರಲಿ-ಸಿಇಒ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿನ ವಸತಿನಿಲಯಗಳು, ಆಸ್ಪತ್ರೆ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಶೌಚಾಲಯ ಮತ್ತು ನೀರು ನಿರ್ವಹಣೆ ಕುರಿತು ಚರ್ಚಿಸಲು ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಆಸ್ಪತ್ರೆ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿರುವ ಶೌಚಾಲಯಗಳು ಸಣ್ಣಪುಟ್ಟ ದುರಸ್ಥಿಗಳಿದ್ದರೆ ಲಭ್ಯವಿರುವ ಅನುದಾನ ಬಳಸಿಕೊಂಡು ಅವುಗಳನ್ನು ಬಳಕೆಗೆ ಯೋಗ್ಯ ರೀತಿಯಲ್ಲಿ ಪರಿವರ್ತಿಸಬೇಕು ಎಂದು ಸೂಚಿಸಿದರು.

ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ವಿಶ್ವ ಶೌಚಾಲಯ ದಿನ ಆಚರಿಸಲಾಗುತ್ತಿದೆ. ನ.19 ರಿಂದ ಡಿ.20ರ ವರೆಗೆ ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಅಂದದ ಶೌಚಾಲಯ-ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಆಂದೋಲನ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು.

ಈ ದಿನಾಚರಣೆಯು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದ ಅವರು, ಗ್ರಾಮ ಪಂಚಾಯಿತಿ ಹಂತದಲ್ಲಿ ಸ್ವಚ್ಛ, ಸುಂದರ ವೈಯಕ್ತಿಕ ಗೃಹ ಶೌಚಾಲಯ (ಉತ್ತಮ ಶೌಚಾಲಯ)ಸ್ಪರ್ಧೆಯನ್ನು ಆಯೋಜಿಸಬೇಕು. ಅದೇ ರೀತಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸಮುದಾಯ ಶೌಚಾಲಯ ಸ್ಪರ್ಧೆಗಳನ್ನು ಆಯೋಜಿಸಬೇಕು. ತದನಂತರ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ವಿಜೇರಿಗೆ ಪುರಸ್ಕಾರಗಳನ್ನು ನೀಡಿ ಗೌರವಿಸುವಂತೆ ತಿಳಿಸಿದರು.

ಸ್ಥಳೀಯ ಪ್ರಭಾವಿಗಳು, ಸ್ವಚ್ಛತಾ ರಾಯಬಾರಿಗಳನ್ನು ಗುರುತಿಸಿ, ಅವರುಗಳನ್ನು ಈ ನಮ್ಮ ಶೌಚಾಲಯ-ನಮ್ಮ ಗೌರವ ವಿಶೇಷ ಆಂದೋಲನದಲ್ಲಿ ತೊಡಗಿಸಿಕೊಳ್ಳುವಂತೆ ಕ್ರಮವಹಿಸಬೇಕು. ಜಿಲ್ಲೆಯಲ್ಲಿರುವ ಕೈಗಾರಿಕೆಗಳು, ಸ್ವಯಂ ಸೇವಾ ಸಂಘಗಳು, ಸರ್ಕಾರೇತರ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಇತರೆ ಸಾಂಸ್ಥಿಕ ಸಂಸ್ಥೆಗಳನ್ನು ಗುರುತಿಸಿ, ಈ ಆಂದೋಲನದ ಭಾಗವಾಗಿರುವ ಫಲಾನುಭವಿಗಳಿಗೆ ಪುರಸ್ಕಾರ ವಿತರಣೆ, ಶೌಚಾಲಯಗಳ ಸೌಂದರ್ಯಿಕರಣ ಪುರಸ್ಕಾರ ನೀಡುವ ಕಾರ್ಯದಲ್ಲಿ ತೊಡಗಿಕೊಳ್ಳುವುದು. ಉತ್ತಮ ಯಶೋಗಾಥೆ ಮತ್ತು ಉತ್ತಮ ಅಭ್ಯಾಸಗಳ ಕುರಿತು ವರದಿಗಳನ್ನು ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಿರುಪಯುಕ್ತ ಸಮುದಾಯ ಶೌಚಾಲಯಗಳನ್ನು ಗುರುತಿಸುವುದು ಮತ್ತು ಅವುಗಳನ್ನು ಬಳಕೆಗೆ ಯೋಗ್ಯ ರೀತಿಯಲ್ಲಿ ಪರಿವರ್ತಿಸಬೇಕು. ನೈರ್ಮಲ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಸ್ವಚ್ಛತಾ ಕಾರ್ಮಿಕರು, ಸ್ವಚ್ಛತಾಗಾರರನ್ನು ಗುರುತಿಸಿ, ತಾಲ್ಲೂಕುವಾರು ಗ್ರಾಮ ಪಂಚಾಯಿತಿ ಸ್ವಚ್ಛತಾಗಾರರಿಗೆ ಆರೋಗ್ಯ ಶಿಬಿರ ಹಾಗೂ ಸುರಕ್ಷಾ ಕವಚಗಳನ್ನು ನೀಡಬೇಕ ಹಾಗೂ ವಿವಿಧ ಯೋಜನೆಗಳಡಿ ದೊರೆಯುವ ಸೌಲಭ್ಯಗಳನ್ನು ಒದಗಿಸಲು ನೋಂದಾಯಿಸುವುದು ಮತ್ತು ಮಂಜೂರಾತಿ ಆದೇಶಗಳನ್ನು ನೀಡಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಬಯಲು ಬಹಿರ್ದೆಸೆ ಮುಕ್ತ ಸುಸ್ಥಿರತೆಯನ್ನು ಕಾಯ್ದುಕೊಳ್ಳುವಲ್ಲಿ ಗಣನೀಯ ಕೊಡುಗೆ ನೀಡಿದವರನ್ನು ಗುರುತಿಸಿ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಹಂತದಲ್ಲಿ ಗೌರವಿಸಬೇಕು ಎಂದು ತಿಳಿಸಿದ ಅವರು, ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯಿತಿ ಮತ್ತು ಗ್ರಾಮಗಳ ಮಟ್ಟದಲ್ಲಿ ಶೌಚಾಲಯ ಬಳಕೆ ಮತ್ತು ಉತ್ತಮ ನೈರ್ಮಲ್ಯ ಅಭ್ಯಾಸಗಳನ್ನು ರೂಢಿಸುವ ನಿಟ್ಟಿನಲ್ಲಿ ಜನರ ನಡವಳಿಕೆ ಬದಲಾವಣೆ ಮಾಡಲು ವಿಶೇಷ ಆಂದೋಲನಗಳಿಗೆ ಚಾಲನೆ ನೀಡುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