Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನಡತೆ ಮತ್ತು ಅಕ್ಷರದಿಂದ ಗೌರವ ಉಳಿಸಿಕೊಂಡಿದ್ದ ಸಾಹಿತಿ ಉಜ್ಜಿನಪ್ಪ: ಎನ್.ಎಲ್. ಬಸವರಾಜ್ ಶ್ಲಾಘನೆ

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
"ಸ್ವಾರ್ಥರಹಿತವಾಗಿ ಸುಮಾರು ಐದು ದಶಕಗಳ ಕಾಲ ಜನಪರ ಮತ್ತು ನೀರಾವರಿ ವಿಚಾರಗಳ ಬರಹಗಳ ಮೂಲಕ ಸಮಾಜವನ್ನು ಜಾಗೃತಗೊಳಿಸಿದ ಜಿ.ಎಸ್. ಉಜ್ಜಿನಪ್ಪನವರ ಸೇವೆ ಅಮರವಾಗಿದೆ. ಅವರು ಬರಹಗಾರರಾಗಿ
, ಸಾಹಿತಿಯಾಗಿ ಹಾಗೂ ಆಂಗ್ಲ ಭಾಷೆಯ ಸಮರ್ಥ ವರದಿಗಾರರಾಗಿ ಸಲ್ಲಿಸಿರುವ ಸೇವೆ ಎಂದಿಗೂ ಸ್ಮರಣೀಯ" ಎಂದು ಹಿರಿಯ ಪತ್ರಕರ್ತ ಎನ್.ಎಲ್. ಬಸವರಾಜ್ ಹೇಳಿದರು. 

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಜಿ.ಎಸ್. ಉಜ್ಜಿನಪ್ಪನವರ ಸ್ಮರಣಾರ್ಥ ಆಯೋಜಿಸಿದ್ದ 'ನುಡಿನಮನ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Advertisement

ನೈಜ ವರದಿಗಾರಿಕೆಗೆ ಮಾರ್ಗದರ್ಶಕರಾಗಿದ್ದರು
ಚಿತ್ರದುರ್ಗ ಜಿಲ್ಲೆಯ ಹಿರಿಯ ಪತ್ರಕರ್ತರಾಗಿದ್ದ ಜಿ.ಎಸ್. ಉಜ್ಜಿನಪ್ಪನವರ ಕಾರ್ಯವೈಖರಿಯನ್ನು ಸ್ಮರಿಸಿದ ಬಸವರಾಜ್ ಅವರು
, "ಉಜ್ಜಿನಪ್ಪನವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾಗಲೂ ಅತ್ಯಂತ ಲವಲವಿಕೆಯಿಂದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸುದ್ದಿ ಸಂಗ್ರಹಿಸುತ್ತಿದ್ದರು.

 ನಾಡಿನ ಪ್ರಸಿದ್ಧ ಕವಿಗಳು ಬರೆದ ಕವಿತೆ ಮತ್ತು ಹಾಡುಗಳನ್ನು ಹಾಡುತ್ತಾ, ಅವುಗಳ ಆಳವಾದ ಅರ್ಥವನ್ನು ವಿಶ್ಲೇಷಿಸುತ್ತಿದ್ದ ಅವರ ಮಾತುಗಳು ಇಂದಿಗೂ ನಮ್ಮ ಕಿವಿಗಳಲ್ಲಿ ಗುನುಗುತ್ತಿವೆ. ಅವರ ನೈಜ ವರದಿಗಳು, ಶಿಸ್ತು ಮತ್ತು ಸ್ನೇಹಪರ ಚಿಂತನೆಗಳು ಇಂದಿನ ಯುವ ಬರಹಗಾರರಿಗೆ ಹಾಗೂ ಪತ್ರಕರ್ತರಿಗೆ ಸದಾ ಮಾರ್ಗದರ್ಶನ ನೀಡುತ್ತವೆ" ಎಂದು ಗುಣಗಾನ ಮಾಡಿದರು.

ಈ ಭಾವಪೂರ್ಣ ನುಡಿನಮನ ಕಾರ್ಯಕ್ರಮದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎಲ್. ಗಿರಿಧರ್, ಪ್ರಧಾನ ಕಾರ್ಯದರ್ಶಿ ಚಿದಾನಂದ್ ಎಂ. ಮಸ್ಕಲ್, ಪತ್ರಕರ್ತರಾದ ಖಂಡೇನಹಳ್ಳಿ ಬಸವರಾಜ್, ರಮೇಶ್ ಬಿದರಿಕೆರೆ, ರಾಜಣ್ಣ, ಶಿವಶಂಕರ್ ಮಠದ್, ಪ್ರಸನ್ನ, ಹನುಮಂತರಾಯ, ಸಾಮಾಜಿಕ ಕಾರ್ಯಕರ್ತ ಚಮನ್ ಷರಿಪ್, ಡಾ. ತ್ರಿವೇಣಿ ಸೇರಿದಂತೆ ಹಲವು ಗಣ್ಯರು ಹಾಗೂ ಪತ್ರಕರ್ತರು ಉಪಸ್ಥಿತರಿದ್ದು ಮೃತರಿಗೆ ಆದರದ ನಮನ ಸಲ್ಲಿಸಿದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಸಗಿ ವಿವಿಗಳು ಲಾಭಕೋರ ವ್ಯಾಪಾರಿ ಸಂಸ್ಥೆಗಳಲ್ಲ: ಸುಪ್ರೀಂ ಕೋರ್ಟ್ ಖಡಕ್ ಎಚ್ಚರಿಕೆ ಪಿಎಸ್‌ಐಗೆ ಕಪಾಳಮೋಕ್ಷ: ಎಸ್‌ಐ ಸವಿತಾ ಪಾಟೀಲ್ ಬಳಿ ವಿಡಿಯೋ ಮೂಲಕ ಕ್ಷಮೆ ಕೋರಿದ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಾ ಗೌಡಸರ್ಕಾರಿ ಬಸ್ ಗ್ಲಾಸ್ ಒಡೆದು ಕರ್ತವ್ಯಕ್ಕೆ ಅಡ್ಡಿ; 15 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ಕಾಡು ಹಂದಿ ಬೇಟೆ: ವನ್ಯಜೀವಿ ಕಾಯ್ದೆಯಡಿ ಪೊಲೀಸರೇ ನೇರ ದೂರು ದಾಖಲಿಸುವುದು ಕಾನೂನುಬಾಹಿರ-ಹೈಕೋರ್ಟ್ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕದನ: 8 ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ200 ರೂ. ಆಸೆಗೆ ಬಿದ್ದು 9.30 ಲಕ್ಷ ರೂ. ಕಳೆದುಕೊಂಡ ಯುವತಿ: 'ವರ್ಕ್ ಫ್ರಮ್ ಹೋಮ್' ಸೈಬರ್ ವಂಚನೆ ಬಯಲುಸಾಮಾನ್ಯ ಜನರಿಗೆ ಬೆಲೆ ಏರಿಕೆ ಬಿಸಿ: ದಿಢೀರ್ ಹೆಚ್ಚಾದ ಅಕ್ಕಿ ದರ, ಒಂದೇ ತಿಂಗಳಲ್ಲಿ ಎರಡನೇ ಬಾರಿ ಏರಿಕೆಉತ್ತರ ಪ್ರದೇಶ, ಉತ್ತರಾಖಂಡ ರಾಜ್ಯಸಭಾ ಚುನಾವಣೆ ಹಾಗೂ ಬಂಗಾಳ ಉಪಚುನಾವಣೆ ಘೋಷಣೆ ಸಚಿವ ಶಿವಲಿಂಗೇಗೌಡರ ವಿವಾದಾತ್ಮಕ ಹೇಳಿಕೆ: ಲೋಕಾಯುಕ್ತಕ್ಕೆ ದೂರು ದಾಖಲು, ರಾಜೀನಾಮೆಗೆ ಆಗ್ರಹಬೆಂಗಳೂರು ವಿಮಾನ ನಿಲ್ದಾಣದಲ್ಲಿ 28 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನ ವಶ, 6 ಜನರ ಬಂಧನ