Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಯುಕೆಪಿಗೆ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ವಿರೋಧ-ಕೇಂದ್ರ ಮಧ್ಯ ಪ್ರವೇಶ ಮಾಡಲಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯುಕೆಪಿ-3ನೇ ಹಂತದ ಭೂಸ್ವಾಧೀನ ಪ್ರಕ್ರಿಯೆಗೆ ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ವಿರೋಧ ವ್ಯಕ್ತಪಡಿಸಿ ಕೇಂದ್ರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಕುಮಾರ ಪಾರ್ಕ್'ನ ಸರ್ಕಾರಿ ಗೃಹ ಕಚೇರಿಯಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿದರು.‌

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಆಂಧ್ರಪ್ರದೇಶ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಈ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ ಭೂಸ್ವಾಧೀನ ಮಾಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಈ ಹಿಂದೆ ಆಗಿರುವ ಆದೇಶದ ಪ್ರಕಾರ ನಡೆದುಕೊಳ್ಳಬೇಕು ಎಂದು ಡಿಸಿಎಂ ಶಿವಕುಮಾರ್ ಮನವಿ ಮಾಡಿದರು.

ಆಲಮಟ್ಟಿ ಅಣೆಕಟ್ಟುವಿನ 519 ಮೀ. ರಿಂದ 524 ಮೀ.ಗೆ ಎತ್ತರ ಮಾಡಿಕೊಳ್ಳಲು ಖಡಾಖಂಡಿತವಾಗಿ ಅವಕಾಶ ನೀಡಬಾರದು ಮತ್ತು ಗೆಜೆಟ್ ನೋಟಿಫಿಕೇಶನ್ ಮಾಡಬಾರದು ಎಂದು ಆಂಧ್ರಪ್ರದೇಶ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶ ಸರ್ಕಾರ ಈ ವಿಚಾರವಾಗಿ ಮಧ್ಯಪ್ರವೇಶ ಮಾಡುವುದು ಒಳ್ಳೆಯದಲ್ಲ ಎಂದು ಶಿವಕುಮಾರ್ ಮನವಿ ಮಾಡಿದರು.

16.09.2025 ರಂದು ಕ್ಯಾಬಿನೆಟ್ ಸಭೆ ಮೂಲಕ 1.33 ಲಕ್ಷ ಎಕರೆ ಭೂಮಿಯನ್ನು ಒಂದೇ ಬಾರಿಗೆ ಸ್ವಾಧೀನ ಪಡಿಸಿಕೊಳ್ಳುವುದು ಎಂದು ತೀರ್ಮಾನಿಸಲಾಗಿದ್ದು. 70 ಸಾವಿರ ಕೋಟಿ ಹಣವನ್ನು ಮೂರು ಹಂತದಲ್ಲಿ ನಿಗದಿ ಮಾಡಿಕೊಳ್ಳಲು ಹೊರಟಿದ್ದೆವು. ಪ್ರತಿ ಎಕರೆಗೆ 35- 40 ಲಕ್ಷ ಪರಿಹಾರ ನಿಗದಿ ಮಾಡಿದ್ದೆವು. ಭೂಸ್ವಾಧೀನವನ್ನು ಆಂಧ್ರಪ್ರದೇಶ ಸರ್ಕಾರ ಪ್ರಶ್ನಿಸಿದೆ.

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌. ಕಳೆದ 12 ವರ್ಷದಿಂದ ಈ ವಿಚಾರವಾಗಿ ನೋಟಿಫಿಕೇಷನ್ ಮಾಡಿ ಎಂದು ಒತ್ತಡ ಹೇರುತ್ತಲೇ ಇದ್ದೇವೆ. 30.12.2010 ರಲ್ಲಿ ಈ ಬಗ್ಗೆ ತೀರ್ಮಾನವಾಗಿತ್ತು. 177 ಟಿಎಂಸಿಯಿಂದ 330 ಟಿಎಂಸಿ ನೀರು ಬಳಕೆಗೆ ಅವಕಾಶ ನೀಡಲಾಗಿತ್ತು. ಕೆಲವರು ನ್ಯಾಯಾಲಯಕ್ಕೂ ಹೋಗಿದ್ದರು ಎಂದು ಶಿವಕುಮಾರ್ ತಿಳಿಸಿದ್ದಾರೆ.

