Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಗ್ರಂಥಪಾಲಕಿ ಭಾಗ್ಯವತಿ ಆತ್ಮಹತ್ಯೆ, ಕಾಂಗ್ರೆಸ್ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೇತನವಿಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರ ಸಾವು ಕರ್ನಾಟಕ ಕಾಂಗ್ರೆಸ್ ಸರ್ಕಾರದ ದಿವಾಳಿತನ ಹಾಗೂ ಹೃದಯ ಹೀನ ವ್ಯವಸ್ಥೆಯನ್ನು ಅನಾವರಣಗೊಳಿಸಿದೆ.

ಭಾಗ್ಯವತಿ ಅಗ್ಗಿಮಠ ಅವರ ದುರಂತ ಅಂತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಾಪ್ರಹಾರ ಮಾಡಿದ್ದಾರೆ. 

ರಾಜ್ಯದ ನಿರ್ದಯಿ ಸರ್ಕಾರ ತನ್ನ ನೌಕರರಿಗೆ ಸಂಬಳ ಕೊಡದ ಸ್ಥಿತಿಗೆ ತಲುಪಿ ಸಂಬಳವನ್ನೇ ನೆಚ್ಚಿಕೊಂಡು ಬದುಕು ನಡೆಸುವ ನೌಕರರ ಪಾಲಿಗೆ ಕಂಟಕಪ್ರಾಯವಾಗಿದೆ. ಸರ್ಕಾರದ ಈ ನಡೆ ಅತ್ಯಂತ ಖಂಡನೀಯ. ಮೃತ ಭಾಗ್ಯವತಿ ಅಗ್ಗಿಮಠ ಅವರ ಕುಟುಂಬ ಅತ್ಯಂತ ಸಂಕಷ್ಟದಲ್ಲಿದ್ದು ಈ ಕೂಡಲೇ ಸೂಕ್ತ ಪರಿಹಾರ ಹಾಗೂ ಒಬ್ಬರಿಗೆ ನೌಕರಿ ನೀಡುವ ಮೂಲಕ ಮೃತರ ಅವಲಂಬಿತ ಮಕ್ಕಳ ನೆರವಿಗೆ ಬಂದು ಸರ್ಕಾರ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ. 

ಮುಖ್ಯಮಂತ್ರಿಗಳಿಂದ ಹಿಡಿದು ಇತರ ಮಂತ್ರಿಗಳು ಹಾಗೂ ಅಧಿಕಾರಿಗಳು ಜನರ, ರೈತರ, ಸಮಸ್ಯೆಗಳಿಗೆ ಸ್ಪಂದಿಸದೆ, ವಿಮುಖರಾಗಿ ಅಧಿಕಾರ ರಾಜಕಾರಣದತ್ತ ತಮ್ಮ ಸಂಪೂರ್ಣ ಸಮಯವನ್ನು ಕೇಂದ್ರೀಕರಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಜಿಲ್ಲೆಯ ಸ್ಥಿತಿ ಏನಾಗಿದೆ ಎಂದು ತಿಳಿದುಕೊಳ್ಳುವ ವ್ಯವಧಾನ ತೋರುತ್ತಿಲ್ಲ , ಬಡವರ ಗೋಳು ಆಲಿಸುತ್ತಿಲ್ಲ.

ನಿರ್ಲಕ್ಷ್ಯ, ಉಡಾಫೆ ಧೋರಣೆ ಕೈಸರ್ಕಾರದ ಆಡಳಿತ ವೈಖರಿ ಎನ್ನುವುದಕ್ಕೆ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸಾಕ್ಷಿ ಒದಗಿಸಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು