Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮಡಿವಾಳ ಮಾಚಿ ದೇವರ ಜಯಂತೋತ್ಸವ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ನಡೆಯಿತು.


ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ತಹಸೀಲ್ದಾರ್‌ ಮಲ್ಲಪ್ಪ.ಕೆ.ಯರಗೋಳ ಮಾತನಾಡಿ, ಕನ್ನಡ ಸಾಹಿತ್ಯ ಪರಂಪರೆಯಲ್ಲಿ 12 ನೇ ಶತಮಾನ ಮಹತ್ವದ ಪಾತ್ರ ವಹಿಸಿದ್ದು, ವಚನಕಾರರ ಕೊಡುಗೆ ಅಪಾರವಾಗಿದೆ. ಬಸವಣ್ಣನವರು ತಮ್ಮ ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿ ಸಮಾಜದ ಅನಿಷ್ಟಗಳನ್ನು ತೊಡೆಯುವ ಪ್ರಯತ್ನ ಮಾಡಿದರು. ಇವರ ಹಾದಿಯಲ್ಲಿಯೇ ಅನೇಕ ಶರಣರು ತಮ್ಮ ಕಾಯಕ ಹಾಗೂ ವಚನಗಳ ಮೂಲಕ ಸಮಾಜದಲ್ಲಿದ್ದ ವೃತ್ತಿ ಆಧಾರಿತ ಜಾತಿ ವ್ಯವಸ್ಥೆ, ಅಸಮಾನತೆ, ಮೇಲು ಕೀಳುಗಳನ್ನು ತೊಡೆದುಹಾಕಲು ಪ್ರಯತ್ನಿಸಿದರು.  ಇಂತಹ ಕಾಲಘಟ್ಟದಲ್ಲಿ  ಜನಿಸಿದ್ದ ಮಡಿವಾಳ ಮಾಚಿದೇವರು ಮಹಾ ಶರಣರಾಗಿ ಅಗ್ರಗಣ್ಯರಾಗಿದ್ದರು.

ವಚನಕಾರರಾಗಿ ಸಮಾಜದಲ್ಲಿನ ಅಸಮಾನತೆ, ಜಾತಿ ಬೇಧ, ಅಂತಕಲಹ ಮುಂತಾದ ಸಾಮಾಜಿಕ ಪಿಡುಗು ನಿವಾರಿಸಲು ಶ್ರಮಿಸಿದ ಮಹಾ ಮಾನವತಾವಾದಿಯಾಗಿದ್ದರು. ಇಂತಹ ಮಹಾಮಹಿಮರ ತತ್ವಾದರ್ಶಗಳು ಈ ಸಮಾಜಕ್ಕೆ ದಾರಿದೀಪವಾಗಬೇಕಿದ್ದು, ಅವರ ವಿಚಾರಧಾರೆಗಳು ಪ್ರಚಾರವಾದರೆ, ಜಯಂತಿಗಳ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದರು.

ಸಮುದಾಯಕ್ಕೆ ನಿವೇಶನ ಹಾಗೂ ನಗರದ ಯಾವುದಾದರೂ ರಸ್ತೆಗೆ ನಾಮಕರಣ ಮಾಡುವ ಕುರಿತಂತೆ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದರು.

ತಾಲೂಕು ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಆರ್.ಮುನಿಶಾಮಯ್ಯ ಮಾತನಾಡಿ, ಮಡಿವಾಳ ಮಾಚಿದೇವರು ಶರಣರಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ್ದರು. ಪವಾಡ ಪುರುಷರಾಗಿದ್ದರು.

ಶರಣರ ಮಡಿಬಟ್ಟಗಳನ್ನು ಹೊರತಾಗಿ ಬೇರೆಯವರ ಮಡಿ ಬಟ್ಟೆಗಳನ್ನು ತೊಳೆಯುವುದಿಲ್ಲ ಎನ್ನುವ ನಿಲುವು ಹೊಂದಿ ತಮ್ಮ ತತ್ವ ಸಿದ್ದಾಂತಗಳಿಗೆ ಬದ್ದರಾಗಿದ್ದರು.  ಮಡಿವಾಳ  ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿದೆ. ಜಾತಿ ವಿಂಗಡನೆಯಲ್ಲಿ ನಮ್ಮನ್ನು ಪರಿಶಿಷ್ಟವರ್ಗಕ್ಕೆ ಸೇರಿಸುವಲ್ಲಿ ತಾರತಮ್ಯವಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಬೇಕು, ಮಡಿವಾಳ ಸಮುದಾಯಕ್ಕೆ ಸಮುದಾಯ ಭವನ ಹಾಗೂ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿ.ಎನ್.ಶೇಷಾದ್ರಿ ಮಡಿವಾಳರ ಮಾಚಿದೇವರ ಸಂಘದ ತಾಲ್ಲೂಕು ಅಧ್ಯಕ್ಷ ಶಂಕರಪ್ಪ ಮುಖಂಡರಾದ ರಂಗಸ್ವಾಮಿ, ಸೇರಿದಂತೆ ಮಡಿವಾಳ ಸಮುದಾಯದ ಮುಖಂಡರು ಭಾಗವಹಿಸಿದ್ದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು