E-PAPER
24 Nov 2026, 02:51:54 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರ ದಾಳಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ದೊಡ್ಡ​ ಶಾಕ್ ನೀಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು
, ಮಂಗಳೂರು ಸೇರಿದಂತೆ 4 ಕಡೆಗಳ 25 ಸ್ಥಳಗಳಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು ವಶ ಪಡಿಸಿಕೊಂಡು ಅಕ್ರಮ ಆಸ್ತಿ ಸಂಪಾದಿಸಿವರಿಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದ್ದಾರೆ.

ದಾಳಿ ವೇಳೆ, ಅಪಾರ ಪ್ರಮಾಣದ ಚಿನ್ನಾಭರಣ ಕಂಡು ಲೋಕಾಯುಕ್ತ ಅಧಿಕಾರಿಗಳೇ ಬೆಚ್ಚಿಬೀಳುವಂತಾಗಿದೆ.
ಬೆಂಗಳೂರಿನಲ್ಲಿ ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ರೇಡ್ ವೇಳೆ ಕಂಡುಬಂದ ಅಪಾರ ಮೌಲ್ಯದ ಆಸ್ತಿ ದಾಖಲೆಗಳು
, ಚಿನ್ನಾಭರಣ ನೋಡಿ ಅಧಿಕಾರಿಗಳೇ ಶಾಕ್​ ಆಗಿದ್ದಾರೆ.

ಬನಶಂಕರಿಯ 3ನೇ ಹಂತದ ವಿಶ್ವೇಶ್ವರಯ್ಯ ರಸ್ತೆಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ ಅಧಿಕಾರಿಗಳಿಗೆ, ಬೆಚ್ಚಿಬೀಳುವಷ್ಟು ಸಂಪತ್ತು ದೊರೆತಿದೆ.
ದಾಳಿ ವೇಳೆ ತಿಪ್ಪೇಸ್ವಾಮಿ ಮನೆಯಲ್ಲಿ ಅಪಾರ ಮೌಲ್ಯದ ಚಿನ್ನಾಭರಣ ಕಂಡು ಲೋಕಾಯುಕ್ತ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. 28ಕ್ಕೂ ಹೆಚ್ಚು ಜೊತೆ ಓಲೆ
, 23 ಕ್ಕೂ ಹೆಚ್ಚು ಚಿನ್ನದ ಸರ, ಮುತ್ತಿನ ಹಾರ ಪತ್ತೆಯಾಗಿದೆ. ಇದಿಷ್ಟೇ ಅಲ್ಲ, ಕೋಟಿ ರೂಪಾಯಿ ಮೌಲ್ಯದ ಚಿನ್ನದ ನೆಕ್ಲೆಸ್​, ಚಿನ್ನದ ಉಂಗುರವೂ ಪತ್ತೆಯಾಗಿದೆ.

ಕೆಜಿಗಟ್ಟಲೆ ಬೆಳ್ಳಿ, ಚಿನ್ನಾಭರಣ-
ಕೇವಲ ಬಂಗಾರ ಮಾತ್ರ ಅಲ್ಲದೆ
, 500, 200 ರೂ. ಮುಖ ಬೆಲೆಯ 8 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. 8 ಕ್ಕೂ ಹೆಚ್ಚು ದುಬಾರಿ ಬೆಲೆಯ ಬ್ರಾಂಡೆಡ್​ ವಾಚ್​ಗಳು ಸಿಕ್ಕಿವೆ. ಇನ್ನು ಕೆಜಿಗಟ್ಟಲೆಯ ಬೆಳ್ಳಿ ಸಾಮಾಗ್ರಿಗಳು ಕೂಡ ಪತ್ತೆಯಾಗಿದೆ.

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಎಸ್​ಪಿ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯ ವೇಳೆ ಅಬಕಾರಿ ಇಲಾಖೆ ಎಸ್​ಪಿ ಮೋಹನ್ ಮನೆ ಮೇಲೆ ರೇಡ್ ಮಾಡಲಾಗಿದೆ. ಮಹತ್ವದ ದಾಖಲೆಗಳನ್ನ ಪರಿಶೀಲನೆ ಮಾಡಲಾಗಿದೆ.

ಗಣಿ ಅಧಿಕಾರಿ ಮನೆ ಮೇಲೆ ರೇಡ್-
ಲೋಕಾಯುಕ್ತ ಅಧಿಕಾರಿಗಳು ಮಂಗಳೂರಿನಲ್ಲಿ ಗಣಿ ಅಧಿಕಾರಿ ಕಚೇರಿ, ಮನೆ ಮೇಲೂ ದಾಳಿ ಮಾಡಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರಿನ ವೆಲೆನ್ಸಿಯಾದ ಮನೆ
, ಕಚೇರಿಯಲ್ಲಿ ದಾಖಲೆಗಳನ್ನ ಪರಿಶೀಲನೆ ಮಾಡಿದ್ದಾರೆ. ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದ ಕೃಷ್ಣವೇಣಿ, 2 ತಿಂಗಳ ಹಿಂದಷ್ಟೇ ಮಂಗಳೂರಿಗೆ ಬಂದಿದ್ದರು.

ಕೃಷ್ಣವೇಣಿಗೆ ಸಂಬಂಧಪಟ್ಟ ಮತ್ತಷ್ಟು ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿರುವ ಮನೆ, ಅಪಾರ್ಟ್​ಮೆಂಟ್​, ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಇನ್ನು ಯಲಹಂಕದಲ್ಲಿರುವ ಅಪಾರ್ಟ್​ಮೆಂಟ್​ನಲ್ಲೂ ಪರಿಶೀಲನೆ ಮಾಡಲಾಯಿತು.

ಕಾವೇರಿ ನಿಗಮದ ಎಂಡಿ ಮನೆ ಮೇಲೆ ದಾಳಿ-
ಮಂಡ್ಯ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್​ ನಿವಾಸಗಳ ಮೇಲೆ ದಾಳಿ ಮಾಡಲಾಗಿದೆ. ಮಳವಳ್ಳಿಯಲ್ಲಿರೋ ನಿವಾಸದಲ್ಲಿ ದಾಖಲೆಗಳನ್ನ ಪರಿಶೀಲನೆ ಮಾಡಲಾಗಿದೆ.


ಎಂಡಿ‌ಮಹೇಶ್, ಪತ್ನಿಗೆ ಸೇರಿದ ಪೆಟ್ರೋಲ್ ಬಂಕ್​ ಮೇಲೂ ರೇಡ್​ ಮಾಡಲಾಯಿತು. ಆದಾಯಕ್ಕೂ ಮೀರಿ ಆಸ್ತಿಗಳಿಕೆ ದೂರು ಹಿನ್ನೆಲೆ ಮಹತ್ವದ ದಾಖಲೆಗಾಗಿ ಹುಡುಕಾಡಿದ್ದಾರೆ.ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ದೂರು ಬಂದ ಹಿನ್ನೆಲೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಬಿಸಿ ಮುಟ್ಟಿಸಿದೆ. ದಾಳಿ ವೇಳೆ ಅಪಾರ ಮೌಲ್ಯದ ಚಿನ್ನಾಭರಣ, ಆಸ್ತಿ ದಾಖಲೆ ಪತ್ತೆಯಾಗಿದೆ. ಅದರಲ್ಲೂ ಟೌನ್​ ಪ್ಲಾನಿಂಗ್​​ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲಿ ಅಪಾರ ಪ್ರಮಾಣ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!