ನವಿಲೆ ಸಮತೋಲಿತ ಅಣೆಕಟ್ಟು ‌ಕಟ್ಟಿ ನಮ್ಮ ಪಾಲಿನ 30 ಟಿಎಂಸಿ ನೀರನ್ನು ಕೊಳ್ಳಬೇಕು ಎಂದು ಬೋರ್ಡ್ ಮುಂದೆ ತಿಳಿಸಿದ್ದೇವೆ. ಆದರೆ ಅಲ್ಲಿ ಈ ವಿಚಾರವನ್ನು ತೆಗೆದುಕೊಳ್ಳುತ್ತಿಲ್ಲ ಹಾಗೂ ಆಂಧ್ರ ಪ್ರದೇಶದವರು ಈ ಸಭೆಗೆ ಬರುತ್ತಿಲ್ಲ. ಇಬ್ಬರೂ ಸೇರಿ ತೀರ್ಮಾನ ಮಾಡಬೇಕು, ಖರ್ಚು ಮಾಡಬೇಕು. ನಮ್ಮ‌ನೀರು ಅವರಿಗೆ ಹರಿದು ಹೋಗುತ್ತಿದೆ.

ಮಾ. 10 ರಿಂದ ಲೋಕಸಭೆ ಕಲಾಪ ಆರಂಭವಾಗಲಿವೆ. ಅಲ್ಲಿ ನಮ್ಮ ರಾಜ್ಯದ ಸಂಸದರುಗಳು ಪ್ರಧಾನಿಯವರು, ಜಲಶಕ್ತಿ ಸಚಿವರ ಮೇಲೆ ಒತ್ತಡ ಹೇರಬೇಕು. ಎಲ್ಲಾ ಜನನಾಯಕರು ಹಾಗೂ ಸಂಸದರುಗಳು ಸೇರಿ ರಾಜ್ಯದ ಹಿತವನ್ನು ಕಾಪಾಡಲೇ ಬೇಕು. ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀ. ಹೆಚ್ಚಳ ಮಾಡಲು, ರೈತರ ಹಿತ ಕಾಪಾಡಬೇಕು. ಎಲ್ಲಾ ದಾಖಲೆಗಳನ್ನು ಸಂಸದರಿಗೆ ತಲುಪಿಸಲಾಗುವುದು. ನಾವುಗಳು ಸುಮ್ಮನೆ ಕುಳಿತುಕೊಂಡರೆ ರಾಜ್ಯದ ಹಿತಕ್ಕೆ ಧಕ್ಕೆಯಾಗುತ್ತದೆ ಎಂದು ಡಿಸಿಎಂ ಶಿವಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.

ಅನುಮೋದನೆ ಸಿಕ್ಕಿರುವುದನ್ನು ಅನುಷ್ಠಾನಗೊಳಿಸಲು ಮಹಾರಾಷ್ಟ್ರ, ಆಂಧ್ರ ಬಿಡುತ್ತಿಲ್ಲ. ನಾವು ನಮ್ಮ ಜಾಗದಲ್ಲಿ ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ಮಾಡುತ್ತಿಲ್ಲ ಎಂದು ಡಿಸಿಎಂ ಟೀಕಿಸಿದರು.

ಭೂಸ್ವಾಧೀ‌ನಕ್ಕೆ ಏನೂ ತೊಂದರೆ ಆಗಬಾರದೆಂದು, ಅಕಸ್ಮಾತ್ ಏನಾದರೂ ಕೇಂದ್ರ ಸರ್ಕಾರ ಯೋಜನೆ ಮಾಡಬಾರದು ಎಂದು ಪತ್ರ ಬರೆಯುವ ಮುಂಚಿತವಾಗಿ ನಾವು ಮರು ಪ್ರತಿಕ್ರಿಯೆ ನೀಡುತ್ತಿದ್ದೇವೆ. ಅವರು ಪತ್ರ ನೀಡಿದರು ಎಂದರೆ ಅದನ್ನು ತೆಗೆದುಕೊಂಡು ಬೇರೆಯವರು ಮತ್ತೆ ನ್ಯಾಯಲಯಕ್ಕೆ ತೆರಳುತ್ತಾರೆ.

ಮಹಾರಾಷ್ಟ್ರದವರು ತಕರಾರು ಮಾಡಿದ್ದರು. ಅವರು ನಮ್ಮಲ್ಲಿ ಪ್ರವಾಹವಾಗುತ್ತದೆ ಎಂದಿದ್ದರು. ಕೇಂದ್ರ ಸರ್ಕಾರದ ಸಮಿತಿ 524 ಮೀ. ಹೆಚ್ಚಳ ಮಾಡಿದರೂ ಪ್ರವಾಹ ಆಗುವುದಿಲ್ಲ ಎಂದು ವರದಿ ನೀಡಿದೆ ಎಂದು ಶಿವಕುಮಾರ್ ತಿಳಿಸಿದರು.

ಸುಪ್ರೀಂಕೋರ್ಟ್ ನಿಂದ ಯಾವುದೇ ತರಹದ ತಡೆಯಾಜ್ಞೆಗಳು ಇಲ್ಲ. ಆದರೂ ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದಾರೆ. ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಅದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದೇನೆ.‌ಇದರ ಪರಿಹಾರಕ್ಕೆ ಸರ್ವಪಕ್ಷ ನಿಯೋಗವನ್ನೇ ಕರೆದುಕೊಂಡು ಹೋಗಬೇಕು ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು