ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನಕಪುರ ತಾಲೂಕಿನ ಸೋಮೇದ್ಯಾಪನಹಳ್ಳಿ ಗ್ರಾಮದ ನಿವಾಸಿ ಸಿದ್ದಮ್ಮ ಮತ್ತು ದಿವಂಗತ ಮಾದಯ್ಯ ದಂಪತಿಯ ಹಿರಿಯ ಪುತ್ರ, ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಲಿಂಗರಾಜು ಎಸ್.ಎಂ. ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕ ಪ್ರೊ. ಮುನಿಯಪ್ಪ ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ರಾಮನಗರ ಜಿಲ್ಲೆಯ ಐತಿಹ್ಯಗಳು ಸಾಂಸ್ಕೃತಿಕ ಅಧ್ಯಯನ" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಇದೇ ಸಂದರ್ಭದಲ್ಲಿ ಲಿಂಗರಾಜು ಎಸ್.ಎಂ. ಅವರ ಶೈಕ್ಷಣಿಕ ಸಾಧನೆಗಾಗಿ ಕುಟುಂಬಸ್ಥರು, ಗುರು-ಹಿರಿಯರು, ಸ್ನೇಹಿತರು ಮತ್ತು ಸೋಮೇದ್ಯಾಪನಹಳ್ಳಿ ಗ್ರಾಮದ ಸುತ್ತಮುತ್ತಲಿನವರು ಶುಭಕೋರಿ, ಅಭಿನಂದನೆ ಸಲ್ಲಿಸಿದ್ದಾರೆ.


