Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

 ಜಿಲ್ಲೆಯಲ್ಲಿ ಫೆ.24 ಮತ್ತು 25ರಂದು ಲೋಕಾಯುಕ್ತರ ಪ್ರವಾಸ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

    ಲೋಕಾಯುಕ್ತ ಪೊಲೀಸ್ ನಿರೀಕ್ಷಕರು-1 ಫೆ.24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಮೊಳಕಾಲ್ಮೂರು ಪಟ್ಟನ ಪಂಚಾಯಿತಿ ಕಚೇರಿಯಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2.30 ರಿಂದ ಸಂಜೆ 05.30 ರವರೆಗೆ ಚಳ್ಳಕೆರೆ ನಗರಸಭೆ ಕಚೇರಿಯಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸುವರು.

  ಲೋಕಾಯುಕ್ತ ಪೊಲೀಸ್  ಉಪಾಧೀಕ್ಷಕರು ಫೆ.25ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ ಪುರಸಭೆ, ಮಧ್ಯಾಹ್ನ 2.30 ರಿಂದ ಸಂಜೆ 05.30 ರವರೆಗೆ ಹೊಳಲ್ಕೆರೆ ಪುರಸಭೆ ಕಚೇರಿಯಲ್ಲಿ ಉಪಸ್ಥಿತರಿರುವರು.

ಪೊಲೀಸ್ ನಿರೀಕ್ಷಕರು-2  ಅದೇ ದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಚಿತ್ರದುರ್ಗ ನಗರಸಭೆ ಕಚೇರಿಯಲ್ಲಿ ಉಪಸ್ಥಿತರಿರುವರು. ಪೊಲೀಸ್ ನಿರೀಕ್ಷಕರು-3 ಅದೇ ದಿನ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30ರವರೆಗೆ ಹಿರಿಯೂರು ನಗರಸಭೆಯಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ದೂರು, ಅಹವಾಲುಗಳನ್ನು ಸ್ವೀಕರಿಸುವರು.
ಸಾರ್ವಜನಿಕರು ತಮ್ಮ ದೂರು, ಅಹವಾಲುಗಳನ್ನು ನಿಗದಿತ ನಮೂನೆ 01 ಮತ್ತು 02ರಲ್ಲಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು